ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!

S Suresh Kumar: ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ (Karnataka high court) ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!
’ಶಿಕ್ಷಣ ಸಚಿವ’ ಸುರೇಶ್ ಕುಮಾರ್​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 12, 2021 | 4:27 PM

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್​ಸಿ  ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್​ ತಿರಸ್ಕರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಮುಖ್ಯ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ಕಳೆದ ರ್ಷದಂತೆ ಈ ಬಾರಿಯೂ ಶತಾಯಗತಾಯ ಎಸ್ಎಸ್ಎಲ್​ಸಿ  ಪರೀಕ್ಷೆ ನಡೆಸಿಯೇ ನಡೆಸುತ್ತೇವೆ ಎಂದು ಪಣತೊಟ್ಟಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ( S Suresh Kumar) ಆನೆ ಬಲ ಬಂದಂತಾಗಿದೆ. ಇದರಿಂದ ಮಹಾಮಾರಿ ಕೊರೊನಾ ಸೋಂಕಿನ ಸಮ್ಮುಖದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಷಯದಲ್ಲಿ ಅರ್ಧ ಯುದ್ಧ ಗೆದ್ದಂತಾಗಿದೆ. 

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ( SSLC Examination 2021) ಕೊರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ನಡೆಗೆ ಸಚಿವ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಇದು ಭರವಸೆ ಮೂಡಿಸಿದ ತೀರ್ಪು. ಈ ವರ್ಷದ ಎಸ್ಎಸ್ಎಲ್​ಸಿ  ಪರೀಕ್ಷೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಉಚ್ಚ ನ್ಯಾಯಾಲಯವು ಪಿಐಎಲ್ ಅನ್ನು ತಿರಸ್ಕರಿಸಿದೆ. ಅದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆಯ ಎಸ್ಒಪಿ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಕೊರ್ಟ್ ಪುರಸ್ಕರಿಸಿದೆ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದು ಸ್ವತಃ ಹೈಕೋರ್ಟ್ ಹೇಳಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುವುದನ್ನು ಉಚ್ಚ ನ್ಯಾಯಾಲಯ ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಸಚಿವ ಸುರೇಶ್ ಕುಮಾರ್ (Karnataka Education minister) ಸಂತಸಪಟ್ಟಿದ್ದಾರೆ.

ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ (Karnataka high court) ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಕಳೆದ ವರ್ಷವೂ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಎಸ್.ಎಲ್.ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು.

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

(Karnataka Education minister S Suresh Kumar welcomes high court judgement on SSLC Examination 2021)

Published On - 4:27 pm, Mon, 12 July 21

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್