ರಾಜ್ಯದ ಮತದಾರರ ಪಟ್ಟಿ ಸಿದ್ಧ: ಮಹಿಳಾ ಮತದಾರರ ಸಂಖ್ಯೆಯಲ್ಲಿ ಭಾರಿ ಏರಿಕೆ

ಕರ್ನಾಟಕ ಚುನಾವಣಾ ಆಯೋಗವು ರಾಜ್ಯದ 224 ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟಿಸಿದೆ. ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಂತಿಮ‌ ಪಟ್ಟಿಯಲ್ಲಿ ಈಗ 5,37,85,815 ಮತದಾರರು ಇದ್ದಾರೆ. ಇದರಲ್ಲಿ 2,69,33,750 ಪುರುಷರು, 2,68,47,145 ಮಹಿಳೆಯರು ಮತದಾನದ ಗುರುತಿನಿ ಚೀಟಿ ಹೊಂದಿದ್ದಾರೆ.

ರಾಜ್ಯದ ಮತದಾರರ ಪಟ್ಟಿ ಸಿದ್ಧ: ಮಹಿಳಾ ಮತದಾರರ ಸಂಖ್ಯೆಯಲ್ಲಿ ಭಾರಿ ಏರಿಕೆ
ಚುನಾವಣಾ ಆಯೋಗ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Jan 22, 2024 | 1:45 PM

ಬೆಂಗಳೂರು, ಜನವರಿ 22: ಕರ್ನಾಟಕ ಚುನಾವಣಾ ಆಯೋಗವು (Karnataka Election Commission) ರಾಜ್ಯದ 224 ಕ್ಷೇತ್ರಗಳ ಮತದಾರರ (Voters) ಪಟ್ಟಿ ಪ್ರಕಟಿಸಿದೆ. ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕದ ಮುಂಚಿತ 10 ದಿನದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಅಂತಿಮ‌ ಪಟ್ಟಿಯಲ್ಲಿ ಈಗ 5,37,85,815 ಮತದಾರರು ಇದ್ದಾರೆ. ಇದರಲ್ಲಿ 2,69,33,750 ಪುರುಷರು, 2,68,47,145 ಮಹಿಳೆಯರು ಇದ್ದಾರೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದರು.

ಕರಡು ಪಟ್ಟಿಗೆ ಹೋಲಿಸಿದರೆ ಮಹಿಳಾ ಮತದರಾರು ಸಂಖ್ಯೆ 2,77,717 ರಷ್ಟು ಗಮನಾರ್ಹ ಹೆಚ್ಚಾಗಿದೆ. 17,47,518 ಮತದಾರರ ಗುರುತಿನ ಚೀಟಿಗಳನ್ನು ಪೋಸ್ಟ್ ಮೂಲಕ ಕಳುಹಿಸಲಾಗಿದೆ. ಈಗ 10,76,506 ಮತದಾರರ ಗುರುತಿನ ಚೀಟಿ ಮುದ್ರಣ ವಾಗಿದ್ದು, ರವಾನಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಪಟ್ಟಿಯಲ್ಲಿ 10,34,018 ಯುವ ಮತದಾರರಿದ್ದಾರೆ. ಇದರಲ್ಲಿ 3,88,527 ರಷ್ಟು ಯುವಕರು ಹೊಸದಾಗಿ ನೋಂದಾಯಿಸಿಕೊಂಡಿದ್ದಾರೆ. ಸಾಗರೋತ್ತರ (ಅನಿವಾಸಿ ಭಾರತೀಯರು) ಮತದಾರರ ಸಂಖ್ಯೆ 3,165 ಇದೆ. 80 ವರ್ಷ ಮೇಲ್ಪಟ್ಟ ವಯೋಮಾನದ ಮತದಾರರ ಸಂಖ್ಯೆ 12,71,862 ಇದೆ. 100 ವರ್ಷ ಮೇಲ್ಪಷ್ಟ ಮತದಾರರ ಸಂಖ್ಯೆ 17,937 ಇದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯದ 2 ಮಹಿಳಾ ಐಎಎಸ್ ಅಧಿಕಾರಿಗಳಿಗೆ ಪ್ರಶಸ್ತಿ ಘೋಷಣೆ

ಒಟ್ಟು ಮತಗಟ್ಟೆಗಳ ಸಂಖ್ಯೆ 58,834 ಇದೆ. ಕರಡು ಹಾಗೂ ಅಂತಿಮ ಪಟ್ಟಿಯಲ್ಲಿ ಒಟ್ಟು 35,02,328 ಸೇರ್ಪಡೆಗೊಳಿಸಲಾಗಿದೆ. 11,14,257 ಮತದಾರರ ಹೆಸರನ್ನು ತೆಗೆದು ಹಾಕಲಾಗಿದೆ. 13,43,123 ಜನರ ಹೆಸರುಗಳನ್ನು ತಿದ್ದುಪಡಿ ಮಾಡಲಾಗಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 69.74 ರಷ್ಟು ಮತದಾರರಾಗಿದ್ದಾರೆ. ಪ್ರತಿ 1000 ವೋಟರ್ ಅನುಪಾತದಲ್ಲಿ 997 ಮಹಿಳಾ ಮತದಾರರು ಇದ್ದಾರೆ.

ಆನ್​ಲೈನ್‌ ಮೂಲಕ ಹೆಸರು ಸರಿಯಾಗಿದೆಯಾ ಎಂದು ಪರಿಶೀಲಿಸಬಹುದು. ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ಮತರದಾರರ ಸಂಖ್ಯೆ ನಿರಂತರವಾಗಿ ಅಪ್​ಡೇಟ್ ಆಗಲಿದೆ. ಪಾರ್ಮ್ 8 ಮೂಲಕ ಹೆಸರನ್ನು ಒಂದು ಕ್ಷೇತ್ರದಿಂದ ಇನ್ನೊಂದು ಕ್ಷೇತ್ರಕ್ಕೆ ವರ್ಗಾವಣೆ ಮಾಡಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:35 pm, Mon, 22 January 24

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು