ಬೆಂಗಳೂರು: ಇಂದು ಇಲಾಖೆ ವೆಬ್ಸೈಟ್ನಲ್ಲಿ ಪ್ರಥಮ ಪಿಯು ಫಲಿತಾಂಶ ಪ್ರಕಟಿಸುತ್ತೇವೆ. ಜುಲೈ 20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್. ಆರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳೂ ಪರೀಕ್ಕ್ಷ ಫಲಿತಾಂಶವನ್ನು ಲಿಂಕ್: sts.karnataka.gov.in ಅಧಿಕೃತ ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ. ಎಂದು ಅವರು ಮಾಹಿತಿ ನೀಡಿದರು.
ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಿಂಗ್ರೇಗೌಡ ಎಂಬುವರಿಂದ ಹೈಕೋರ್ಟ್ಗೆ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಕೋರಿ ಪಿಐಎಲ್ ದಾಖಲಾಗಿದ್ದು, ಕೊವಿಡ್ನಿಂದ ಸರ್ಕಾರ ಪಿಯು ಪರೀಕ್ಷೆ ರದ್ದು ಮಾಡಿದೆ. ಹೀಗಾಗಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನೂ ರದ್ದು ಮಾಡಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಈ ಮುನ್ನವೇ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಾಂಗ ನಿಗದಿಪಡಿಸಲಾಗಿದೆ. ಜುಲೈ 19 ಮತ್ತು ಜುಲೈ 22ರಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಘೋಷಿಸಲಾಗಿದ್ದು, ಪರೀಕ್ಷೆ ರದ್ದುಗೊಳಿಸುವಂತೆ ಇದೀಗ ಅರ್ಜಿ ಸಲ್ಲಿಸಲಾಗಿದೆ.
ನಿಗದಿಪಡಿಸಿರುವ ವೇಳಾಪಟ್ಟಿ ಇಲ್ಲಿದೆ
ಜುಲೈ 19ರಂದು(ಸೋಮವಾರ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಅದೇ ದಿನ ಮಧ್ಯಾಹ್ನ ಕಿರಿಯ ತಾಂತ್ರಿಕ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜುಲೈ 22ರಂದು (ಗುರುವಾರ) ಬೆಳಗ್ಗೆ 10.30ರಿಂದ 1.30ರ ತನಕ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್) ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಜೂನ್ 30ರಂದು ಪರೀಕ್ಷಾ ಹಾಲ್ಟಿಕೆಟ್ಗಳನ್ನು ಶಾಲೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
Published On - 5:23 pm, Thu, 8 July 21