AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮೌಲ್ಯಮಾಪನಕ್ಕೂ AI ತಂತ್ರಜ್ಞಾನ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಕರೆಕ್ಷನ್‌!

ಇತ್ತೀಚಿನ ದಿನಗಳಲ್ಲಿ ಎಲ್ಲಡೆ ಸಕಲ ಕ್ಷೇತ್ರಗಳಲ್ಲಿಯೂ AI ಟೆಕ್ನಾಲಜಿ ಸದ್ದು ಮಾಡುತ್ತಿದ್ದು, ಕೃತಕ ಬುದ್ಧಿಮತ್ತಯ ಬಳಕೆ ಈಗ ಎಲ್ಲೆಲ್ಲೂ ಆವರಿಸಿದೆ. ಶಾಲೆಗಳ ಹಾಜರಾತಿಗೆ, ರೋಗ ಪತ್ತೆಗೆ, ಪರೀಕ್ಷೆಯಲ್ಲಿ ನಕಲು ಪತ್ತೆ ಹಚ್ಚಲು, ಟ್ರಾಫಿಕ್ ನಿಯಂತ್ರಣಕ್ಕೆ ಎಐ ತಂತ್ರಜ್ಞಾನ ಬಳಸಲಾಗುತ್ತಿದೆ. ಇದೀಗ ಶಿಕ್ಷಣ ಕ್ಷೇತ್ರದ ಮಕ್ಕಳ ಉತ್ತರ ಪತ್ರಿಕಗಳ ಮೌಲ್ಯಮಾಪನಕ್ಕೂ AI ಲಗ್ಗೆ ಇಟ್ಟಿದ್ದು, ಒಂದೇ ಬಾರಿಗೆ ಬರೋಬ್ಬರಿ 15 ಲಕ್ಷ ಉತ್ತರ ಪತ್ರಿಕೆಗಳನ್ನ ಕರೆಕ್ಷನ್‌ ಮಾಡುತ್ತದೆ.

ಪರೀಕ್ಷೆ ಮೌಲ್ಯಮಾಪನಕ್ಕೂ AI ತಂತ್ರಜ್ಞಾನ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಕರೆಕ್ಷನ್‌!
AI
Vinay Kashappanavar
| Edited By: |

Updated on: Jul 05, 2026 | 8:16 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ವಿದ್ಯಾರ್ಥಿಗಳ ಪರೀಕ್ಷೆ ಮೌಲ್ಯಮಾಪನಕ್ಕೂ AI ತಂತ್ರಜ್ಞಾನ
  • ವಿದ್ಯಾರ್ಥಿಗಳ ಪಠ್ಯ ಆಧಾರಿತ ಪರೀಕ್ಷೆಗಳ ಮೌಲ್ಯಮಾಪನಕ್ಕೆ ಎಐ ಬಳಸಲು ಶಿಕ್ಷಣ ಇಲಾಖೆ ಸಿದ್ಧತೆ
  • ಒಂದೇ ಬಾರಿಗೆ ಬರೋಬ್ಬರಿ 15 ಲಕ್ಷ ಉತ್ತರ ಪತ್ರಿಕೆ ಕರೆಕ್ಷನ್‌ ಮಾಡಲಿರುವ AI

ಬೆಂಗಳೂರು, (ಜುಲೈ 05): ಕರ್ನಾಟಕದ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ತಂತ್ರಜ್ಞಾನ ಆವರಿಸಿದ್ದು, ಇದರ ಮುಂದುವರೆದ ಭಾಗವಾಗಿ ಇದೀಗ ಸರ್ಕಾರಿ ಶಾಲೆಗಳಲ್ಲಿ ಉತ್ತರ ಪ್ರತಿಕೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭ ಹಾಗೂ ವೇಗಗೊಳಿಸಲು ಎಐ (Artificial Intelligence (AI)) ತಂತ್ರಜ್ಞಾನ ಬಳಕೆ ಮಾಡಲು ಶಿಕ್ಷಣ ಇಲಾಖೆ (Karnataka Education Department) ಸಿದ್ದತೆ ನಡೆಸಿದೆ. ಹೌದು… ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕ್ಷೇತ್ರ ಮತ್ತೊಂದು ಡಿಜಿಟಲ್ ಹೆಜ್ಜೆ ಇಡುತ್ತಿದೆ. ಸ್ಮಾರ್ಟ್ ಕ್ಲಾಸ್‌, ಆನ್‌ಲೈನ್‌ ಬೋಧನೆಯ ನಂತರ ಇದೀಗ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವೂ ಎಐ ಆಧಾರಿತವಾಗಲಿದೆ.

ಪ್ರಾಥಮಿಕ ಹಂತದಲ್ಲಿ 8ರಿಂದ 12ನೇ ತರಗತಿಯ ಪರೀಕ್ಷೆಗಳಲ್ಲಿ ಈ ವ್ಯವಸ್ಥೆ ಅಳವಡಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದುವರೆಗೆ ಪರೀಕ್ಷೆ ಮುಗಿದ ಬಳಿಕ ಸಾವಿರಾರು ಉತ್ತರ ಪತ್ರಿಕೆಗಳನ್ನು ತಿದ್ದುವುದು, ಅಂಕ ದಾಖಲಿಸುವುದು ಹಾಗೂ ದತ್ತಾಂಶ ಸಂಗ್ರಹಿಸುವ ಕೆಲಸ ಶಿಕ್ಷಕರಿಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿತ್ತು. ಈ ಕಾರಣದಿಂದ ತರಗತಿ ಬೋಧನೆಯ ಮೇಲೂ ಪರಿಣಾಮ ಬೀಳುತ್ತಿತ್ತು. ಇದೀಗ ಆ ಹೊರೆ ಕಡಿಮೆ ಮಾಡಲು ಎಐ ತಂತ್ರಜ್ಞಾನ ನೆರವಾಗಲಿದೆ ಅಂತಿದ್ದಾರೆ ಆಯುಕ್ತರು.

ಇದನ್ನೂ ಓದಿ: SSLC ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್: ಶೈಕ್ಷಣಿಕ ವರ್ಷದ ಆರಂಭದಲ್ಲೇ ಗೊಂದಲ ತಪ್ಪಿಸಲು ಸಿದ್ಧತೆ

ಎಐಯಿಂದ ಉತ್ತರ ಪತ್ರಿಕೆ ಕರೆಕ್ಷನ್ ಹೇಗೆ?

ಶಿಕ್ಷಕರು ಉತ್ತರ ಪತ್ರಿಕೆಗಳನ್ನು ಮೊಬೈಲ್ ಅಥವಾ ಸ್ಕ್ಯಾನರ್ ಮೂಲಕ ಡಿಜಿಟಲ್ ರೂಪದಲ್ಲಿ ಅಪ್‌ಲೋಡ್ ಮಾಡಲಿದ್ದಾರೆ. ನಂತರ ಎಐ ಉತ್ತರಗಳನ್ನು ವಿಶ್ಲೇಷಿಸಿ ಅಂಕಗಳನ್ನು ಸೂಚಿಸುತ್ತದೆ. ಜೊತೆಗೆ ವಿದ್ಯಾರ್ಥಿಗಳ ದತ್ತಾಂಶವನ್ನು ಸ್ವಯಂಚಾಲಿತವಾಗಿ ಸಂಗ್ರಹಿಸುತ್ತದೆ. ಅಂತಿಮವಾಗಿ ಅಂಕಗಳ ನಿಖರತೆಯನ್ನು ಶಿಕ್ಷಕರೇ ಪರಿಶೀಲಿಸಿ ದೃಢೀಕರಿಸಲಿದ್ದಾರೆ. ಈ AI ವ್ಯವಸ್ಥೆ ಒಂದೇ ಬಾರಿಗೆ ಸುಮಾರು 15 ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವ ಸಾಮರ್ಥ್ಯ ಹೊಂದಿದ್ದು. ಈ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಜಾರಿಗೊಳಿಸುವ ಗುರಿಯನ್ನ ಶಿಕ್ಷಣ ಇಲಾಖೆ ಹೊಂದಿದೆ.

ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕ್ರ ಮೌಲ್ಯಮಾಪನ!

ಪ್ರತಿ ಪರೀಕ್ಷೆ ಬಳಿಕ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಡೇಟಾ ಸಂಗ್ರಹಕ್ಕೆ ಶಿಕ್ಷಕರಿಗೆ ಸಾಕಷ್ಟು ಸಮಯ ಬೇಕಾಗುತ್ತಿದ್ದು, ಇದರಿಂದಾಗಿ ಈ ಸಮಯದಲ್ಲಿ ತರಗತಿಗಳ ಪಾಠ-ಪ್ರವಚನಕ್ಕೆ ಅಡೆತಡೆ ಎದುರಾಗದಂತೆ ಶೀಘ್ರ ಮೌಲ್ಯಮಾಪನ ನಡೆಸಲು ಎಐ ತಂತ್ರಜ್ಞಾನ ನೆರವಾಗಲಿದೆ. ಐಐಟಿ ಧಾರವಾಡದ ಮೂಲಕ ಮೌಲ್ಯಮಾಪನಕ್ಕೆ ಎಐ ಆಧಾರಿತ ತಂತ್ರಜ್ಞಾನ ಸಿದ್ಧಪಡಿಸುತ್ತಿರುವ ಶಿಕ್ಷಣ ಇಲಾಖೆ, ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನು ಜಾರಿಗೆ ತರಲು ತಯಾರಿ ನಡೆಸಿದೆ.ಎಐ ತಂತ್ರಜ್ಞಾನದ ಮೂಲಕ ಒಂದೇ ಬಾರಿಗೆ ಸುಮಾರು 15 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವ ಸಾಮರ್ಥ್ಯವಿದೆ.

ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಕೆಲಸಕ್ಕೂ ಎಐ ನೆರವಾಗಲಿದ್ದು. ಇದರಿಂದ ಮೌಲ್ಯಮಾಪನದಲ್ಲಿ ಪಾರದರ್ಶಕತೆ, ವೇಗ ಹಾಗೂ ನಿಖರತೆ ಹೆಚ್ಚುವ ನಿರೀಕ್ಷೆ ಶಿಕ್ಷಣ ಇಲಾಖೆಯದ್ದಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು. ಆದರೆ ಎಐ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಉತ್ತರ ಪತ್ರಿಕೆಗಳಿಗೆ ಎಐ ನೀಡುವ ಅಂಕಗಳನ್ನು ಶಿಕ್ಷಕರೇ ಪರಿಶೀಲಿಸಿ ಅಂತಿಮಗೊಳಿಸಲಿದ್ದಾರೆ. ಹೀಗಾಗಿ ತಂತ್ರಜ್ಞಾನ ಮತ್ತು ಶಿಕ್ಷಕರ ಅನುಭವ ಎರಡನ್ನೂ ಸಂಯೋಜಿಸಿ ಮೌಲ್ಯಮಾಪನ ಪ್ರಕ್ರಿಯೆಯನ್ನು ಮತ್ತಷ್ಟು ವೇಗವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವ ಗುರಿಯನ್ನು ಶಿಕ್ಷಣ ಇಲಾಖೆ ಹೊಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!