AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಶಾಲೆಗಳಲ್ಲೂ ನ.1ರಂದೇ ಕನ್ನಡ ರಾಜ್ಯೋತ್ಸವ ಕಡ್ಡಾಯ: ರಜೆ ಇದ್ರೂ ಆಚರಣೆ ತಪ್ಪಿಸುವಂತಿಲ್ಲ

1956ರ ನವೆಂಬರ್ 1 ರಂದು ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು, ಇದನ್ನು 1973ರಲ್ಲಿ 'ಕರ್ನಾಟಕ' ಎಂದು ಮರುನಾಮಕರಣ ಮಾಡಲಾಯಿತು. ಈ ದಿನವನ್ನು ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ, ಇದು ಕರ್ನಾಟಕ ಏಕೀಕರಣ, ಭಾಷೆ, ಸಂಸ್ಕೃತಿಯನ್ನು ಗೌರವಿಸುತ್ತದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೇ ಕಟ್ಟುನಿಟ್ಟಿನ ಸೂಚನೆಗಳನ್ನೂ ಸಹ ನೀಡಿದೆ.

ಎಲ್ಲಾ ಶಾಲೆಗಳಲ್ಲೂ ನ.1ರಂದೇ ಕನ್ನಡ ರಾಜ್ಯೋತ್ಸವ ಕಡ್ಡಾಯ: ರಜೆ ಇದ್ರೂ ಆಚರಣೆ ತಪ್ಪಿಸುವಂತಿಲ್ಲ
Kannada Rajyotsava
ವಿನಯ್​ ಕಾಶಪ್ಪನವರ್​
| Edited By: |

Updated on: Oct 18, 2026 | 8:28 PM

Share

ಬೆಂಗಳೂರು, (ಅಕ್ಟೋಬರ್ 18): ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲೇಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಜೆ ನೆಪದಲ್ಲಿ ಆಚರಣೆ ತಪ್ಪಿಸುವಂತಿಲ್ಲ. ವಾರದ ರಜೆಯ ಕಾರಣಕ್ಕೆ ಆಚರಣೆಯಿಂದ ವಿನಾಯಿತಿ ಪಡೆಯಲು ಅವಕಾಶವಿಲ್ಲ ಎಂದು ಖಡಕ್ ಸೂಚನೆ ನೀಡಿದೆ. ಅಲ್ಲದೇ ಕನ್ನಡದ ಹಬ್ಬ ಆಚರಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ನ.1ರಂದೇ ಕನ್ನಡ ರಾಜ್ಯೋತ್ಸವ ಆಚರಣೆ

ನಾಡಹಬ್ಬವಾದ ಕನ್ನಡ ರಾಜ್ಯೋತ್ಸವವನ್ನು ಪ್ರತಿವರ್ಷ ನವೆಂಬರ್ 1ರಂದು ಆಚರಿಸಲಾಗುತ್ತದೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವ ಈ ದಿನವನ್ನು ಶಾಲೆಗಳಲ್ಲಿ ಅರ್ಥಪೂರ್ಣವಾಗಿ ಆಚರಿಸುವಂತೆ ಇಲಾಖೆ ಸೂಚಿಸಿದೆ.  ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳು ಈ ಸೂಚನೆಯನ್ನು ಪಾಲಿಸಬೇಕು. ರಾಷ್ಟ್ರೀಯ ಹಬ್ಬಗಳು, ಕರ್ನಾಟಕ ರಾಜ್ಯೋತ್ಸವ ಹಾಗೂ ಪ್ರಮುಖ ಜಯಂತಿಗಳನ್ನು ನಿಗದಿತ ದಿನಗಳಂದೇ ನಿಯಮಾನುಸಾರ ಆಚರಿಸಬೇಕು ಎಂದು ಇಲಾಖೆ ತಿಳಿಸಿದೆ. ಈ ಬಾರಿ ರಾಜ್ಯೋತ್ಸವ ಭಾನುವಾರ ಬಂದಿರುವುದರಿಂದ ಶಾಲೆಗಳಿಗೆ ಪ್ರತ್ಯೇಕ ವಿನಾಯಿತಿ ನೀಡಲಾಗಿಲ್ಲ. ಹೀಗಾಗಿ ನವೆಂಬರ್ 1ರಂದೇ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗುತ್ತದೆ.

ಕನ್ನಡ ರಾಜ್ಯೋತ್ಸವವು ಕೇವಲ ಆಚರಣೆಯ ದಿನವಲ್ಲ, ಕನ್ನಡ ಭಾಷೆ, ನೆಲ ಮತ್ತು ಸಂಸ್ಕೃತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಂದರ್ಭವೂ ಹೌದು. ಈ ಹಿನ್ನೆಲೆಯಲ್ಲಿ ರಜಾದಿನವಾಗಿದ್ದರೂ ರಾಜ್ಯೋತ್ಸವ ಆಚರಣೆಯನ್ನು ತಪ್ಪಿಸಬಾರದು ಎಂಬ ನಿಲುವನ್ನು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಖಾಸಗಿ ಶಾಲೆಗಳಿಂದ ವಿಶೇಷ ಆಚರಣೆಗೆ ನಿರ್ಧಾರ

ಈ ಆದೇಶ ಬೆನ್ನಲ್ಲೇ ಖಾಸಗಿ, ಅನುದಾನಿತ ಶಾಲೆಗಳು, ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಮುಂದಾಗಿದ್ದು, ಕನ್ನಡ ರಾಜ್ಯೋತ್ಸವದ ವಿಶೇಷ ಉಡುಗೆ ಧರಿಸಲು ಮಕ್ಕಳಿಗೆ ಸೂಚನೆ ನೀಡಲಾಗಿದೆ. ಹೌದು..ನವೆಂಬರ್‌ 1ರಿಂದ ಒಂದು ವಾರ ಕರ್ನಾಟಕದ ಸಂಸ್ಕೃತಿ ಬಿಂಬಿಸುವ ಉಡುಗೆ ತೊಡಲು ಸೂಚನೆ ನೀಡಲಾಗಿದೆ. ಕರ್ನಾಟಕದ ಸಿಹಿ ತಿಂಡಿ, ತಿನಿಸು ಹಂಚಿ ಒಂದು ವಾರಗಳ ಕಾಲ ರಾಜ್ಯೋತ್ಸವ ಆಚರಣೆಗೆ ಮುಂದಾಗಿದ್ದು, ಶಾಲೆಗಳ ಸೂಚನೆ ಪಾಲಿಸುವಂತೆ ಪೋಷಕರಿಗೂ ಮನವಿ ಮಾಡಿವೆ. ಈ ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ ಪರಿಚಯಿಸಲು ಖಾಸಗಿ ಶಾಲೆಗಳು ಮಹತ್ವದ ಹೆಜ್ಜೆ ಇಟ್ಟಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ