Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ

ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ ಜನಗಣತಿ ಮಾಡಲು ನಿರ್ಧರಿಸಿದೆ.

Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ
ಸಾಂಧರ್ಬಿಕ ಚಿತ್ರ
Follow us
|

Updated on:Mar 06, 2023 | 8:33 AM

ಮೈಸೂರು: ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು (Karnataka Government) ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ (Transgender) ಜನಗಣತಿ (Survey) ಮಾಡಲು ನಿರ್ಧರಿಸಿದೆ. ಈ ಸಮೀಕ್ಷೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತದೆ. ಪ್ರಾಯೋಗಿಕವಾಗಿ ಮೈಸೂರು (Mysore) ಮತ್ತು ವಿಜಯಪುರ (Vijaypura) ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಮಾರ್ಚ್​ 10 ರಿಂದ 24ರವರೆಗೆ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಯಿಂದ ತೃತೀಯಲಿಂಗಿಗಳ ಜನಸಂಖ್ಯೆ ತಿಳಿಯುತ್ತದೆ. ಹಾಗೆ ಅವರ ಸಾಮಾಜಿ ಮತ್ತು ಆರ್ಥಿಕ ಪರೀಸ್ಥಿತಿ ಬಗ್ಗೆಯೂ ಗೊತ್ತಾಗುತ್ತದೆ. ಇದರಿಂದ ಸರ್ಕಾರಕ್ಕೆ ಸಮುದಯಾದ ಸಬಲೀಕರಣಕ್ಕಾಗಿ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸಲು ಅನುಕೂಲವಾಗುತ್ತದೆ.

ಮೈಸೂರು ಜಿಲ್ಲೆಯಲ್ಲಿ ಮಾರ್ಚ್​ 10 ರಿಂದ ಸಮೀಕ್ಷೆ ಪ್ರಾರಂಭವಾಗಲಿದ್ದು, 45 ದಿನಗಳ ಕಾಲ ಸಮೀಕ್ಷೆ ನಡೆಯುತ್ತದೆ. ಸಮೀಕ್ಷೆಯನ್ನು ತೃತೀಯಲಿಂಗಿಗಳ ಮೂಲಕವೇ ನಡೆಸಲಾಗುತ್ತದೆ. ತಾಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ. ಬಸವರಾಜು ಅವರು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮೀಕ್ಷೆಯ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೈಸೂರಿನ ತೃತೀಯಲಿಂಗಿ ಸಮುದಾಯದ ಪ್ರಮುಖರಲ್ಲಿ ಒಬ್ಬರಾದ ಪ್ರಣತಿ ಪ್ರಕಾಶ್ ಮಾತನಾಡಿ ಈ ಸಮೀಕ್ಷೆಯನ್ನು ತೃತೀಯಲಿಂಗಿ ಸಮುದಾಯದ ಸದಸ್ಯರೇ ನಡೆಸುತ್ತಾರೆ ಎಂದು ವಿವರಿಸಿದರು.

ತೃತೀಯಲಿಂಗಿಗಳ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಮತ್ತು ಇತರ ಜೀವನ ಪರಿಸ್ಥಿತಿಗಳನ್ನು ಕಂಡುಹಿಡಿಯುವುದು ಸಮೀಕ್ಷೆಯ ಹಿಂದಿನ ಆಲೋಚನೆಯಾಗಿದೆ. ಸಮೀಕ್ಷೆಯನ್ನು ತಾಲೂಕು ಕೇಂದ್ರದಲ್ಲಿ ಮಾಡಲಾಗುವುದು. ನಿಗದಿತ ದಿನಾಂಕದಂದು ಹತ್ತಿರದ ಪ್ರದೇಶಗಳ ತೃತೀಯಲಿಂಗಿಗಳು ಸಮೀಕ್ಷೆಯಲ್ಲಿ ಭಾಗಿಯಾಗಬೇಕು. ಮುಂಬೈ ಮುಂತಾದ ಮಹಾನಗರಗಳಿಗೆ ವಲಸೆ ಹೋದವರು ನಿಗದಿತ ದಿನದಂದು ಸಮೀಕ್ಷೆಗೆ ಹಾಜರಾಗಬೇಕು ಎಂದರು.

ಮೈಸೂರು ಜಿಲ್ಲೆಯಿಂದ ಒಟ್ಟು 9 ಮಂದಿ ಸಮೀಕ್ಷೆ ನಡೆಸುವ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮೀಕ್ಷೆಯ ನಂತರ, ಎಲ್ಲ ತೃತೀಯಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್‌ಗಳು ಸಹಾಯವಾಗುತ್ತದೆ. ಈ ಸಮೀಕ್ಷೆಯು ಜಿಲ್ಲೆಯ ಸಮುದಾಯದ ನೈಜ ಚಿತ್ರಣವನ್ನು ನೀಡುವ ನಿರೀಕ್ಷೆಯಿದೆ. ತೃತೀಯ ಲಿಂಗಿಗಳು ಈಗ ಒಂದಾಗಿದ್ದಾರೆ. ಮತ್ತು ಸಮಾಜದ ಮುನ್ನಲೆಗೆ ಬರುತ್ತಿದ್ದಾರೆ ಹೆಮ್ಮೆ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 am, Mon, 6 March 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ