SSLC, PU Exams 2021: ಎಸ್​ಎಸ್​ಎಲ್​ಸಿ, ಪಿಯು ಪರೀಕ್ಷೆ: ನಾಳೆ ಬೆಳಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸುದ್ದಿಗೋಷ್ಠಿ, ಮಹತ್ವದ ನಿರ್ಣಯ ಘೋಷಣೆ ಸಂಭವ

| Updated By: guruganesh bhat

Updated on: Jun 03, 2021 | 6:29 PM

S Suresh Kumar: ಇಂದು ಸಿಎಂ ಯಡಿಯೂರಪ್ಪ ನಡೆಸಿದ ಸುದ್ದಿಗೋಷ್ಠಿಯಲ್ಲಿ ಎಸ್​ಎಸ್ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದರು.

SSLC, PU Exams 2021: ಎಸ್​ಎಸ್​ಎಲ್​ಸಿ, ಪಿಯು ಪರೀಕ್ಷೆ: ನಾಳೆ ಬೆಳಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸುದ್ದಿಗೋಷ್ಠಿ, ಮಹತ್ವದ ನಿರ್ಣಯ ಘೋಷಣೆ ಸಂಭವ
ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us on

ಬೆಂಗಳೂರು: ಎಸ್​ಎಸ್ಎಲ್​ಸಿ ಮತ್ತು ಪಿಯುಸಿ ಪರೀಕ್ಷೆ ವಿಚಾರವಾಗಿ ನಾಳೆ (ಮೇ 3 ರಂದು) ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಸ್​ಎಸ್​ಎಲ್​ಸಿ ಮತ್ತು ಪಿಯು ಪರೀಕ್ಷೆಗಳ ಬಗ್ಗೆ ಅತ್ಯಂತ ಮಹತ್ವದ ನಿರ್ಧಾರವನ್ನು ಘೋಷಿಸುವ ಸಂಭವವಿದೆ. ಇಂದು ಸಿಎಂ ಯಡಿಯೂರಪ್ಪ ನಡೆಸಿದ ಸುದ್ದಿಗೋಷ್ಠಿಯಲ್ಲಿ ಎಸ್​ಎಸ್ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದಿಂದ ಮನವಿ ಸಲ್ಲಿಸಲಾಗಿದೆ. ಕಾಲೇಜು ಹಂತದಲ್ಲೇ ಪರೀಕ್ಷೆ ನಡೆಸುವಂತೆಯೂ ಸಲಹೆ ನೀಡಲಾಗಿದ್ದು, ಆಯಾ ಕಾಲೇಜುಗಳಲ್ಲೇ ಪರೀಕ್ಷೆ ನಡೆಸಿ ಫಲಿತಾಂಶ ನೀಡಬೇಕು.
ಹಿಂದಿನ ವರ್ಷ ಯಶಸ್ವಿಯಾಗಿ SSLC ಪರೀಕ್ಷೆ ನಡೆದಿದೆ. ಈಗ ಮತ್ತಷ್ಟು ಸೂಕ್ತ ಕ್ರಮಗಳೊಂದಿಗೆ ಪರೀಕ್ಷೆ ನಡೆಸಬಹುದು ಎಂದು ಸಲಹೆ ನೀಡಲಾಗಿದೆ.

ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

ಇದನ್ನೂ ಓದಿ: ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು, ಕನ್ನಡಿಗರಿಗಾದ ನೋವಿಗೇನು ಪರಿಹಾರ?: ಮಾಜಿ ಸಿಎಂ ಕುಮಾರಸ್ವಾಮಿ

ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​; ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್

(Karnataka Education minister Suresh kumar calls for press meet likely to announce SSLC PU exams 2021)

Published On - 6:27 pm, Thu, 3 June 21