AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಶೂ ಆರೋಪಕ್ಕೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ: ಆ ಹಳೆಯ ಫೋಟೋಗಳೇ ಕಾರಣ

ಕಳಪೆ ಶೂ ಆರೋಪಕ್ಕೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ: ಆ ಹಳೆಯ ಫೋಟೋಗಳೇ ಕಾರಣ

ಪ್ರಸನ್ನ ಗಾಂವ್ಕರ್​
| Edited By: |

Updated on: Sep 25, 2026 | 2:44 PM

Share

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಕಳಪೆ ಶೂ ವಿತರಣೆ ಆರೋಪಗಳನ್ನು ತಳ್ಳಿಹಾಕಿದ್ದು, ಹಳೆಯ ಫೋಟೋಗಳನ್ನು ಬಳಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗುಣಮಟ್ಟದ ಕುರಿತು ದೂರುಗಳಿದ್ದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ಬಳಸುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು, ಸೆ.25: ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಶೂಗಳ ಗುಣಮಟ್ಟದ ಕುರಿತು ಕೇಳಿಬಂದ ಆರೋಪಗಳ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ಕಳಪೆ ಶೂ ಎಂದು ಹಂಚಿಕೆಯಾದ ಫೋಟೋಗಳು ಕಳೆದ ವರ್ಷದ ಹಳೆಯ ಶೂಗಳದ್ದಾಗಿವೆ ಎಂದು ಸಚಿವರು ತಿಳಿಸಿದ್ದಾರೆ. ಈ ವರ್ಷ ರಾಜ್ಯಾದ್ಯಂತ ಹನ್ನೆರಡೂವರೆ ಲಕ್ಷ ಶೂಗಳನ್ನು ಮೊದಲ ಬಾರಿಗೆ ವಿತರಿಸಲಾಗುತ್ತಿದೆ. ವಿತರಣೆಯಲ್ಲಿ ಸ್ವಲ್ಪ ವಿಳಂಬವಾಗಿರುವುದನ್ನು ಒಪ್ಪಿಕೊಂಡಿರುವ ಸಚಿವರು, ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಒತ್ತಿಹೇಳಿದ್ದಾರೆ. ಶೂಗಳ ಗಾತ್ರ (ಸೈಜ್) ಸಮಸ್ಯೆಯಿಂದ ಬಿಗಿಯಾಗಿರುವ ಕುರಿತು ದೂರುಗಳು ಬಂದಿದ್ದು, ಇಂತಹ ಸಂದರ್ಭದಲ್ಲಿ ತಕ್ಷಣವೇ ವಿನಿಮಯಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ನಿರ್ದಿಷ್ಟವಾಗಿ ಕಳಪೆ ಗುಣಮಟ್ಟದ ಶೂಗಳ ಬಗ್ಗೆ ದೂರುಗಳಿದ್ದರೆ, ಟೆಂಡರ್ ಪಡೆದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. ಇದರ ಜೊತೆಗೆ, ಎಸ್​ಐಆರ್ ಕಾರ್ಯಕ್ಕೆ ಶಿಕ್ಷಕರ ಬಳಕೆಯಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಸಚಿವರು ಹೇಳಿಕೆ ನೀಡಿದ್ದು, “ಶಿಕ್ಷಕರು ತುಂಬಾ ಸಹಕಾರ ನೀಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಶಿಕ್ಷಕರನ್ನು ಎಸ್​ಐಆರ್​ಗೆ ಬಳಸುತ್ತಿರುವುದರಿಂದ ನಮಗೆ ಸಮಸ್ಯೆ. ಚುನಾವಣಾ ಆಯೋಗ ಡಿಕ್ಟೇಟರ್‌ಶಿಪ್ ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More