AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್ ಮಾರಾಟ ಭಾರೀ ಜಿಗಿತ: ಒಂದೇ ತಿಂಗಳಲ್ಲಿ ಅಬಕಾರಿ ಆದಾಯ ಶೇ 14.84 ರಷ್ಟು ಏರಿಕೆ!

ರಾಜ್ಯ ಸರ್ಕಾರ ಜಾರಿಗೆ ತಂದ ಅಬಕಾರಿ ಸುಧಾರಣೆಗಳು ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಬಿಯರ್ ಬೆಲೆ ಕಡಿತದ ಬೆನ್ನಲ್ಲೇ ಕರ್ನಾಟಕದಲ್ಲಿ ಬಿಯರ್ ಮಾರಾಟ ಶೇ 54.67 ರಷ್ಟು ಏರಿಕೆ ಕಂಡಿದೆ. ಇದರಿಂದಾಗಿ ಕೇವಲ ಒಂದೇ ತಿಂಗಳಲ್ಲಿ ರಾಜ್ಯದ ಅಬಕಾರಿ ಕಂದಾಯ ಸಂಗ್ರಹಣೆಯಲ್ಲಿ ಶೇ 14.84 ರಷ್ಟು ಗಣನೀಯ ಪ್ರಗತಿ ದಾಖಲಾಗಿದೆ.

ಬಿಯರ್ ಮಾರಾಟ ಭಾರೀ ಜಿಗಿತ: ಒಂದೇ ತಿಂಗಳಲ್ಲಿ ಅಬಕಾರಿ ಆದಾಯ ಶೇ 14.84 ರಷ್ಟು ಏರಿಕೆ!
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jun 24, 2026 | 9:01 AM

Share

ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಅಬಕಾರಿ ಸುಧಾರಣೆಗಳು ಮತ್ತು ಹೊಸ ದರ ಪರಿಷ್ಕರಣೆ ನೀತಿಯು ಖಜಾನೆಗೆ ಭಾರೀ ಆದಾಯ ತಂದುಕೊಟ್ಟಿದೆ. ಕಡಿಮೆ ಪ್ರಮಾಣದ ಆಲ್ಕೋಹಾಲ್ ಅಂಶ ಹೊಂದಿರುವ ಕೆಲವು ಬಿಯರ್ ಬ್ರ್ಯಾಂಡ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿಯರ್ ಮಾರಾಟ ಭಾರೀ ಪ್ರಮಾಣದಲ್ಲಿ ಜಿಗಿತ ಕಂಡಿದೆ. ಹೊಸ ದರ ಪಟ್ಟಿ ಅನುಷ್ಠಾನಕ್ಕೆ ಬಂದ ಮೇ 11 ರಿಂದ ಜೂನ್ 11 ರವರೆಗಿನ ಒಂದು ತಿಂಗಳ ಅವಧಿಯಲ್ಲಿ ರಾಜ್ಯದ ಅಬಕಾರಿ ಕಂದಾಯ ಸಂಗ್ರಹಣೆ ಬರೋಬ್ಬರಿ ಶೇ 14.84 ರಷ್ಟು ಹೆಚ್ಚಳವಾಗಿದೆ.

ಮುಖ್ಯಾಂಶಗಳು

  • ಬಿಯರ್ ಮಾರಾಟ ಶೇ 54.67 ಭಾರಿ ಏರಿಕೆ.
  • ಒಂದೇ ತಿಂಗಳಲ್ಲಿ 3745 ಕೋಟಿ ರೂ. ಸರ್ಕಾರದ ಖಜಾನೆಗೆ.
  • ಐಎಂಎಲ್ ಲಿಕ್ಕರ್ ಮಾರಾಟದಲ್ಲಿ ಅಲ್ಪ ಕುಸಿತ.

ದಾಖಲೆ ಬರೆದ ಬಿಯರ್ ಕೌಂಟ್: ಐಎಂಎಲ್ ಕುಸಿತ

ಮೇ 11 ರಿಂದ ಜೂನ್ 11 ರವರೆಗಿನ ಅವಧಿಯಲ್ಲಿ ಬರೋಬ್ಬರಿ 54.6 ಲಕ್ಷ ಕೇಸ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ (35.3 ಲಕ್ಷ ಕೇಸ್) ಭಾರೀ ಏರಿಕೆ ದಾಖಲಾಗಿದೆ. ಆದರೆ, ಇದೇ ಅವಧಿಯಲ್ಲಿ ಭಾರತೀಯ ತಯಾರಿಕೆಯ ವಿದೇಶಿ ಮದ್ಯ (IML) ಮಾರಾಟದಲ್ಲಿ ಶೇ 0.35 ರಷ್ಟು ಅಲ್ಪ ಕುಸಿತ ಕಂಡುಬಂದಿದೆ. ಕಳೆದ ವರ್ಷ 54.74 ಲಕ್ಷ ಕೇಸ್ ಇದ್ದ ಐಎಂಎಲ್ ಮಾರಾಟ ಈ ಬಾರಿ 54.55 ಲಕ್ಷ ಕೇಸ್‌ಗಳಿಗೆ ಇಳಿಕೆಯಾಗಿದೆ. ಬಿಯರ್ ಬಳಕೆಯ ಹೆಚ್ಚಳದಿಂದಾಗಿ ರಾಜ್ಯದ ಒಟ್ಟು ಅಬಕಾರಿ ಆದಾಯವು ಕಳೆದ ವರ್ಷದ 3,261.24 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಈ ಬಾರಿ 3,745.14 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ.

ಬೆಲೆ ಕಡಿತ ಮತ್ತು ಬಿಸಿಲಿನ ಎಫೆಕ್ಟ್

ಕಳೆದ 2025-26 ರ ಆರ್ಥಿಕ ಸಾಲಿನಲ್ಲಿ ಬಿಯರ್ ಮಾರಾಟವು ಶೇ 11.3 ರಷ್ಟು ಕುಸಿತ ಕಂಡು ಒಟ್ಟು ಮಾರಾಟ 399.29 ಲಕ್ಷ ಕೇಸ್‌ಗಳಿಗೆ ಇಳಿದಿತ್ತು. ಆದರೆ ಈ ಬಾರಿ ಸರ್ಕಾರ ಜಾರಿಗೆ ತಂದ ಹೊಸ ಆಲ್ಕೋಹಾಲ್ ಆಧಾರಿತ ತೆರಿಗೆ ನೀತಿ ಮತ್ತು ರಾಜ್ಯದಲ್ಲಿದ್ದ ತೀವ್ರ ಬಿಸಿಲಿನ ವಾತಾವರಣದಿಂದಾಗಿ ಬಿಯರ್ ಮಾರಾಟ ಮರಳಿ ಚೇತರಿಸಿಕೊಂಡಿದೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಗುಡ್, ಬ್ಯಾಡ್ ನ್ಯೂಸ್: ಇಳಿಕೆಯಾಗಲಿದೆ ಪ್ರೀಮಿಯಂ ಸ್ಕಾಚ್ ದರ, ದುಬಾರಿಯಾಗಲಿದೆ ಬಡವರ ಮದ್ಯ

ಮುಂಬರುವ ದಿನಗಳಲ್ಲಿ ಮುಂಗಾರು ಮಳೆಯಿಂದಾಗಿ ಹವಾಮಾನ ತಂಪಾಗಲಿದ್ದು, ಮಾರಾಟದಲ್ಲಿ ಸ್ವಲ್ಪ ಏರಿಳಿತವಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದಾಗ್ಯೂ, ಸರ್ಕಾರದ ಈ ಹೊಸ ಪ್ರಯೋಗ ಮದ್ಯದ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿರುವುದಂತೂ ನಿಜ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ