Electricity Price Hike: ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್​ಸಿ ಅನುಮೋದನೆ

ಪರಿಷ್ಕೃತ ದರಗಳು ಏಪ್ರಿಲ್ 1, 2021ರ ನಂತರದ ಮೊದಲ ಮೀಟರ್ ಓದುವ ದಿನಾಂಕದಿಂದ ಬಳಕೆ ಮಾಡುವ ವಿದ್ಯುಚ್ಛಕ್ತಿಗೆ ಅನ್ವಯವಾಗುತ್ತದೆ.

Electricity Price Hike: ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್​ಸಿ ಅನುಮೋದನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 09, 2021 | 5:45 PM

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (Karnataka Electricity Regulatory Commission – KRRC) ರಾಜ್ಯದಲ್ಲಿ ವಿದ್ಯುತ್​ ದರಗಳನ್ನು ಹೆಚ್ಚಿಸಲು ಒಪ್ಪಿಕೊಂಡಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 135 ಪೈಸೆ (₹1.35) ಬೆಲೆ ಏರಿಕೆ ಕೋರಿ ಬಹಳ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶ ಪರಿಶೀಲಿಸಿರುವ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ಪರಿಷ್ಕೃತ ದರಗಳು ಏಪ್ರಿಲ್ 1, 2021ರ ನಂತರದ ಮೊದಲ ಮೀಟರ್ ಓದುವ ದಿನಾಂಕದಿಂದ ಬಳಕೆ ಮಾಡುವ ವಿದ್ಯುಚ್ಛಕ್ತಿಗೆ ಅನ್ವಯವಾಗುತ್ತದೆ. ಏಪ್ರಿಲ್ ಮತ್ತು ಮೇ ತಿಂಗಳ ದರ ಪರಿಷ್ಕರಣೆಯ ಬಾಕಿಯನ್ನು ಯಾವುದೇ ಬಡ್ಡಿ ವಿಧಿಸದೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ವಸೂಲಿ ಮಾಡಲು ಆದೇಶ ನೀಡಲಾಗಿದೆ.

ರಾಜ್ಯದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆ, ಸ್ಥಳೀಯ ನಗರಸಂಸ್ಥೆಗಳ ಚುನಾವಣೆ ಘೋಷಣೆ ಕಾರಣ ನೀತಿ ಸಂಹಿತೆ ಜಾರಿಯಲ್ಲಿದ್ದುದರಿಂದ ದರ ಪರಿಷ್ಕರಣೆ ಆದೇಶ ಹೊರಡಿಸುವುದು ವಿಳಂಬವಾಯಿತು. ಕೊವಿಡ್ ಸೋಂಕು ತಡೆಯಲು ಲಾಕ್​ಡೌನ್ ನಿರ್ಬಂಧ ಹೇರಿದ ಕಾರಣ ಆಯೋಗದ ನಿತ್ಯದ ಕಾರ್ಯಚಟುವಟಿಕೆಗಳಲ್ಲಿ ತೊಂದರೆಯಾಯಿತು ಎಂದು ಆಯೋಗ ಕಾರಣ ನೀಡಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್​ಗೆ 83ರಿಂದ 168 ಪೈಸೆಗಳಷ್ಟು ಹೆಚ್ಚಳ ಕೋರಿದ್ದವು. ಪ್ರಸ್ತಾವನೆಗಳನ್ನು ಪರಿಶೀಲಿಸಿದ ಆಯೋಗವು ಶೇ 3.84ರ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಇದರಂತೆ ಏಕರೂಪದಲ್ಲಿ 30 ಪೈಸೆಗಳಷ್ಟು ದರ ಹೆಚ್ಚಳವಾಗಲಿದೆ.

ಇದರ ಜೊತೆಗೆ ಎಚ್​ಟಿ ಕೈಗಾರಿಕೆಗಳಲ್ಲಿ ಬೆಳಿಗ್ಗೆ 6ರಿಂದ 10ರ ಪೀಕ್ ಅವಧಿಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ ವಿಧಿಸುತ್ತಿದ್ದ ₹ 1ರ ದಂಡವನ್ನು ಹಿಂಪಡೆಯಲಾಗಿದೆ. ಎಲ್​ಟಿ ಮಂಜೂರಾತಿ ಮಿತಿಯನ್ನು 150 ಕಿಲೋವ್ಯಾಟ್​ಗೆ ಹೆಚ್ಚಿಸಲಾಗಿದೆ. ಗೃಹಬಳಕೆ ವಿಭಾಗದಲ್ಲಿ ಮೊದಲ ಹಂತವನ್ನು (First Slab) 30 ಯೂನಿಟ್​ಗಳಿಂದ 50 ಯೂನಿಟ್​ಗಳಿಗೆ ಹೆಚ್ಚಿಸಲಾಗಿದೆ. ಸಾರ್ವಜನಿಕ ಬೀದಿದೀಪಗಳಲ್ಲಿ ಎಲ್​ಇಡಿ ಬಲ್ಬ್​ ಬಳಕೆಗೆ ಪ್ರತಿ ಯೂನಿಟ್​ಗೆ ₹1.05 ರಿಯಾಯ್ತಿ ಮುಂದುವರಿಸಲಾಗುವುದು ಎಂದು ಆಯೋಗವು ಸ್ಪಷ್ಟಪಡಿಸಿದೆ.

(Karnataka Electricity Price Hike KERC Approves Customers have to pay from October)

ಇದನ್ನೂ ಓದಿ: Save Electricity: ವಿದ್ಯುತ್​ ಖರ್ಚು ಮಾಡದೇ ಎಸಿ ಬಳಸಿ; ತಿಂಗಳಿಗೆ ಸುಮಾರು 4,000 ರೂಪಾಯಿ ಉಳಿಸಿ

ಇದನ್ನೂ ಓದಿ: ಕಾಂಗ್ರೆಸ್‌ ಲಸಿಕೆ ಪ್ರಸ್ತಾವನೆ ತಿರಸ್ಕರಿಸಿದ ರಾಜ್ಯ ಸರ್ಕಾರ; ಸಿದ್ದರಾಮಯ್ಯಗೆ ಪತ್ರ ಬರೆದು ಸೂಚನೆ

Published On - 5:38 pm, Wed, 9 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್