AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ವರ್ಗಾವಣೆಗೆ ಕರಡು ನಿಯಮ ಪ್ರಕಟ: ಆಕ್ಷೇಪಣೆಗೆ 15 ದಿನ ಅವಕಾಶ

ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ 2022 ಸಂಬಂಧ ಶಿಕ್ಷಣ ಇಲಾಖೆ ಕರಡು ನಿಯಮ ಪ್ರಕಟಗೊಳಿಸಿದ್ದು,ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಶಿಕ್ಷಕರ ವರ್ಗಾವಣೆಗೆ ಕರಡು ನಿಯಮ ಪ್ರಕಟ:  ಆಕ್ಷೇಪಣೆಗೆ 15 ದಿನ ಅವಕಾಶ
ವಿಧಾನ ಸೌಧ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 16, 2022 | 8:47 PM

Share

ಬೆಂಗಳೂರು: ಶಿಕ್ಷಕರ ವರ್ಗಾವಣೆ(Teachers Transfer)  ತಿದ್ದುಪಡಿ ಕಾಯ್ದೆ 2022ಕ್ಕೆ ತಿದ್ದುಪಡಿ ಮಾಡಿದ್ದ ಕರ್ನಾಟಕ ಸರ್ಕಾರ, ಇಂದು(ನವೆಂಬರ್ 16) ಶಿಕ್ಷಣ ಇಲಾಖೆ (Karnataka Education Department) ಶಿಕ್ಷಕರ ವರ್ಗಾವಣೆಗೆ ಕರಡು ಅಧಿಸೂಚನೆ ಪ್ರಕಟಿಸಿದೆ. ಆಕ್ಷೇಪಣೆ ನಂತರ ಅಂತಿಮ ಅಧಿಸೂಚನೆ ಮತ್ತು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯ ರಾನಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ) ನಿಯಂತ್ರಣ ಕಾಯ್ದೆ 2022ಕ್ಕೆ ತಿದ್ದುಪಡಿ ಮಾಡಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿತ್ತು. ನಂತರ ಅಧಿವೇಶದಲ್ಲಿ ಮಂಡಿಸಲಾಗಿತ್ತು. ಈಗ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಇದಕ್ಕೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಪರಸ್ಪರ ವರ್ಗಾವಣೆಗೆ ಒಂದು ಬಾರಿ ಅವಕಾಶ ಇತ್ತು. ಆದ್ರೆ, ಇನ್ಮುಂದೆ ಈ ನಿರ್ಬಂಧ ಇರುವುದಿಲ್ಲ. ಕೆಲಸಕ್ಕೆ ಸೇರಿದ ಮೊದಲ ಐದು ವರ್ಷ ಹಾಗೂ ನಿವೃತ್ತಿಗೆ ಮೊದಲಿನ ಐದು ವರ್ಷವಣೆಗೆ ಅವಕಾಶ ಇರುವುದಿಲ್ಲ. ಆದ್ರೆ, ಒಮ್ಮೆ ವರ್ಗಾವಣೆಯಾದ ಬಳಿಕ ಮತ್ತೆ ಮೂರು ವರ್ಷಗಳ ಕಾಲ ಅರ್ಜಿ ಸಲ್ಲಿಸುವಂತಿಲ್ಲ.

ಯಾವುದೇ ಒಂದು ಘಟಕ ಹಾಗೂ ವೃಂದದಲ್ಲಿ ಕನಿಷ್ಠ 10 ವರ್ಷ ಅಥವಾ ಎಲ್ಲ ವೃಂದಗಳಿಗೂ ಸೇರಿ 15 ವರ್ಷ ಕೆಲಸ ಮಾಡಿದ ಶಿಕ್ಷಕರನ್ನು ಶೇ 25ರಷ್ಟು ಮಿತಿಯ ಒಳಗೆ ಖಾಲಿ ಹುದ್ದೆಗಳಿರುವ ತಾಲೂಕಿಗೆ ವರ್ಗಾವಣೆ ಮಾಡಲು ಅವಕಾಶ ಇರಯತ್ತದೆ ಎಂದು ಆದೇಶ ತಿಳಿಸಲಾಗಿದೆ.

ಕ್ಯಾಣ ಕರ್ನಾಟಕದ ಆರು ಜಿಲ್ಲೆಗಳು (377ಜೆ ಅನ್ವಯ) ಮಲೆನಾಡು ವಲಯ ಹಾಗೂ ನಂಜುಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದೂಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲೂಕುಗಳಿಗೆ ಹೋಗಲು ಬಯಸುವವರಿಗೆ ವಿಶೇಷ ಆದ್ಯತೆ ಸಿಗಲಿದೆ. ಸಾರ್ವಜನಿಕ ವರ್ಗಾವಣೆ ಒಟ್ಟು ವೃಂದ ಬಲ ಶೇ 11ರಷ್ಟು ಮಿತಿ ಇರುತ್ತದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವವರಿಗೆ ಈ ನಿಯಮ ಅನ್ವಯವಾಗುವುದಿಲ್ಲ. ಉಳಿದೆಲ್ಲ ನಿಯಮಗಳು ಮುಂದುವರಿಯಲಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ