AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ: ಆರ್ ಅಶೋಕ ವಾಗ್ದಾಳಿ

ಕರ್ನಾಟಕ ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯದಂಗಡಿಗಳಿಂದ ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪದ ಬಗ್ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಗರಣದಲ್ಲಿ ಸಚಿವರ ಪಾತ್ರವನ್ನು ಪ್ರಶ್ನಿಸಿದ್ದಾರೆ.

ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ: ಆರ್ ಅಶೋಕ ವಾಗ್ದಾಳಿ
ಆರ್ ಅಶೋಕ್ (ಸಂಗ್ರಹ ಚಿತ್ರ)Image Credit source: PTI
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on:Nov 06, 2024 | 11:13 AM

Share

ಬೆಂಗಳೂರು, ನವೆಂಬರ್ 6: ಕರ್ನಾಟಕ ಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್​​ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.

ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.

ಪ್ರತಿನಿತ್ಯ ಸಚಿವರಿಂದ ಲೂಟಿ ನಡೆಯುತ್ತಿದೆ: ಅಶೋಕ್

ಲೋಕಾಯುಕ್ತ ಅಧಿಕಾರಿಗಳಿಂದ ಸಿದ್ದರಾಮಯ್ಯ ವಿಚಾರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ, ನಾಚಿಕೆ ಆಗಲ್ವಾ ಎಂದು ಅಶೋಕ್ ಪ್ರಶ್ನಿಸಿದರು.

ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ: ಅಶೋಕ್ ಪ್ರಶ್ನೆ

ಬೆಳಗ್ಗೆ ವಿಚಾರಣೆ ಅಂತೆ, ಮಧ್ಯಾಹ್ನ ಪ್ರಚಾರ ಅಂತೆ. ಸಿಎಂ ಮೊದಲೇ ಟೈಮ್ ಫಿಕ್ಸ್ ಮಾಡಿಕೊಂಡು ಹೋಗಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ತನಿಖಾಧಿಕಾರಿಗಳು ಎಷ್ಟು ಹೊತ್ತು ವಿಚಾರಣೆ ನಡೆಸ್ತಾರೆಂದು ಗೊತ್ತಾ? ಇವರೇ ಲೋಕಾಯುಕ್ತ ವಿಚಾರಣೆಗೆ ಸಮಯ ನಿಗದಿ ಮಾಡಿದ್ದಾರಾ ಎಂದು ಅಶೋಕ್ ಪ್ರಶ್ನೆಗಳ ಮಳೆಗೈದರು.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಮಂಗಳವಾರ ​​ಆರೋಪಿಸಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:12 am, Wed, 6 November 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ