AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

ಇರಾನ್-ಇಸ್ರೇಲ್ ನಡುವಿನ ಯುದ್ಧ ಪರಿಣಾಮ ಭಾರತದ ಮೇಲೆ ಬೀರಿದೆ. ಎಲ್‌ಪಿಜಿ (LPG) ಸಿಲಿಂಡರ್ ಪೂರೈಕೆಯ ಬಗ್ಗೆ ಜನರಲ್ಲಿ ಆತಂಕ ಹೆಚ್ಚಾಗಿದೆ. ವಿಶೇಷವಾಗಿ ಅಡುಗೆ ಅನಿಲದ ಕೊರತೆ ಎದುರಾಗಬಹುದೇ ಎಂದು ಸಾಮಾನ್ಯ ಗ್ರಾಹಕರು ಕಳವಳಗೊಂಡಿದ್ದಾರೆ. ಅದರಲ್ಲೂ ಕರ್ನಾಟಕದಲ್ಲಿ ಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಹೆಚ್ಚಾಗಿದ್ದು, ಇದೀಗ ಈ ಬಗ್ಗೆ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ ನೀಡಿದೆ.

ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ
Lpg Cylinder
ರಮೇಶ್ ಬಿ. ಜವಳಗೇರಾ
|

Updated on: Mar 12, 2026 | 10:23 PM

Share

​ಬೆಂಗಳೂರು, (ಮಾರ್ಚ್ 12): ಕರ್ನಾಟಕದಲ್ಲಿ (Karnataka) ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಸಾಕಷ್ಟು ದಾಸ್ತಾನು ಲಭ್ಯತೆ

ರಾಜ್ಯ ಸರ್ಕಾರವು ಪ್ರಮುಖ ತೈಲ ಕಂಪನಿಗಳಾದ IOC, BPC ಮತ್ತು HPC ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಿದೆ. ರಾಜ್ಯದಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಮತ್ತು ಮುಂಬರುವ ದಿನಗಳಿಗೂ ಸರಿಹೊಂದುವಷ್ಟು ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದು ತೈಲ ಕಂಪನಿಗಳು ದೃಢಪಡಿಸಿವೆ ಅಂತ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

​ಸಾರ್ವಜನಿಕರಿಗೆ ಮನವಿ

ಆತಂಕ ಬೇಡ: ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಅನಗತ್ಯ ಬುಕಿಂಗ್ ಬೇಡ: ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಆತಂಕದಿಂದ ಸಾರ್ವಜನಿಕರು ಅನಗತ್ಯವಾಗಿ ಸಿಲಿಂಡರ್‌ಗಳನ್ನು ಮುಂಗಡವಾಗಿ ಬುಕ್ ಮಾಡುವುದು ಅಥವಾ ಸಂಗ್ರಹಿಸಿಡುವುದನ್ನು ಮಾಡಬಾರದು. ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗದಂತೆ ಸಹಕರಿಸಲು ಕೋರಲಾಗಿದೆ.

ಆದ್ಯತಾ ವಲಯಗಳಿಗೆ ಪೂರೈಕೆ

​ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಅಗತ್ಯ ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿನಿಲಯಗಳು ಮತ್ತು ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಕಾಲೇಜುಗಳ ಬಿಸಿಯೂಟ ಯೋಜನೆಗಳು ಮತ್ತು ಕಾರಾಗೃಹಗಳು ಮತ್ತು ಇತರ ಸರ್ಕಾರಿ ಸಂಸ್ಥೆಗಳಿಗೆ , ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಹಾಗೂ ವ್ಯತ್ಯಯವಾಗದಂತೆ ಕ್ರಮ ವಹಿಸಲು ತೈಲ ಕಂಪನಿಗಳಿಗೆ ಸೂಚಿಸಿದೆ.

ಕಾನೂನು ಕ್ರಮದ ಎಚ್ಚರಿಕೆ

ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಡುವುದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು ಅಥವಾ ರೀಫಿಲ್ಲಿಂಗ್ (Refilling) ದಂಧೆಯಲ್ಲಿ ತೊಡಗುವುದು ಕಂಡುಬಂದಲ್ಲಿ Essential Commodities Act 1955 (ಅಗತ್ಯ ವಸ್ತುಗಳ ಕಾಯ್ದೆ), LPG Control Order 2000 ಮತ್ತು​ Petroleum Products Order 1999 ರ ಕಾಯ್ದೆಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಡಳಿತಕ್ಕೆ ಸೂಚನೆ

ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಎಲ್‌ಪಿಜಿ ವಿತರಣಾ ಕೇಂದ್ರಗಳ ಮೇಲೆ ನಿಗಾ ಇಡಲು ಮತ್ತು ಸುಗಮ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us