School Reopening: ಶಾಲೆ ಆರಂಭಿಸುವ ಕುರಿತು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳ ಜತೆ ಸಚಿವ ಸುರೇಶ್ ಕುಮಾರ್ ಸಭೆ; ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು ಇಲ್ಲಿವೆ

ಎಲ್ಲ ಕಡೆಯೂ ಒಂದೇ ಬಾರಿಗೆ ಶಾಲೆ ತೆರೆಯದಿದ್ದರೂ ತೊಂದರೆಯೇನೂ ಇಲ್ಲ. ತಾಲೂಕು, ಗ್ರಾಮಪಂಚಾಯ್ತಿ ಇಲ್ಲವೇ ಜಿಲ್ಲಾ ಹಾಗೆಯೇ ಗ್ರಾಮೀಣ ಪ್ರದೇಶ, ನಗರ ಪ್ರದೇಶ ಹೋಬಳಿ, ತಾಲೂಕು ಕೇಂದ್ರವಾರು ತರಗತಿ ಆರಂಭಿಸುವ; ಇಲ್ಲವೇ ಇತರೆ ರೂಪದಲ್ಲಿ ಮಕ್ಕಳನ್ನು ಉಪಾಧ್ಯಾಯರು ತಲುಪುವ ವಿಷಯಗಳ ಕುರಿತೂ ಪ್ರತಿನಿಧಿಗಳು ವಿವಿಧ ಸಲಹೆ ದೊರೆತಿದೆ ಎಂದು ತಿಳಿಸಿದರು.

School Reopening: ಶಾಲೆ ಆರಂಭಿಸುವ ಕುರಿತು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳ ಜತೆ ಸಚಿವ ಸುರೇಶ್ ಕುಮಾರ್ ಸಭೆ; ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು ಇಲ್ಲಿವೆ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Follow us
TV9 Web
| Updated By: guruganesh bhat

Updated on: Jun 25, 2021 | 5:27 PM

ಬೆಂಗಳೂರು: ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯ ಸಲಹೆ ಪಡೆದೇ ಮುಂದುವರೆಯಲಾಗುವುದು. ಶಾಲೆಗಳಿಂದ ಮಕ್ಕಳನ್ನು ಬಹುಕಾಲ ದೂರ ಉಳಿಸುವುದು ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಒಳ್ಳೆಯದಲ್ಲ. ಶಾಲೆಯಿಂದ ಕೊವಿಡ್ ಹರಡಿದ ನಿದರ್ಶನವಿಲ್ಲ. ಸದ್ಯ ಶಾಲೆ ಆರಂಭಿಸದೇ ಇದ್ದರೂ ಯಾವುದಾದರೂ ರೂಪದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಪರ್ಕ ಏರ್ಪಡಲೇಬೇಕಿದೆ ಎಂಬ ಅಭಿಪ್ರಾಯ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡೆಸಿದ ವಿವಿಧ ಶಿಕ್ಷಣ ತಜ್ಞರು, ಶಿಕ್ಷಣ ಕುರಿತ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ವ್ಯಕ್ತವಾಯಿತು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಲಾಕ್‍ಡೌನ್ ಅನ್‍ಲಾಕ್ ಮಾಡಿದಂತೆ ವಿಕೇಂದ್ರೀಕರಣ ರೂಪದಲ್ಲಿ ಶಾಲೆಗಳನ್ನು ತೆರೆಯುವ ಕುರಿತೂ ಸಲಹೆಗಳು ವ್ಯಕ್ತವಾಗಿವೆ. ಶಾಲಾರಂಭದ ವಿಷಯದಲ್ಲಿ ಎಲ್ಲ ಕಡೆಯೂ ಒಂದೇ ಬಾರಿಗೆ ಶಾಲೆ ತೆರೆಯದಿದ್ದರೂ ತೊಂದರೆಯೇನೂ ಇಲ್ಲ. ತಾಲೂಕು, ಗ್ರಾಮಪಂಚಾಯ್ತಿ ಇಲ್ಲವೇ ಜಿಲ್ಲಾ ಹಾಗೆಯೇ ಗ್ರಾಮೀಣ ಪ್ರದೇಶ, ನಗರ ಪ್ರದೇಶ ಹೋಬಳಿ, ತಾಲೂಕು ಕೇಂದ್ರವಾರು ತರಗತಿ ಆರಂಭಿಸುವ; ಇಲ್ಲವೇ ಇತರೆ ರೂಪದಲ್ಲಿ ಮಕ್ಕಳನ್ನು ಉಪಾಧ್ಯಾಯರು ತಲುಪುವ ವಿಷಯಗಳ ಕುರಿತೂ ಪ್ರತಿನಿಧಿಗಳು ವಿವಿಧ ಸಲಹೆ ದೊರೆತಿದೆ ಎಂದು ತಿಳಿಸಿದರು.

ಕೊವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ನಿರಂತರತೆ, ಕಲಿಕಾ ಸಾಮಗ್ರಿ, ಕಲಿಕಾ ನಿರಂತರ ಮೌಲ್ಯಮಾಪನ ಕುರಿತು ಕಾಲಕಾಲಕ್ಕೆ ಸಲಹೆ ನೀಡಲು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ, ವಿದ್ಯಾರ್ಥಿ ಕಲಿಕೆಯ ಪರಾಮರ್ಶೆಗೆ ನಿರಂತರ ಸೂತ್ರವನ್ನು ರಚಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು

ಆನ್-ಲೈನ್ ದೂರದರ್ಶನ ಚಂದನಾ ಮೂಲಕ ಸಂವೇದಾ ಪಾಠಗಳು, ಯೂ-ಟ್ಯೂಬ್, ವಾಟ್ಸ್​ಆ್ಯಪ್ ಮೂಲಕ ಹಾಗೆಯೇ ಮಕ್ಕಳು ವಾರದಲ್ಲಿ ಒಂದು ದಿನ ಶಾಲೆಗೆ ಬಂದು ಸಿದ್ಧಪಾಠಗಳನ್ನು ತೆಗೆದುಕೊಂಡು ಹೋಗಿ ಇನ್ನೊಂದು ದಿನ ಅವುಗಳೊಂದಿಗೆ ಬಂದು ಸಂಶಯಗಳ ನಿವಾರಣೆಗೆ ಶಿಕ್ಷಕರನ್ನು ಭೇಟಿ ಮಾಡುವಂತಹುದು, ಶಾಲೆಗೆ ಬರಲಾಗದ ಮಕ್ಕಳಿಗೆ ಆಯಾ ಗ್ರಾಮಪಂಚಾಯತ್ ಅಧಿಕಾರಿಗಳ ಇಲ್ಲವೇ ಸ್ವಯಂ ಸೇವಕರ ಮೂಲಕ ಸಿದ್ಧಪಠ್ಯಗಳನ್ನು ನೀಡುವಂತಹ ಸಲಹೆಗಳೂ ವ್ಯಕ್ತವಾದವು. ವಿಶೇಷವಾಗಿ ಡಾ. ದೇವಿಶೆಟ್ಟಿ ವರದಿಯಂತೆ ತರಗತಿವಾರು, ಆಯಾ ಪ್ರದೇಶದ ಪಾಸಿಟಿವಿಟಿ ದರದ ಅನ್ವಯ ಶಾಲಾ ತರಗತಿಗಳನ್ನು ತೆರೆಯುವುದಾಗಲಿ ಇಲ್ಲವೇ ಶಾಲಾವರಣದಲ್ಲಿ ವಿದ್ಯಾಗಮ ತರಗತಿಗಳನ್ನು ನಡೆಸುವುದರ ಕುರಿತು ಆದ್ಯತೆ ನೀಡಬೇಕೆಂಬುದು ಬಹುತೇಕರ ಸಲಹೆಯಾಗಿದ್ದು, ಸದ್ಯದಲ್ಲೇ ಟಾಸ್ಕ್​ಫೋರ್ಸ್ ರಚಿಸಿ ಒಂದು ತೀ‌ರ್ಮಾನಕ್ಕೂ ಬರಲಾಗುವುದು ಎಂದೂ ಸುರೇಶ್ ಕುಮಾರ್ ತಿಳಿಸಿದರು.‌

ಶಾಲಾರಂಭವನ್ನು ಆಯಾ ಪ್ರದೇಶವಾರು ಕೊವಿಡ್ ಕನಿಷ್ಠ ಪಾಸಿಟಿವಿಟಿ ಆಧಾರದಲ್ಲಿ ತೆರೆಯಬಹುದೆಂಬ ಡಾ. ದೇವಿಶೆಟ್ಟಿ ವರದಿಯ ಅಂಶಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕೊವಿಡ್ ಕಾಲಘಟ್ಟದಲ್ಲಿ ಶಾಲಾರಂಭ ಸೇರಿದಂತೆ ಮಕ್ಕಳ ಕಲಿಕಾ ನಿರಂತರತೆ ಬಗ್ಗೆ ಸಹ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಇದನ್ನೂ ಓದಿ: ಗ್ರಾಮೀಣ ಮಕ್ಕಳು ಹೆಸರು ಬರೆಯುವುದನ್ನೂ ಮರೆತಿದ್ದಾರೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೇಸರ

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

(Karnataka Education Minister Suresh Kumar meeting with education experts voluntary organizations on starting school)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್