ರಾಜ್ಯದ ರೈತರು ಪೊಲೀಸರ ವಶಕ್ಕೆ: ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿಗೆ ಹೊರಟಿದ್ದ ನಮ್ಮ ರಾಜ್ಯದ ರೈತರನ್ನು ವಶಕ್ಕೆ ಪಡೆದು ಪೊಲೀಸರು ವಾರಾಣಸಿಗೆ ಸ್ಥಳಾಂತರಿಸುತ್ತಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆ ಮಾಡಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರಿ​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದ ರೈತರು ಪೊಲೀಸರ ವಶಕ್ಕೆ: ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಧ್ಯಪ್ರದೇಶ ಸಿಎಂಗೆ ಸಿದ್ದರಾಮಯ್ಯ ಪತ್ರ
Follow us
Anil Kalkere
| Updated By: ವಿವೇಕ ಬಿರಾದಾರ

Updated on:Feb 15, 2024 | 1:14 PM

ಬೆಂಗಳೂರು, ಫೆಬ್ರವರಿ 15: ದೆಹಲಿಗೆ (Delhi) ಹೊರಟಿದ್ದ ನಮ್ಮ ರಾಜ್ಯದ ರೈತರನ್ನು (Farmers) ವಶಕ್ಕೆ ಪಡೆದು ಪೊಲೀಸರು (Police) ವಾರಾಣಸಿಗೆ ಸ್ಥಳಾಂತರಿಸುತ್ತಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆ ಮಾಡಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ (Mohan Yadav) ಅವರಿ​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪತ್ರ ಬರೆದು ಮನವಿ ಮಾಡಿದ್ದಾರೆ. ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು‌, ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ನಮ್ಮ ರೈತರನ್ನು ವಶಕ್ಕೆ ಪಡೆದು ನಾಲ್ಕು ದಿವಸವಾಗಿದೆ. ಹೀಗಾಗಿ ರೈತರನ್ನು ಸ್ಥಳಾಂತರಿಸದೆ ಕೂಡಲೆ ಬಿಡುಗಡೆಗೊಳಿಸುವಂತೆ ಪತ್ರದ ಮೂಲಕ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ರೈತರ ಯೋಗಕ್ಷೇಮ ವಿಚಾರಿಸಿದರು.

ರೈತರು ಪೊಲೀಸರ ವಶಕ್ಕೆ ಏಕೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯದ 70 ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ದೆಹಲಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ಪೊಲೀಸರು ಸೋಮವಾರ (ಫೆ.12) ವಶಕ್ಕೆ ಪಡೆದಿದ್ದರು. ಧಾರವಾಡ ಜಿಲ್ಲೆಯ 16 ರೈತರು ಕೂಡ ಇದರಲ್ಲಿ ಸೇರಿದ್ದಾರೆ.

ಇದನ್ನೂ ಓದಿ: Delhi Chalo: ಅಶ್ರುವಾಯು ಶೆಲ್‌ಗಳನ್ನು ಹೊತ್ತ ಡ್ರೋನ್‌ಗಳನ್ನು ಎದುರಿಸಲು ಗಾಳಿಪಟ ಹಾರಿಸಿದ ರೈತರು

ವಶಕ್ಕೆ ಪಡೆಯಲಾಗಿರುವ ರೈತರನ್ನು ಕಲ್ಯಾಣ ಮಂಟಪವೊಂದರಲ್ಲಿ ಇರಿಸಿಕೊಳ್ಳಲಾಗಿತ್ತು. ಅಲ್ಲಿಯೇ ‘ರೈತ ವಿರೋಧಿ ಮಧ್ಯಪ್ರದೇಶ ಪೊಲೀಸರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ರತರು ಆಕ್ರೋಶ ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದರು.

ಸದನದಲ್ಲಿ ಪ್ರಸ್ತಾಪ

ಇನ್ನು ರಾಜ್ಯ ರೈತರನ್ನು ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರದೇಶ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಬೇಕೆಂದು ಕರ್ನಾಟಕ ಜಂಟಿ ಅಧಿವೇಶನದಲ್ಲಿ ಸದಸ್ಯರು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:02 pm, Thu, 15 February 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ