ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಚುನಾವಣೆ ಆಯುಕ್ತ
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಸ್.ಸಂಗ್ರೇಶಿ ತಮ್ಮ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಸ್ಥಳೀಯ ಸಂಸ್ಥೆ ಚುನಾವಣೆಗಳು ಯಾವಾಗ ನಡೆಯಬಹುದು ಎನ್ನುವ ಬಗ್ಗೆ ಮಾತನಾಡಿದ್ದಾರೆ.
ಬೆಂಗಳೂರು, (ಆಗಸ್ಟ್ 08): ಅವಧಿ ಮುಗಿದರೂ ಸಹ ಕಳೆದ ನಾಲ್ಕು ವರ್ಷಗಳಿಂದ ತಾಲೂಕು, ಜಿಲ್ಲಾ ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಡೆದಿಲ್ಲ. ಹೀಗಾಗಿ ಸರ್ಕಾರದ ವಿರುದ್ದ ಕೂಡ ನ್ಯಾಯಾಂಗ ಉಲ್ಲಂಘನೆ ಕೇಸ್ ದಾಖಲಿಸಿದ್ದೇವೆ. 2 ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಬಾಕಿ ಇದೆ. ಈ ಪ್ರಕರಣ ಇತ್ಯರ್ಥವಾದ ತಕ್ಷಣವೇ ಚುನಾವಣೆ ನಡೆಸುವುದಾಗಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಸ್.ಸಂಗ್ರೇಶಿ ಸ್ಪಷ್ಟಪಡಿಸಿದ್ದಾರೆ.
ಅವಧಿ ಮುಗಿದ ಆರು ತಿಂಗಳ ಒಳಗೆ ಚುನಾವಣೆಗೆ ಸರ್ಕಾರ ಮುಂದುವರಿಯದೇ ಇದ್ದರೆ ನಾವು ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ. ಮುಂದಿನ ವಾರ ಮೈಸೂರು, ಶಿವಮೊಗ್ಗ, ತುಮಕೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಮಾಡುತ್ತೇವೆ. ಮೀಸಲಾತಿ ಇನ್ನೂ ಪ್ರಕಟ ಮಾಡಿಲ್ಲ. ಈ ಹಿಂದಿನ ಮೀಸಲಾತಿ ಆಧಾರದ ಮೇಲೆ ಚುನಾವಣೆ ಮಾಡುತ್ತೇವೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದೆ. ಹೀಗಾಗಿ ನವೆಂಬರ್ ಒಳಗೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ಎಲ್ಲವೂ 10ನೇ ತಾರೀಕಿನ ನಂತರ ನೋಡ್ತಿರಿ: ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಚಲುವರಾಯಸ್ವಾಮಿ
ಕಳೆದ ನಾಲ್ಕು ವರ್ಷಗಳಿಂದ ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆ ನಡೆದಿಲ್ಲ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕು. ಇದರ ಹೊಣೆ ಚುನಾವಣಾ ಆಯೋಗದ ಮೇಲೆ ಇದೆ ರಾಜ್ಯ ಸರ್ಕಾರ ಆದಷ್ಟು ಬೇಗ ಸಹಕಾರ ಕೋಡಬೇಕು. ಇದುವರೆಗೆ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ ಸರ್ಕಾರ ಮೀಸಲಾತಿ ಪಟ್ಟಿ ನೀಡುತ್ತಿಲ್ಲ. ಅವರು ಮೀಸಲಾತಿ ಪಟ್ಟಿ ಕೊಟ್ಟ ತಕ್ಷಣ ಚುನಾವಣೆ ನಡೆಸುತ್ತೇವೆ ಎಂದು ತಿಳಿಸಿದರು.
ಚುನಾವಣೆ ನಡೆಯದ ಕಾರಣ 15ನೇ ಹಣಕಾಸಿನ ಹಣ ಬರುತ್ತಿಲ್ಲ. ಫೆಬ್ರವರಿ ಒಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯದಿದ್ದರೆ 15ನೇ ಹಣಕಾಸಿನ ಆಯೋಗದ ಸುಮಾರು 2000 ಕೋಟಿ ರೂ. ಹಣ ವಾಪಸ್ ಹೋಗುತ್ತದೆ. ಚುನಾವಣೆ ಆದರೆ ಮಾತ್ರ ನಮ್ಮ ಪಾಲಿನ ಹಣ ಬರುತ್ತೆ. ಮುಂದೆ ಅವಧಿ ಮುಗಿದ ಆರು ತಿಂಗಳ ಒಳಗೆ ಚುನಾವಣೆಗೆ ಸರ್ಕಾರ ಮುಂದುವರಿಯದೇ ಇದ್ದರೆ ನಾವು ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.