AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಇಲಾಖೆಯಿಂದ ರಾಜ್ಯದ ಹಲವು ಮಳಿಗೆಗಳು, ಹೋಟೆಲ್​​ಗಳಿಗೆ ನೋಟಿಸ್​, ಭಾರಿ ದಂಡ

ರಾಜ್ಯಾದ್ಯಂತ ಆಹಾರ ಇಲಾಖೆ ನಡೆಸಿದ ತಪಾಸಣೆಯಲ್ಲಿ ಅನೇಕ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಅನುಸರಿಸಬೇಕಾದ ನೈರ್ಮಲ್ಯದ ಮಾನದಂಡಗಳನ್ನು ಉಲ್ಲಂಘಿಸಿರುವುದು ಪತ್ತೆಯಾಗಿದೆ. ಇದರಿಂದಾಗಿ ಅವುಗಳಿಗೆ ದಂಡ ಮತ್ತು ನೋಟಿಸ್ ಜಾರಿಗೊಳಿಸಲಾಗಿದೆ. ಬೀದಿಬದಿ ವ್ಯಾಪಾರ ಘಟಕಗಳು ಮತ್ತು ಅಂಗನವಾಡಿ ಕೇಂದ್ರಗಳ ಮೇಲೂ ಪರಿಶೀಲನೆ ನಡೆಸಲಾಗಿದೆ. ಔಷಧ ಮಳಿಗೆಗಳು ಮತ್ತು ರಕ್ತ ಕೇಂದ್ರಗಳ ಮೇಲೆ ಕೂಡ ಕ್ರಮ ಕೈಗೊಳ್ಳಲಾಗಿದೆ.

ಆಹಾರ ಇಲಾಖೆಯಿಂದ ರಾಜ್ಯದ ಹಲವು ಮಳಿಗೆಗಳು, ಹೋಟೆಲ್​​ಗಳಿಗೆ ನೋಟಿಸ್​, ಭಾರಿ ದಂಡ
ಆಹಾರ ಇಲಾಖೆ
Vinay Kashappanavar
| Updated By: ವಿವೇಕ ಬಿರಾದಾರ|

Updated on:Jul 11, 2025 | 9:08 PM

Share

ಬೆಂಗಳೂರು, ಜುಲೈ 11: ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆಹಾರ ಇಲಾಖೆ (Food Department) ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಹೊಟೇಲ್ (Hotel)​, ರೆಸ್ಟೋರೆಂಟ್​, ಬೀದಿ ಬದಿ ವ್ಯಾಪಾರ ಘಟಕಗಳಲ್ಲಿ ಪರಿಶೀಲನೆ ನಡೆಸಿದೆ. ಆಹಾರ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಕಳಪೆ ಗುಣಮಟ್ಟದ ಆಹಾರ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆಯು ಹೊಟೇಲ್​, ರೆಸ್ಟೋರೆಂಟ್​ ಮತ್ತು ಬೀದಿ ಬದಿ ವ್ಯಾಪಾರ ಘಟಕಗಳಿಗೆ ನೋಟಿಸ್​ ನೀಡಿ, ದಂಡ ವಿಧಿಸಿದೆ.

ಆಹಾರ ಇಲಾಖೆಯು ರಾಜ್ಯಾದ್ಯಂತ 720 ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಪರಿಶೀಲನೆ ನಡೆಸಿದೆ. 183 ಘಟಕಗಳಿಗೆ ನೋಟಿಸ್ ನೀಡಿ, 21,500 ರೂ. ದಂಡ ವಿಧಿಸಿದೆ. ರಾಜ್ಯಾದ್ಯಂತ 1,557 ಬೀದಿಬದಿ ವ್ಯಾಪಾರ ಘಟಕಗಳನ್ನು ಪರಿಶೀಲಿಸಿ 406 ಘಟಕಗಳಿಗೆ ನೋಟಿಸ್ ನೀಡಿ 44,500 ದಂಡ ವಿಧಿಸಲಾಗಿದೆ. 866 ಘಟಕಗಳಿಗೆ ಉಚಿತ ನೋಂದಣಿ ಒದಗಿಸಲಾಗಿದ್ದು, 1,240 ಬೀದಿಬದಿ ಆಹಾರ ವ್ಯಾಪಾರಿಗಳಿಗೆ ತರಬೇತಿ ನೀಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

184 ಬಸ್ ನಿಲ್ದಾಣಗಳಲ್ಲಿನ 871 ಆಹಾರ ಮಳಿಗೆಗಳನ್ನು ಪರಿವೀಕ್ಷಿಸಿ, 216 ಘಟಕಗಳಿಗೆ ನೋಟಿಸ್ ನೀಡಿ 55,000 ದಂಡ ವಿಧಿಸಲಾಗಿದೆ. 95 ಆಹಾರ ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಲಾಗಿದೆ. 234 ಕುಡಿಯುವ ನೀರಿನ ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಲಾಗಿದೆ. ಹೆಚ್ಚಿನ ಅಪಾಯದ ಹೈ ರಿಸ್ಕ್ ವರ್ಗದಡಿ ಬರುವ 1,492 ಆಹಾರ ಉದ್ದಿಮೆಗಳನ್ನು ತಪಾಸಣೆ ಮಾಡಿದ್ದು 415 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. 604 ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ 541 ಆಹಾರ ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಲಾಗಿದೆ ಹಾಗೂ 903 ಅಂಗನವಾಡಿ ಕೇಂದ್ರಗಳಿಗೆ ಉಚಿತ ನೋಂದಣಿ ಒದಗಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ
Image
ಜಿಲೇಬಿಯಲ್ಲಿ ಕೃತಕ ಬಣ್ಣ ಶಂಕೆ: ಮಾದರಿ ಸಂಗ್ರಹಕ್ಕೆ ಮುಂದಾದ ಆಹಾರ ಇಲಾಖೆ
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!
Image
ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

ಇದನ್ನೂ ಓದಿ: ಪನ್ನೀರ್ ಪ್ರಿಯರಿಗೆ ಶಾಕಿಂಗ್ ಸುದ್ದಿ: ಆಹಾರ ಇಲಾಖೆ ಪರೀಕ್ಷೆ ವೇಳೆ ಬ್ಯಾಕ್ಟೀರಿಯಾ ಅಂಶ ಪತ್ತೆ

ಔಷಧ ಅಂಗಡಿ, ಮಳಿಗೆಗಳ ವಿರುದ್ಧವೂ ಕ್ರಮ

ಜೂನ್ 2025 ರಲ್ಲಿ, ಔಷಧ ಆಡಳಿತ ವಿಭಾಗವು 2,544 ಔಷಧ ಮಳಿಗೆಗಳನ್ನು ಪರಿಶೀಲಿಸಿದೆ. ಈ ಪೈಕಿ 133 ಔಷಧ ಮಳಿಗೆಗಳ ಪರವಾನಿಗೆಗಳನ್ನು ಅಮಾನತುಗೊಳಿಸಿದೆ ಮತ್ತು 20 ಪರವಾನಿಗೆಗಳನ್ನು ರದ್ದುಗೊಳಿಸಿದೆ. ಬೆಂಗಳೂರು, ಹುಬ್ಬಳ್ಳಿ, ಮತ್ತು ಬಳ್ಳಾರಿಯಲ್ಲಿನ ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ 2025 ರ ಜೂನ್​ನಲ್ಲಿ 1,333 ಔಷಧ ಮಾದರಿಗಳನ್ನು ವಿಶ್ಲೇಷಿಸಲಾಗಿದೆ. ಇವುಗಳಲ್ಲಿ 1,292 ಉತ್ತಮ ಗುಣಮಟ್ಟದ್ದಾಗಿದ್ದರೆ, 41 ಗುಣಮಟ್ಟವಾಗಿಲ್ಲ ಎಂದು ತಿಳಿಸಿದೆ.

ಮಾದಕ ವಸ್ತುಗಳ ದುರ್ಬಳಕೆ ತಡೆಗಟ್ಟಲು ಜೂನ್ 24 ಮತ್ತು 25 ರಂದು 279 ವಿಶೇಷ ಪರಿವೀಕ್ಷಣೆಗಳನ್ನು ನಡೆಸಲಾಗಿದ್ದು, 233 ಔಷಧ ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. ಏಪ್ರಿಲ್​ನಿಂದ ಜೂನ್ ರವರೆಗೆ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ 1940 ರ ಉಲ್ಲಂಘನೆಗಾಗಿ 81 ಮೊಕದ್ದಮೆಗಳನ್ನು ನ್ಯಾಯಾಲಯಗಳಲ್ಲಿ ದಾಖಲಿಸಲಾಗಿದೆ. ಜೂನ್​​ನಲ್ಲಿ ಸುಮಾರು 40,48,436 ಮೌಲ್ಯದ ಗುಣಮಟ್ಟವಲ್ಲದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿದೆ. ರಾಜ್ಯದಲ್ಲಿನ ರಕ್ತ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು ಈ ಪೈಕಿ 122 ರಕ್ತ ಕೇಂದ್ರಗಳನ್ನು ಪರಿಶೀಲಿಸಿ 44 ಕೇಂದ್ರಗಳಿಗೆ ಕಾರಣ ಕೇಳುವ ನೋಟಿಸ್ ಮತ್ತು 80 ಕೇಂದ್ರಗಳಿಗೆ ಅನುಷ್ಠಾನ ಪತ್ರ ನೀಡಲಾಗಿದೆ ಎಂದು ಹೇಳಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Fri, 11 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ