AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election 2023: ಸಿದ್ದರಾಮಯ್ಯ ಟೀಕೆಗೆ ಪಕ್ಷ ಕಟ್ಟಿ ಐದು ಸ್ಥಾನ ಗೆದ್ದು ತೋರಿಸುವಂತೆ ಸವಾಲೆಸೆದ ಕುಮಾರಸ್ವಾಮಿ

ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳದಿವೆ. ಚುನಾವಣೆ ಹತ್ತಿರವಾಗ್ತಿದ್ದಂತೆ ನಾಯಕರ ನಡುವಿನ ಮಾತಿನ ಸಮರ ಕೂಡಾ ಜೋರಾಗಿ ಆರಂಭವಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹಾವು ಮುಂಗುಸಿಯಂತೆ ಒಬ್ಬರ ಮೇಲೆ ಒಬ್ಬರು ಹರಿಹಾಯುವುದು, ಮಾತಿನ ಬಾಣಗಳನ್ನು ಬಿಡುವ ಕೆಲಸ ಜೋರಾಗಿ ಮಾಡುತ್ತಿದ್ದಾರೆ.

Karnataka Election 2023: ಸಿದ್ದರಾಮಯ್ಯ ಟೀಕೆಗೆ ಪಕ್ಷ ಕಟ್ಟಿ ಐದು ಸ್ಥಾನ ಗೆದ್ದು ತೋರಿಸುವಂತೆ ಸವಾಲೆಸೆದ ಕುಮಾರಸ್ವಾಮಿ
ಸಿದ್ದರಾಮಯ್ಯ ಟೀಕೆಗೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 29, 2023 | 6:44 PM

Share

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವುದರಿಂದ ನಾಯಕರು ಜನರ ಮನಗೆಲ್ಲಲು ಹತ್ತಾರು ರೀತಿಯ ತಂತ್ರಗಳನ್ನು ಮಾಡುತ್ತಿದ್ದಾರೆ. ಇದರ ನಡುವೆ ಎದುರಾಳಿ ಪಕ್ಷದ ನಾಯಕರನ್ನು ಕಟ್ಟಿಹಾಕಲು ತಮ್ಮ ಮಾತಿನ ಬಾಣಗಳನ್ನು ಜೋರಾಗಿ ಬಿಡುತ್ತಿದ್ದಾರೆ. ಒಂದೆಡೆ ಬಿಜೆಪಿ ನಾಯಕರು ಸಿದ್ದರಾಮಯ್ಯ, ಡಿ.ಕೆ ಮೇಲೆ ಹರಿಹಾಯ್ದಿದ್ದರೆ, ಇತ್ತ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಬಿಜೆಪಿ ಹಾಗೂ ಕುಮಾರಸ್ವಾಮಿ ವಿರುದ್ದ ಹರಿಹಾಯುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾಯಕರ ನಡುವೆ ಮಾತಿನ ಚಕಮಕಿ ಜೋರಾಗಿ ಆರಂಭವಾಗಿದೆ.

ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ, ಕುಮಾರಸ್ವಾಮಿ ವಿರುದ್ದ ಹರಿಹಾಯ್ದಿದ್ದ ಸಿದ್ದರಾಮಯ್ಯ, ಇಂದು ಕಲಬುರಗಿಯಲ್ಲಿ ಕೂಡಾ ಕುಮಾರಸ್ವಾಮಿ ವಿರುದ್ದ ಹರಿಹಾಯ್ದರು. ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳುತ್ತಲೇ, ಕುಮಾರಸ್ವಾಮಿ ಸುಳ್ಳು ಹೇಳುತ್ತಾ ಓಡಾಡುತ್ತಾರೆ ಎಂದು ಕುಮಾರಸ್ವಾಮಿಗೆ ತಿವಿಯುವ ಕೆಲಸ ಮಾಡಿದ್ದಾರೆ. ಇದಕ್ಕೆ ರಾಯಚೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯಗೆ ತಾಕತ್ ಇದ್ರೆ, ಸ್ವಂತ ಪಕ್ಷ ಕಟ್ಟಿ ಐದು ಸ್ಥಾನ ಗೆದ್ದು ತೋರಿಸಲಿ, ಇವರೆಲ್ಲಾ ಜನತಾ ಪಕ್ಷ ಬಿಟ್ಟು ಹೋದಮೇಲೆಯೇ ರಾಜ್ಯದಲ್ಲಿ ಅಡ್ಡಾಡಿ, ನಾನು ನಲವತ್ತು ಸ್ಥಾನ ಗೆದ್ದಿದ್ದೆನೆ ಎಂದು ಹೇಳಿದ್ದಾರೆ.

ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿನ ಬಗ್ಗೆ ಕೂಡಾ ಮಾತುಗಳು ಜೋರಾಗಿ ಆರಂಭವಾಗಿವೆ. ಒಂದೆಡೆ ಡಿ.ಕೆ.ಶಿವಕುಮಾರ್ ಅವರು ನಿಖಿಲ್ ಪರವಾಗಿ ನಾವು ಪ್ರಮಾಣಿಕವಾಗಿ ಕೆಲಸ ಮಾಡಿದ್ದೆವು. ಆದರೆ ಅವರು ಪ್ರಾಮಾಣಿಕತೆಯನ್ನು ಉಳಿಸಿಕೊಳ್ಳಲಿಲ್ಲಾ ಎಂದು ಮಂಡ್ಯದಲ್ಲಿ ಕುಮಾರಸ್ವಾಮಿ ವಿರುದ್ದ ಡಿ.ಕೆ ಶಿ ಹರಿಹಾಯ್ದಿದ್ದರು. ಇದಕ್ಕೆ ಇಂದು ಟಕ್ಕರ್ ನೀಡಿದ್ದ ಕುಮಾರಸ್ವಾಮಿ, ನಿಖಿಲ್ ಪರ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಹತ್ತು ಲಕ್ಷ ಮತಗಳು ಬರಬೇಕಿತ್ತು ಎನ್ನುವ ಮೂಲಕ ಡಿ.ಕೆ ಶಿಗೆ ಎದುರೇಟು ನೀಡುವ ಕೆಲಸ ಮಾಡಿದ್ರು. ಕಾಂಗ್ರೆಸ್​ನವರು ಬಂದಿದ್ದು ನಮ್ಮನ್ನು ಗೆಲ್ಲಿಸಲಿಕ್ಕೆ ಅಲ್ಲಾ, ಸೋಲಿಸಲಿಕ್ಕೆ ಬಂದಿದ್ದರು. ಸೋಲಿಸಲಿಕ್ಕೆ ಏನು ಬೇಕೋ ಅದನ್ನೆಲ್ಲಾ ಮಾಡಿದ್ರು ಅಂತ ಕೈ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಮತ್ತೆ ತಿರುಗೇಟು ನೀಡಿದ, ಡಿ.ಕೆ.ಶಿವಕುಮಾರ್, ನಾವೇನು ಕುಸ್ತಿ ಹಿಡಿಬೇಕಿತ್ತಾ ಅಂತ ಹೇಳಿದ್ದಾರೆ. ಕುಮಾರಸ್ವಾಮಿ ಅವರು ಪಕ್ಷವನ್ನು ವಿಸರ್ಜನೆ ಮಾಡ್ತೇನೆ ಅಂತ ಹೇಳಿದ್ರು. ಹೀಗಾಗಿ ನಾನು ನಮ್ಮ ಪಕ್ಷಕ್ಕೆ ಬಂದು ಸೇರಿಕೊಳ್ಳಿ ಅಂತ ಹೇಳಿದ್ದೇನೆ ಅಂತ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೇ ನೀಡಿರುವ ಕುಮಾರಸ್ವಾಮಿ, ನಾನು ಅಧಿಕಾರ ಸಿಕ್ರೆ, ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸದಿದ್ದರೇ, ಪಕ್ಷ ವಿಸರ್ಜನೆ ಮಾಡ್ತೇನೆ ಅಂತ ಹೇಳಿದ್ದೇನೆ ಅಂತ ಹೇಳಿದ್ದಾರೆ.

ಇದನ್ನೂ ಓದಿ:Congress Vs BJP: ಇವತ್ತೇ ಲೋಕಸಭಾ ಚುನಾವಣೆಯಾದರೆ ಯಾರು ಗೆಲ್ತಾರೆ? ಚರ್ಚೆಯಾಗ್ತಿದೆ ರಾಜಕೀಯ ಸಮೀಕ್ಷೆಯ ವಿವರ

ಒಟ್ಟಾರೆ ಚುನಾವಣೆ ಹತ್ತಿರ ಬರ್ತಿದ್ದಂತೆ, ಮತದಾರರ ಮನಗೆಲ್ಲಲು ನಾಯಕರ ಟಾಕ್ ಪೈಟ್ ಜೋರಾಗಿ ಮಾಡುತ್ತಿದ್ದಾರೆ. ಆ ಮೂಲಕ ಎದುರಾಳಿಗಳನ್ನು ಮಾತಿನಲ್ಲಿಯೇ ಕಟ್ಟಿಹಾಕುವ ಕೆಲಸ ಆರಂಭಿಸಿದ್ದಾರೆ. ಆದರೆ ಮತದಾರ ಯಾರ ಮಾತಿಗೆ ಮನ್ನಣೆ ನೀಡುತ್ತಾನೆ, ಯಾರ ಮಾತುಗಳನ್ನು ತಿರಸ್ಕಾರ ಮಾಡುತ್ತಾನೆ ಎನ್ನುವುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ