AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ 40 ಲಕ್ಷಕ್ಕೂ ಅಧಿಕ ಮೌಲ್ಯದ ಗುಣಮಟ್ಟವಲ್ಲದ ಔಷಧಿಗಳು ಜಪ್ತಿ

ಜುಲೈನಲ್ಲಿ ಕರ್ನಾಟಕದಲ್ಲಿ 3489 ಆಹಾರ ಮಾದರಿಗಳ ಪರೀಕ್ಷೆ ನಡೆದಿದ್ದು, 35 ಮಾದರಿಗಳು ಅಸುರಕ್ಷಿತವಾಗಿವೆ ಎಂದು ಕಂಡುಬಂದಿದೆ. 1557 ಬೀದಿ ಆಹಾರ ಘಟಕಗಳ ತಪಾಸಣೆಯಲ್ಲಿ 406 ಘಟಕಗಳಿಗೆ ನೋಟೀಸ್ ಜಾರಿಯಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅನುತ್ತಮ ಗುಣಮಟ್ಟದ ಆಹಾರ ಮತ್ತು ಔಷಧಿಗಳ ಮಾರಾಟ ತಡೆಗಟ್ಟಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ರಾಜ್ಯಾದ್ಯಂತ 40 ಲಕ್ಷಕ್ಕೂ ಅಧಿಕ ಮೌಲ್ಯದ ಗುಣಮಟ್ಟವಲ್ಲದ ಔಷಧಿಗಳು ಜಪ್ತಿ
ಸಚಿವ ದಿನೇಶ್​ ಗುಂಡೂರಾವ್​
ವಿವೇಕ ಬಿರಾದಾರ
|

Updated on:Aug 04, 2025 | 5:49 PM

Share

ಬೆಂಗಳೂರು, ಆಗಸ್ಟ್​ 04: ಜುಲೈನಲ್ಲಿ ರಾಜ್ಯಾದ್ಯಂತ 3489 ಆಹಾರ (Food) ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ. ಅವುಗಳಲ್ಲಿ 17 ಮಾದರಿಗಳು ಅಸುರಕ್ಷಿತ, 18 ಮಾದರಿಗಳು ಕಳೆಗುಣಮಟ್ಟದಿಂದ ಕೂಡಿವೆ ಎಂದು ವರದಿ ಬಂದಿದೆ. ಆಹಾರದ ಸುರಕ್ಷತೆ, ಗುಣಮಟ್ಟ, ನೈರ್ಮಲ್ಯತೆಯ ಕುರಿತಂತೆ ರಾಜ್ಯಾದ್ಯಂತ 1557 ಬೀದಿ ಬದಿ ವ್ಯಾಪಾರ ಘಟಕಗಳನ್ನು ಪರಿವೀಕ್ಷಿಸಲಾಗಿದೆ. ಲೋಪಗಳು ಕಂಡು ಬಂದಿರುವ 406 ಘಟಕಗಳಿಗೆ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 44,500 ರೂ. ದಂಡ ವಿಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ (Dinesh Gundurao)​ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ 1240 ಬಿದಿ ಬದಿ ಆಹಾರ ವ್ಯಾಪಾರಿಗಳಿಗೆ ನೈರ್ಮಲ್ಯತೆ ಮತ್ತು ಗುಣಮಟ್ಟ ಕುರಿತ ತರಬೇತಿಯನ್ನು ನೀಡಲಾಗಿದೆ. 866 ಬೀದಿಬದಿಯ ವ್ಯಾಪಾರ ಘಟಕಗಳಿಗೆ ಉಚಿತ ನೋಂದಣಿ ಮಾಡಲಾಗಿದೆ. ರಾಜ್ಯಾದ್ಯಂತ 186 ಬಸ್ ನಿಲ್ದಾಣಗಳಲ್ಲಿನ 889 ಆಹಾರ ಮಳಿಗೆಗಳಿಗೆ ಪರಿಶೀಲನೆ ಮಾಡಲಾಗಿದೆ. ಲೋಪಗಳು ಕಂಡು ಬಂದಿರುವ 206 ಘಟಕಗಳಿಗೆ ನೋಟಿಸ್‌ಗಳನ್ನು ಜಾರಿ ಮಾಡಿ 55 ಸಾವಿರ ರೂ. ದಂಡ ಹಾಕಲಾಗಿದೆ. 99 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಸಲ್ಲಿಸಲಾಗಿದೆ ಎಂದರು.

ರಾಜ್ಯಾದ್ಯಂತ 603 ಅಂಗನವಾಡಿ ಕೇಂದ್ರಗಳಿಗೆ ಪರಿಶೀಲನಾ ಭೇಟಿ ನೀಡಲಾಗಿದೆ. 545 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಟ್ಟು 1263 ಅಂಗನವಾಡಿ ಕೇಂದ್ರಗಳಿಗೆ ಉಚಿತ ನೊಂದಣಿ ಮಾಡಲಾಗಿದೆ. ರಾಜ್ಯಾದ್ಯಂತ 736 ಹೋಟೆಲ್/ರೆಸ್ಟೋರೆಂಟ್ ಗಳಿಗೆ ಪರಿಶೀಲಿಸಲಾಗಿದೆ. ಲೋಪಗಳು ಕಂಡು ಬಂದಿರುವ 190 ಘಟಕಗಳಿಗೆ ನೋಟಿಸ್‌ ಜಾರಿ ಮಾಡಿ 21500 ರೂ. ದಂಡ ಹಾಕಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ
Image
ಜಿಲೇಬಿಯಲ್ಲಿ ಕೃತಕ ಬಣ್ಣ ಶಂಕೆ: ಮಾದರಿ ಸಂಗ್ರಹಕ್ಕೆ ಮುಂದಾದ ಆಹಾರ ಇಲಾಖೆ
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!
Image
ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

291 ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ High Risk ಆಹಾರ ಉದ್ದಿಮೆಗಳ ವರ್ಗದಡಿ ಬರುವ 1685 ಆಹಾರ ಉದ್ದಿಮೆಗಳನ್ನು ತಪಾಸಣೆ ಮಾಡಲಾಗಿದೆ. ಲೋಪ ಕಂಡುಬಂದಿರುವ 465 ಉದ್ದಿಮೆಗಳಿಗೆ ನೋಟಿಸ್ ನೀಡಲಾಗಿದೆ. 175 ಹಾಲಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 73 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣ ಆಗಿದೆ. 4 ಮಾದರಿಗಳು ಕಳೆಗುಣಮಟ್ಟದ ಎಂದು, 69 ಮಾದರಿಗಳು ಸುರಕ್ಷಿತ ಎಂದು ವರದಿ ಬಂದಿದೆ ರಂದರು. ಇನ್ನೂ ಹೆಚ್ಚಿನ ಹಾಲಿನ ಮಾದರಿಗಳ ಸಂಗ್ರಹಣೆ ಮತ್ತು ವಿಶ್ಲೇಷಣೆಗಾಗಿ ಆಗಸ್ಟ್ ನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಆಹಾರ ಮಾದರಿಗಳ ವಿಶ್ಲೇಷಣಾ ಫಲಿತಾಂಶಗಳನ್ವಯ ಮುಂದಿನ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತೇವೆ. ಬೆಂಗಳೂರು ನಗರ ವ್ಯಾಪ್ತಿಯ Empire ಹೋಟೆಲ್​ಗಳಲ್ಲಿ 06 ಕಬಾಬ್ ಮಾದರಿಗಳನ್ನು ಸಂಗ್ರಹಿಸಲಾಗಿದೆ. 6 ಮಾದರಿಗಳೂ ಕೃತಕ ಬಣ್ಣಗಳನ್ನು ಹೊಂದಿದ್ದರಿಂದ ಅಸುರಕ್ಷಿತ ಎಂದು ವರದಿಯಾಗೆದೆ. ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದರು.

ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ(ASU) ಔಷಧಗಳ ಅಮಲು ಜಾರಿ ವಿಭಾಗ ಬೆಂಗಳೂರಿನಲ್ಲಿ ಅಸ್ತಿತ್ವದಲ್ಲಿರುವ ಆಯುಷ್ ಔಷಧಗಳ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷದ ಆಡಳಿತ (FDA) ಇಲಾಖೆಯ ಔಷಧ ನಿಯಂತ್ರಣ ವಿಭಾಗದ ಅಡಿಯಲ್ಲಿ ವಿಲೀನಗೊಳಿಸಲಾಗಿದೆ. ಇದರಿಂದ ಆರೋಗ್ಯ ಇಲಾಖೆಯಲ್ಲಿನ ಎಲ್ಲ ನಿಯಂತ್ರಣ ಕಾರ್ಯಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅನುಕೂಲ ಆಗುತ್ತದೆ ಎಂದು ಹೇಳಿದರು.

ಔಷಧ ಪರೀಕ್ಷಾ ಪ್ರಯೋಗಾಲಯವು ಜುಲೈನಲ್ಲಿ ಬೆಂಗಳೂರು, ಹುಬ್ಬಳ್ಳಿ ಮತ್ತು ಬಳ್ಳಾರಿಗಳಲ್ಲಿನ ಔಷಧಿ ಅಂಗಡಿಗಳಲ್ಲಿನ ಒಟ್ಟು 1,433 ಔಷಧ ಮಾದರಿಗಳನ್ನು ವಿಶ್ಲೇಷಿಸಿದೆ. ಅವುಗಳಲ್ಲಿ 1,366 ಉತ್ತಮ ಗುಣಮಟ್ಟ ಮತ್ತು 59 ಔಷಧ ಮಾದರಿಗಳು ಅನುತ್ತಮ ಗುಣಮಟ್ಟ ಅಂತ ವರದಿ ಬಂದಿದೆ. ಪ್ರಮಾಣಿತ ಗುಣಮಟ್ಟದ್ದಲ್ಲದ್ದ ಪ್ರಕರಣಗಳಲ್ಲಿ ರಾಜ್ಯಾದ್ಯಂತ ಜುಲೈನಲ್ಲಿ 40,48,436 ಲಕ್ಷ ರೂ. ಮೌಲ್ಯದ ಅನುತ್ತಮ ಗುಣಮಟ್ಟದ ಔಷಧ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಆಹಾರ ಇಲಾಖೆಯಿಂದ ರಾಜ್ಯದ ಹಲವು ಮಳಿಗೆಗಳು, ಹೋಟೆಲ್​​ಗಳಿಗೆ ನೋಟಿಸ್​, ಭಾರಿ ದಂಡ

ಸಕಾಲದ ಅಡಿ 26 ಔಷಧ ಆಡಳಿತ ಸೇವೆಗಳನ್ನು ಒದಗಿಸಲಾಗುತ್ತಿದೆ. ಜುಲೈನಲ್ಲಿ ಒಟ್ಟು 1686 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಒಟ್ಟು 905 ಅರ್ಜಿಗಳು ವಿಲೇವಾರಿಯಾಗಿವೆ. ಔಷಧ ಆಡಳಿತದ ಅಮಲು ಜಾರಿ ಅಧಿಕಾರಿಗಳು ಜೂನ್ ತಿಂಗಳಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟಲು 279 ವಿಶೇಷ ಪರಿವೀಕ್ಷಣೆಯನ್ನು ಕೈಗೊಂಡರು. ಉಲ್ಲಂಘನೆ ಕಂಡು ಬಂದ ಪ್ರಕರಣಗಳಲ್ಲಿ ಒಟ್ಟು 231 ಶೋಕಾಸ್ ನೋಟೀಸ್ ನೀಡಲಾಗಿದೆ. 15 ಔಷಧ ಮಳಿಗೆಗಳಿಗೆ ಅನುಷ್ಠಾನ ಪತ್ರ ನೀಡಲಾಗಿದೆ ಎಂದರು.

ಇಲಾಖೆಯಿಂದ ನೀಡುತ್ತಿರುವ ಆನ್‌ಲೈನ್ ಸೇವೆಯನ್ನು ONDLS Portal ಗೆ Migrate ಆಗಿರುವುದರಿಂದ ರಕ್ತ ನಿಧಿ ಕೇಂದ್ರಗಳಿಗೆ ಆನ್‌ಲೈನ್ ಮೂಲಕವೇ ಪರವಾನಿಗೆಗಳನ್ನು ನೀಡಲಾಗುತ್ತಿದೆ. ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆಗಳಲ್ಲಿ ಅಗತ್ಯ ಮಾದಕ ಔಷಧಗಳನ್ನು ಬಳಸಲು ಇಲಾಖೆಯಿಂದ RMI Certificate ನೀಡಲಾಗುತ್ತಿದೆ. ಅದನ್ನು ಆನ್​ಲೈನ್ ಮೂಲಕವೇ ಒದಗಿಸಲು ಇಲಾಖೆಯ ಆನ್‌ಲೈನ್ ಸೇಲ್ ವೆಬ್ ಸೈಟ್​ ಅನ್ನು ಅಭಿವೃದ್ಧಿ ಪಡಿಸಲಾಗಿದೆ. ಅನುತ್ತಮ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ 30 ದಿನಗಳಲ್ಲಿ ಹಿಂಪಡೆಯಲಾಗುತ್ತಿದ್ದುದನ್ನು ಎರಡು ದಿನಗಳ ಅವಧಿಗೆ ಇಳಿಸಲಾಗಿದೆ ಎಂದರು.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Mon, 4 August 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್