2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕ ಕುರಿತು ವರದಿ ಸಲ್ಲಿಸಲು ಸೂಚಿಸಿದ ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಇದರಲ್ಲಿ 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾ‌ ಸಾವನ್ನಪ್ಪಿದ್ದಾರೆ. ಜತೆಗೆ ಖಾಸಗಿ ಶಾಲೆಗಳ 422 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕ ಕುರಿತು ವರದಿ ಸಲ್ಲಿಸಲು ಸೂಚಿಸಿದ ಸಚಿವ ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
Follow us
guruganesh bhat
|

Updated on: May 16, 2021 | 3:51 PM

ಬೆಂಗಳೂರು: ಕೊವಿಡ್ ಕಾರ್ಯದಲ್ಲಿ‌ ನಿರತರಾದ ಹಾಗೂ ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಲವು ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರು ಸಾವನ್ನಪ್ಪಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಎಸ್. ಸುರೇಶ್ ಕುಮಾರ್‌ ಮೃತಪಟ್ಟ ಶಿಕ್ಷಕರ ಮತ್ತು ಉಪನ್ಯಾಸಕರ ವಿವರಗಳನ್ನು ಕೂಡಲೇ ಸಲ್ಲಿಸಲು ಸಚಿವ ಸುರೇಶ್ ಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು ಮತ್ತು ಉಪನ್ಯಾಸಕರ‌‌ ವಯಸ್ಸು, ಸಾವಿಗೆ ಖಚಿತ ಕಾರಣ ಸಮೇತ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಇದರಲ್ಲಿ 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾ‌ ಸಾವನ್ನಪ್ಪಿದ್ದಾರೆ. ಜತೆಗೆ ಖಾಸಗಿ ಶಾಲೆಗಳ 422 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವಿಜಾಪುರ ಜಿಲ್ಲೆಯಲ್ಲಿ ಒಂದರಲ್ಲಿಯೇ 56 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಜತೆಗೆ ಬಸವಕಲ್ಯಾಣ, ಮಸ್ಕಿ, ಬೀದರ್ ವಿಧಾನಸಭಾ ಉಪ ಚುನಾವಣೆ ಮತ್ತು ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ‌ ಮಾಡಿದ 35 ಶಿಕ್ಷಕರು ಕೊವಿಡ್​ನಿಂದ ನಿಧನರಾಗಿದ್ದಾರೆ.

ಕಳೆದ ಏಪ್ರಿಲ್ 2021ರಿಂದ ಇಲ್ಲಿಯವರೆಗೆ ಕೊವಿಡ್ ಕಾರಣದಿಂದ‌ ಮೃತಪಟ್ಟ ಶಿಕ್ಷಕರು ಹಾಗೂ ಉಪನ್ಯಾಸಕರ‌‌ ವಯೋಮಾನ ಸಹಿತವಾಗಿ ಮೃತಪಟ್ಟ ಖಚಿತ ಕಾರಣಗಳೊಂದಿಗೆ ಅತಿ ಶೀಘ್ರದಲ್ಲೇ ತಮಗೆ ವರದಿ ಮಂಡಿಸಬೇಕೆಂದು ಶಿಕ್ಷಣ‌ ಇಲಾಖೆಯ ಆಯುಕ್ತರು ಹಾಗೂ ಪದವಿಪೂರ್ವ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿರುವ ಸಚಿವರು, ಇದು ದುರದೃಷ್ಟಕರವಾದ ಸಂಗತಿಯಾಗಿದ್ದು, ಶಿಕ್ಷಕರ ಕುಟುಂಬಗಳ ಬಗ್ಗೆ ತಮ್ಮ ತೀವ್ರವಾದ ಸಂತಾಪವಿದೆ ಎಂದಿದ್ದಾರೆ. ಮೃತರೆಲ್ಲರಿಗೂ ಒಂದು ಕೋಟಿ ಪರಿಹಾರಕ್ಕೆ ಶಿಕ್ಷಕರ ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ‘ಭಾರತಕ್ಕಾಗಿ ನನ್ನ ಹೃದಯ ಮಿಡಿಯುತ್ತಿದೆ’ , ಕೊವಿಡ್ ಪರಿಸ್ಥಿತಿ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾವುಕ ಬರಹ 

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

(Karnataka Education Minister S Suresh Kumar directs give report on teachers died by Covid)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್