ಶಿಕ್ಷಣ ಧರ್ಮ ದಂಗಲ್: ಹಿಜಾಬ್ ನಂತರ ಗಣೇಶ ಹಬ್ಬದ ಹೆಸರಿನಲ್ಲಿ ಹೊಸ ಬೇಡಿಕೆ ಮುಂದಿಟ್ಟ ವಕ್ಫ್ ಬೋರ್ಡ್; ಸಚಿವರಿಂದ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೊಂದು ಶಿಕ್ಷಣ ಧರ್ಮ ದಂಗಲ್ ಎದ್ದಿದೆ. ಜಿಜಾಬ್ ನಂತರ ಇದೀಗ ಶಾಲೆಯಲ್ಲಿ ಇಸ್ಲಾಮಿಕ್ ಧಾರ್ಮಿಕ ಅವಕಾಶ ನೀಡಬೇಕು ಎಂದು ವಕ್ಫ್ ಬೋರ್ಡ್ ಶಿಕ್ಷಣ ಇಲಾಖೆ ಮುಂದೆ ಹೊಡ ಬೇಡಿಕೆ ಇಟ್ಟಿದೆ.

ಶಿಕ್ಷಣ ಧರ್ಮ ದಂಗಲ್: ಹಿಜಾಬ್ ನಂತರ ಗಣೇಶ ಹಬ್ಬದ ಹೆಸರಿನಲ್ಲಿ ಹೊಸ ಬೇಡಿಕೆ ಮುಂದಿಟ್ಟ ವಕ್ಫ್ ಬೋರ್ಡ್; ಸಚಿವರಿಂದ ಸ್ಪಷ್ಟನೆ
ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್
Follow us
TV9 Web
| Updated By: Rakesh Nayak Manchi

Updated on:Aug 18, 2022 | 1:27 PM

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಶಿಕ್ಷಣ ಧರ್ಮ ದಂಗಲ್ ಎದ್ದಿದೆ. ಜಿಜಾಬ್ ನಂತರ ಇದೀಗ ಶಾಲೆಯಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಅವಕಾಶ ನೀಡುವಂತೆ ವಕ್ಫ್ ಬೋರ್ಡ್ ಆಗ್ರಹ ಮಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅನುಮತಿ ನೀಡಿಲ್ಲ, ಅವಕಾಶ ನೀಡುವುದು ಕೂಡ ಇಲ್ಲ.ಯಾವುದೇ ಕಾರಣಕ್ಕೂ ಯಾವುದೇ ಧರ್ಮದ ಆಚರಣೆಗೆ ಸರ್ಕಾರ ಅವಕಾಶ ನೀಡುವುದಿಲ್ಲ. ವಕ್ಫ್​​​ ಬೋರ್ಡ್ ಬೇಡಿಕೆಗಳನ್ನು ಸರ್ಕಾರ ಪುರಸ್ಕರಿಸುವುದಿಲ್ಲ. ಶಾಲೆಗಳಲ್ಲಿ ಗಣಪತಿ ಹಬ್ಬ ಆಚರಣೆ ಸರ್ಕಾರ ಜಾರಿಗೆ ತಂದಿದ್ದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ಶಾಲೆಗಳಲ್ಲಿ ಗಣಪತಿ ಮೂರ್ತಿ ಇಡಲಾಗುತ್ತಿದೆ ಎಂದರು.

ವಕ್ಫ್ ಬೋರ್ಡ್ ಇಟ್ಟ ಬೇಡಿಕೆಗಳೇನು?

ಗಣೇಶ ಹಬ್ಬದ ಹೆಸರಿನಲ್ಲಿ ಶಿಕ್ಷಣ ಇಲಾಖೆ ಮುಂದೆ ವಕ್ಫ್ ಬೋರ್ಡ್ ಹೊಸ ಬೇಡಿಕೆ ಇಡುವ ಮೂಲಕ ಮತ್ತೊಂದು ಧರ್ಮ ದಂಗಲ್ ಉಂಟಾಗಿದೆ. ಶಾಲೆಗಳಲ್ಲಿ ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು, ನಮ್ಮ ಧಾರ್ಮಿಕ ಹಬ್ಬಗಳ ಆಚರಣೆಗೂ ಅವಕಾಶ ಮಾಡಿಕೊಡಬೇಕು, ಎಲ್ಲಾ ಧರ್ಮದ ಮಕ್ಕಳಿಗೂ ಸಮಾನ ಅವಕಾಶ ಸಿಗಬೇಕು, ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದ ಆಚರಣೆಗೂ ಅವಕಾಶ ಕೊಡಬೇಕು, ಪ್ರತಿ ಮಕ್ಕಳಿಗೂ ಧರ್ಮದ ಕುರಿತು ಅರಿವು ಮೂಡಿಸಬೇಕು, ನೈತಿಕ ಶಿಕ್ಷಣ ಅಡಿ ಧಾರ್ಮಿಕ ಪಾಠ ಮಕ್ಕಳಿಗೆ ನೀಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಾ ಅದಿ ಅವರು ಬೇಡಿಕೆ ಇಟ್ಟಿದ್ದಾರೆ.

ಶಿಕ್ಷಣ ಸಚಿವರ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. ಹಿಜಾಬ್ ವಿವಾದ ಆದಾಗಲೂ ನಾವು ಒಂದು ವಿಷಯ ಸ್ಪಷ್ಟ ಪಡಿಸಿದ್ದೇವೆ. ಧಾರ್ಮಿಕ‌ ವಿಚಾರಗಳನ್ನು ತಿಳಿಸುವ ಮೂಲಕ ಅಪನಂಬಿಕೆ ಹೋಗಲಾಡಿಸಬೇಕು. ಎಲ್ಲಾ ಧಾರ್ಮಿಕ ಆಚರಣೆಗಳಿಗೂ ಅವಕಾಶ ಮಾಡಿಕೊಡಬೇಕು. ಗಣೇಶೋತ್ಸವಕ್ಕೆ ಅವಕಾಶ ಕೊಟ್ಟ ರೀತಿಯಲ್ಲೇ ಇಸ್ಲಾಮಿಕ್ ಧಾರ್ಮಿಕ ಅವಕಾಶಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Thu, 18 August 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ