Karnataka Rains: ಕರ್ನಾಟಕದ ಹಲವೆಡೆ ಮಹಾಮಳೆ; 6 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬಿಎಸ್ ಯಡಿಯೂರಪ್ಪ ಸಭೆ

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೀಗೆ ಸೂಚನೆ ನೀಡಿದ್ದಾರೆ. ಗೃಹಕಚೇರಿ ಕೃಷ್ಣಾದಿಂದ ಸಿಎಂ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

Karnataka Rains: ಕರ್ನಾಟಕದ ಹಲವೆಡೆ ಮಹಾಮಳೆ; 6 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬಿಎಸ್ ಯಡಿಯೂರಪ್ಪ ಸಭೆ
ಬಿ.ಎಸ್.ಯಡಿಯೂರಪ್ಪ
Edited By:

Updated on: Jul 23, 2021 | 7:36 PM

ಬೆಂಗಳೂರು: ಕರ್ನಾಟಕ ರಾಜ್ಯದ ಹಲವೆಡೆ ಮಹಾಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ 6 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಯಡಿಯೂರಪ್ಪ ಡಿಸಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳ ನಿವಾಸಿಗಳನ್ನು ಸ್ಥಳಾಂತರಿಸಿ. ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಪ್ರವಾಹ ಪೀಡಿತ ಗ್ರಾಮದ ನಿವಾಸಿಗಳನ್ನು ಸ್ಥಳಾಂತರಿಸಿ. ಪ್ರವಾಹ ಸಾಧ್ಯತೆಯಿರುವ ಗ್ರಾಮಸ್ಥರನ್ನೂ ಸ್ಥಳಾಂತರಿಸಿ. NDRF, SDRF ತಂಡಗಳನ್ನು ಜಿಲ್ಲೆಗಳಿಗೆ ತುರ್ತಾಗಿ ಕಳಿಸಿ. ಅಗತ್ಯವಿರುವ ಜಿಲ್ಲೆಗಳಿಗೆ ತುರ್ತಾಗಿ ತಂಡಗಳನ್ನು ಕಳಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದಷ್ಟು ಹೆಚ್ಚು ಕಾಳಜಿ ಕೇಂದ್ರ ತೆರೆದು ಸರ್ವ ಸನ್ನದ್ಧಗೊಳಿಸಿ. ಅಧಿಕಾರಿಗಳು ರಜೆ ಹಾಕದೇ ಕೆಲಸ‌ ಮಾಡಬೇಕು ಎಂದು ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.

ಹಣಕಾಸಿನ‌ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಿ. ಸೇನಾ ಹೆಲಿಕಾಪ್ಟರ್‌ಗಳನ್ನು‌ ಸನ್ನದ್ಧವಾಗಿಟ್ಟುಕೊಳ್ಳಬೇಕು. ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ‌ ಕೆಲಸ‌ ಮಾಡಬೇಕು. ಮುಂದಿನ‌ 48ಗಂಟೆ ಏನಾಗುತ್ತೆಂದು ಅಂದಾಜಿಸಿ ಕೆಲಸ‌ ಮಾಡಿ ಎಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ 6 ಜಿಲ್ಲಾಧಿಕಾರಿಗಳಿಗೆ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೀಗೆ ಸೂಚನೆ ನೀಡಿದ್ದಾರೆ. ಗೃಹಕಚೇರಿ ಕೃಷ್ಣಾದಿಂದ ಸಿಎಂ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಉಕ್ಕಿ ಹರಿಯುತ್ತಿವೆ ಹಲವು ನದಿಗಳು, ವಿವಿಧೆಡೆ ರಸ್ತೆ ಸಂಪರ್ಕ ಕಡಿತ, ಗುಡ್ಡಕುಸಿತ

Karnataka Rain: ಮಲೆನಾಡಿನಲ್ಲಿ ಮಳೆ ಅಬ್ಬರ; ಕೊಚ್ಚಿ ಹೋದ ಹೆದ್ದಾರಿ, ಗದ್ದೆಗಳಿಗೆ ನುಗ್ಗಿತು ನದಿ ನೀರು

(Karnataka Faces Heavy Rainfall CM BS Yediyurappa holds Meeting with Dcs of Six Districts)