AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಡಿಸಿಗಳಿಗೆ ಆಯೋಗ ಪತ್ರ, ಚುನಾವಣೆ ದಿನಾಂಕ ಘೋಷಣೆ ಯಾವಾಗ?

Loksabha Elections 2024,: ಈಗಾಗಲೇ ಭಾರತೀಯ ಚುನಾವಣಾ ಆಯೋಗದ (ಇಸಿಐ) ಉನ್ನತ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲೂ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಚುನಾವಣೆ ಆಯೋಗವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸಜ್ಜಾಗಿರುವಂತೆ ಸೂಚಿಸಿದೆ.

ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಡಿಸಿಗಳಿಗೆ ಆಯೋಗ ಪತ್ರ, ಚುನಾವಣೆ ದಿನಾಂಕ ಘೋಷಣೆ ಯಾವಾಗ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 07, 2024 | 9:40 PM

Share

ಬೆಂಗಳೂರು, (ಮಾರ್ಚ್ 07): 18ನೇ ಲೋಕಸಭಾ ಚುನಾವಣೆಗಾಗಿ (Loksabha Elections 2024) ಈಗಾಗಲೇ ಭಾರತೀಯ ಚುನಾವಣಾ ಆಯೋಗವು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣೆ ದಿನಾಂಕ ಯಾವಾಗ ಬೇಕಾದರೂ ಪ್ರಕಟವಾಗಬಹುದು. ಇದಕ್ಕೆ ಪೂರಕವೆಂಬತೆ ಕರ್ನಾಟಕ ಚುನಾವಣೆ ಆಯೋಗವು(karnataka election commission) ಸಹ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ತಯಾರಿರುವಂತೆ ಸೂಚಿಸಿದೆ. ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳಿಗೆ ಆಯೋಗ ಪತ್ರ ಬರೆದಿದ್ದು, ನೀತಿಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಜ್ಜಾಗಿ. ನೀತಿಸಂಹಿತೆ ಜಾರಿಯಾದ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು. ಈ ಹಿನ್ನೆಲೆಯಲ್ಲಿ ಈಗಲೇ ತಂಡ ರಚಿಸಿಕೊಳ್ಳುವಂತೆ ಹೇಳಿದೆ.

ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, ಭದ್ರತಾ ಪಡೆಗಳ ಅಗತ್ಯತೆ, ಗಡಿಗಳಲ್ಲಿ ಬಿಗಿಯಾದ ಕಣ್ಗಾವಲು ಹಾಗೂ ನೀತಿ ಸಂಹಿತೆ ಬಗ್ಗೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಚುನಾವಣೆ ಆಯೋಗವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ರವಾನಿಸುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಯನ್ನು ನಿರಾತಂಕ ಹಾಗೂ ಅಚ್ಚುಕಟ್ಟಾಗಿ ನಡೆಯಸಲು ಆಯಾ ಮತದಾರ ಕ್ಷೇತ್ರವಾರು, ಜಿಲ್ಲಾವಾರು ಸರ್ಕಾರಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ರಾಜ್ಯ ಹಾಗೂ ಜಿಲ್ಲಾವಾರು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ತಿದ್ದುಪಡಿಗೂ ಸಲಹೆ ನೀಡಲಾಗಿದೆ. ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಗಿಂತ 4 ಲಕ್ಷ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಕರ್ನಾಟಕದಲ್ಲಿ ಒಟ್ಟು 5.37 ಕೋಟಿ ಮತದಾರರಿದ್ದಾರೆ.

ಚುನಾವಣಾ ಆಯೋಗವು ಹಲವು ರಾಜ್ಯಗಳಿಗೆ ಭೇಟಿ ನೀಡಿ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದು, ರಾಜ್ಯ ಚುನಾವಣಾ ಆಯೋಗಗಳಿಗೆ ತಯಾರಿರುವಂತೆ ಸೂಚನೆಗಳನ್ನು ಸಹ ನೀಡಿದೆ. ಹೀಗಾಗಿ ಮಾರ್ಚ್ 10ರ ನಂತರ ಯಾವುದೇ ಸಂದರ್ಭದಲ್ಲೂ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬಹುದು. ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲೇ ಮತದಾನ ನಡೆಯುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?