ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
Ragi Malt with Mid day meals for Karnataka School Children: ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದೇವೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಬೆಂಗಳೂರು, ನಬವೆಂಬರ್ 16: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಗುರುವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ. ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ (Ragi Malt) ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದೇವೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ. ಒಂದು ಎನ್ಜಿಒದವರು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು. ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೂಡ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಇನ್ನು ಎಸ್ಇಪಿ (ರಾಜ್ಯ ಶಿಕ್ಷಣ ನೀತಿ) ಬಗ್ಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ SEP ಅನುಷ್ಠಾನ ಆಗಲಿದೆ. ಈ ಬಗ್ಗೆ ಮೊದಲ ಸಭೆ ಆಗಿದೆ. ಎಸ್ಇಪಿ ಜಾರಿ ಮೂಲಕ ಉತ್ತಮ ಶಿಕ್ಷಣ ವ್ಯವಸ್ಥೆ ನಿರ್ಮಾಣ ಆಗಲಿದೆ. ಎಸ್ಇಪಿಗೆ ರಾಜ್ಯ ಪಠ್ಯ ಕ್ರಮವೋ, CBSE ಪಠ್ಯಕ್ಕೋ ಅಂತ ತಜ್ಞರ ವರದಿ ಬಂದ ಮೇಲೆ ಗೊತ್ತಾಗಲಿದೆ. ನಮ್ಮ ಸಿಲಬಸ್ CBSE ಗಿಂತ ಉತ್ತಮವಾಗಿ ಇರಲಿದೆ. ವರದಿ ಬಂದ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡ್ತೀವಿ ಎಂದು ಮಧು ಬಂಗಾರಪ್ಪ ತಿಳಿಸಿದರು.
ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ ಶಾಕಿಂಗ್ ಹೇಳಿಕೆ
ಯತೀಂದ್ರ ವಿಡಿಯೋ ವೈರಲ್ ವಿಚಾರವಾಗಿ, ಅದು ಸಿಎಸ್ಆರ್ ಫಂಡ್ ಬಗ್ಗೆ ಮಾತಾಡಿರೋದು ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರ ನನಗೆ ಗೊತ್ತೇ ಇಲ್ಲ. ಸಿಎಸ್ಆರ್ ಫಂಡ್ ನನ್ನ ಇಲಾಖೆ ಬರೋದೇ ಇಲ್ಲ. ಅ ವಿಡಿಯೋ ಕೂಡಾ ನಾನು ನೋಡಿಲ್ಲ. ಸಿಎಂ ಶಾಲೆಗಳ ಸಿಎಸ್ಆರ್ ಫಂಡ್ ಬಗ್ಗೆ ಮಾತಾಡಿದ್ರೆ ಅವರ ಬಳಿ ಮಾತಾಡಿ ಪ್ರತಿಕ್ರಿಯೆ ಕೊಡ್ತೀನಿ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:41 pm, Thu, 16 November 23