AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಬಿಪಿಎಲ್ ಕಾರ್ಡ್​ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 12 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ

ಸತ್ಯ ಮರೆ ಮಾಚಿ, ಸುಳ್ಳು ಮಾಹಿತಿ ಕೊಟ್ಟು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ಕಾದಿದೆ. ಅಗತ್ಯ ಮಾನದಂಡ ಹೊರತಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಪಟ್ಟಿ ಸಿದ್ಧ ಮಾಡುವ ಮೂಲಕ ಆಹಾರ, ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ಮೇಜರ್ ಸರ್ಜರಿಗೆ ಮುಂದಾಗಿದೆ. ಕೆಲವೇ ದಿನಗಳಲ್ಲಿ ಲಕ್ಷಾಂತರ ಕಾರ್ಡ್​ಗಳು ರದ್ದಾಗುವುದು ಬಹುತೇಕ ಖಚಿತವಾಗಿದ್ದು, ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳು ಚುರುಕು ಪಡೆದಿವೆ.

ಅನರ್ಹ ಬಿಪಿಎಲ್ ಕಾರ್ಡ್​ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 12 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Sep 17, 2025 | 12:23 PM

Share

ಬೆಂಗಳೂರು, ಸೆಪ್ಟೆಂಬರ್ 17: ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್​ಗಳು (BPL Cards) ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಮೇಜರ್ ಸರ್ಜರಿಗೆ ಆಹಾರ ಇಲಾಖೆ ಮುಂದಾಗಿದೆ. ಹತ್ತಾರು ಎಕರೆ ಜಮೀನು, ಓಡಾಡಲು ಐಷಾರಾಮಿ ಕಾರು, ವಾಸ ಮಾಡಲು ಬಂಗಲೆ ಇರುವವರೂ ಪಡಿತರ ಚೀಟಿ ಪಡೆದು ರೇಷನ್ ಪಡೆಯುತ್ತಿದ್ದಾರೆ. ಅದೆಷ್ಟೋ ಜನ ಅದನ್ನು ತಿನ್ನುವುದೂ ಇಲ್ಲ. ಬದಲಿಗೆ ಸಿಕ್ಕ ದರಕ್ಕೆ ಮಾರಾಟ ಮಾಡುತ್ತಾರೆ. ಆದರೆ ನಿಜವಾಗಿಯೂ ಪಡಿತರ ಚೀಟಿ ಯಾರಿಗೆ ಸಿಗಬೇಕೋ ಅವರಿಗೆ ಸಿಗುತ್ತಿಲ್ಲ. ಹೀಗಾಗಿ ಅನರ್ಹರಿಗೆ ನೀಡಿರುವ ಬಿಪಿಎಲ್ ಕಾರ್ಡ್​ಗಳನ್ನ ರದ್ದು ಮಾಡಬೇಕು ಎನ್ನುವ ಕೂಗು ಆಗಾಗ್ಗೆ ಕೇಳಿ ಬರುತ್ತಿತ್ತು. ಇದೀಗ ಕೊನೆಗೂ ಎಚ್ಚೆತ್ತಿರುಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (Karnataka Food Department) ಮೇಜರ್ ಸರ್ಜರಿಗೆ ಮುಂದಾಗಿದೆ.

ಈ ಬಗ್ಗೆ ಸಚಿವ ಕೆಎಚ್​ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಅನರ್ಹರ ಕಾರ್ಡ್​ಗಳನ್ನು ರದ್ದು ಮಾಡಲು ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುವುದು ಎಂದಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ಪತ್ತೆ ಹಚ್ಚೋದು ಹೇಗೆ? ವಿಡಿಯೋದಲ್ಲಿದೆ ವಿವರ

ರಾಜ್ಯದಲ್ಲಿ ವಿತರಣೆ ಮಾಡಲಾಗಿರುವ 1.50 ಕೋಟಿಗೂ ಹೆಚ್ಚಿನ ಕಾರ್ಡ್​​ಗಳಲ್ಲಿ ಸುಮಾರು 12 ಲಕ್ಷ ಅನರ್ಹ, ಅನುಮಾನಾಸ್ಪದ ಎಂದು ಪಟ್ಟಿ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸುಳ್ಳು ಮಾಹಿತಿ ನೀಡಿರುವುದು ಕಂಡುಬಂದಿದೆ.

ಅನರ್ಹ ಬಿಪಿಎಲ್ ಕಾರ್ಡ್​​ಗಳ ವಿವರ

  • ಮೃತಪಟ್ಟವರ ಹೆಸರು ಡಿಲೀಟ್​​ ಮಾಡದೇ ಇರುವುದು – 1,446
  • ಅಂತರರಾಜ್ಯ ಪಡಿತರ ಚೀಟಿದಾರರು – 57,864
  • 25 ಲಕ್ಷ ರೂ.ಮೇಲಿನ ಜಿಎಸ್​ಟಿ ವ್ಯವಹಾರ – 2,684
  • 1.20 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ – 5,13,613
  • ಕಂಪನಿಗಳಲ್ಲಿ ಡೈರೆಕ್ಟರ್​ ಆಗಿರುವವರು – 19.690
  • 7.5 ಎಕರೆ ಹೆಚ್ಚಿನ ಜಮೀನು ಹೊಂದಿರುವವರು – 33,456
  • ಇ-ಕೆವೈಸಿ ಮಾಡಿಸದೆ ಇರುವವರು – 6,16,196
  • ಕಳೆದ ಆರು ತಿಂಗಳಿಂದ ರೇಷನ್​ ಪಡೆಯದವರು – 19,893

ಯಾರೆಲ್ಲ ಬಿಪಿಎಲ್ ಕಾರ್ಡ್ ಹೊಂದಿರಬಾರದು?

2017ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾನದಂಡಗಳ ಪ್ರಕಾರ, ಬಿಪಿಎಲ್​ ಕಾರ್ಡ್​ ಪಡೆಯಲು ಹಲವು ನಿಬಂಧನೆಗಳನ್ನು ಹೇರಲಾಗಿದೆ. ಸರ್ಕಾರಿ ನೌಕರಿಯಲ್ಲಿರಬಾರದು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಭೂಮಿ, ನಗರ ಪ್ರದೇಶದಲ್ಲಿ 1 ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ಭೂಮಿ ಹೊಂದಿರಬಾರದು, ನಾಲ್ಕು ಚಕ್ರದ ವಾಹನ ಇರಬಾರದು, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಮೀರಬಾರದು ಎಂಬಿತ್ಯಾದಿ ಮಾನದಂಡ ಹೇರಲಾಗಿದೆ. ಆದರೂ, ಅವ್ಯಾವುವೂ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ.

ನೀತಿ ಆಯೋಗದ ವರದಿ ಪ್ರಕಾರ 2021ನೇ ಸಾಲಿನಂತೆ ರಾಜ್ಯದಲ್ಲಿ ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬಗಳು ಶೇ 7.58 ಮಾತ್ರ. ಆದರೆ ವಿತರಣೆಯಾದ ಬಿಪಿಎಲ್​​ ಕಾರ್ಡ್​ಗಳು ಇದಕ್ಕೆ ಹೊಂದಾಣಿಕೆಯಾಗುತ್ತಿಲ್ಲ. ಹೀಗಾಗಿ ಹೊಸದಾಗಿ ಬಿಪಿಎಲ್​ ಕಾರ್ಡ್​ಗೆ ಅರ್ಜಿ ಸಲ್ಲಿಸಿರುವ ಮಂದಿಗೂ ಕಾರ್ಡ್​ ಸಿಗದೆ ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ಅನುಮಾನಸ್ಪದ 12 ಲಕ್ಷ ಕಾರ್ಡ್​​ಗಳಲ್ಲಿ 8 ಲಕ್ಷಕ್ಕೂ ಹೆಚ್ಚಿನ ಕಾರ್ಡ್​ಗಳು ಡಿಲೀಟ್​ ಆಗುವುದು ಬಹುತೇಕ ನಿಶ್ಚಿತ.

ಇದನ್ನೂ ಓದಿ: ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ; ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ವರದಿ: ಲಕ್ಷ್ಮಿ ನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Wed, 17 September 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!