ಎಚ್​ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಎಚ್ಎಂಟಿ ಅರಣ್ಯ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಹಾಗೂ ಹಾಲಿ ಐಎಎಸ್ ಮತ್ತು ಐಎಫ್ಎಸ್ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೊದಲು ಅರಣ್ಯ ಸಚಿವರ ಅನುಮತಿ ಪಡೆಯದಿರುವುದು ಮತ್ತು ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಎಚ್​ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
ಸಚಿವ ಈಶ್ವರ್ ಖಂಡ್ರೆ ಮತ್ತು ಶೋಕಾಸ್ ನೋಟಿಸ್ ಪ್ರತಿ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Nov 12, 2024 | 10:29 AM

ಬೆಂಗಳೂರು, ನವೆಂಬರ್ 12: ಎಚ್ಎಂಟಿ ಅರಣ್ಯ ಭೂಮಿ ವಿವಾದ ಪ್ರಕರಣ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸಂದೀಪ್ ದವೆ, ವಿಜಯಕುಮಾರ್ ಗೋಗಿ, ಸ್ಮಿತಾ ಬಿಜ್ಜೂರ್, ಆರ್ ಗೋಕುಲ್​ಗೆ ಕಾರಣ ಕೇಳಿ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಈ ಅಧಿಕಾರಿಗಳು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ, ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿ ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್​ಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಏನಿದು ಪ್ರಕರಣ?

ಐಎಎಸ್ ಅಧಿಕಾರಿಗಳು ಹಾಗೂ ಐಎಫ್ಎಸ್ ಅಧಿಕಾರಿಗಳು ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರ ಜಮೀನು ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್​ಗೆ ಕೋರಿದ್ದರು. ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂಬ ಬಗ್ಗೆ ಕೇವಲ ಅಧಿಕಾರಿಗಳ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗಿತ್ತು. ಸುಪ್ರೀಂಕೋರ್ಟ್​ಗೆ ಮೇಲಿನ ಐಎಫ್ಎಸ್ ಅಧಿಕಾರಿಗಳು ಐಎ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಂದಿನ ಅರಣ್ಯ ಸಚಿವರ ಅಥವಾ ಸಚಿವ ಸಂಪುಟದ ಪೂರ್ವಾನುಮತಿಯನ್ನೂ ಪಡೆದಿರಲಿಲ್ಲ.

ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು ಡಿ ನೋಟಿಫೈ ಮಾಡಲು ಐಎ ಸಲ್ಲಿಸಿದ ಅಧಿಕಾರಿಗಳೇ ಕಾರಣ ಎಂದು ಆರೋಪಿಸಲಾಗಿದೆ. ಹೀಗಾಗಿ ಕಾರಣ ಕೇಳಿ ನೋಟಿಸ್ ನೀಡುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೆಪ್ಟೆಂಬರ್ 24ರಂದು ಸೂಚನೆ ನೀಡಿದ್ದರು. ಅದರಂತೆ, ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾಗಿರುವ ಸಂದೀಪ್ ದವೆ, ನಿವೃತ್ತ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಗೋಗಿ ಹಾಗೂ ಹಾಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ಐಟಿಸಿ ವಿಭಾಗದ ಸ್ಮಿತಾ ಬಿಜ್ಜೂರ್, ತಾಂತ್ರಿಕ ಕೋಶದ ಆರ್. ಗೋಕುಲ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಅರಣ್ಯ ಭೂಮಿ ಬಗ್ಗೆ ನಿಯಮಗಳಲ್ಲೇನಿದೆ?

ಸುಪ್ರೀಂಕೋರ್ಟ್ ಹೇಳಿರುವಂತೆ ‘Once a forest is always a forest unless it is de-notified’. ಅಂದರೆ ಅನ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಆಗದ ಹೊರತು ಒಮ್ಮೆ ಅರಣ್ಯ ಎಂದು ನಮೂದಾದ ಭೂಮಿ ಎಂದೆಂದಿಗೂ ಅರಣ್ಯವೇ ಆಗಿರುತ್ತದೆ. ಹೀಗಾಗಿ ಅರಣ್ಯ ಸಂರಕ್ಷಣಾ ಕಾಯಿದೆ 1980ರಡಿ ಅರಣ್ಯ ಭೂಮಿಯನ್ನು ಅರಣ್ಯೇತರ ಬಳಕೆಗೆ ಪರಿಹಾರ ಭೂಮಿ ಒದಗಿಸುವುದರೊಂದಿಗೆ ಎನ್​​ಪಿವಿ ಮೊತ್ತ ಪಾವತಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗುತ್ತದೆ. ಹೀಗೆ ಅನುಮತಿ ನೀಡಿದರೂ ಸಹ ಅರಣ್ಯ ಭೂಮಿಯನ್ನು ಗುತ್ತಿಗೆ ಮಾತ್ರ ನೀಡಿ, ಗುತ್ತಿಗೆ ಅವಧಿ ಮುಗಿದ ಬಳಿಕ ಅರಣ್ಯ ಇಲಾಖೆಗೆ ಮರಳಿ ಪಡೆಯಬೇಕಾಗುತ್ತದೆ ಎಂದು ನೋಟಿಸ್​​ನಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದಿಂದ ಮರ ಕಡಿದ ಆರೋಪ; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಎಚ್​​ಎಂಟಿ

ಆದರೆ, ಎಚ್​ಎಂಟಿ ತನ್ನ ವಶದಲ್ಲಿರುವ ಅರಣ್ಯ ಭೂಮಿಯನ್ನು ವಿವಿಧ ಸರ್ಕಾರಿ, ಖಾಸಗಿ ಸಂಸ್ಥೆ, ವ್ಯಕ್ತಿಗಳಿಗೆ ಭಾಗಶಃ ಮಾರಾಟ ಮಾಡಿದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರ ರೂಪಿಸಿರುವ ಪರಿಸರ ಮತ್ತು ಅರಣ್ಯ ಸಂರಕ್ಷಣೆ ಹಾಗೂ ಕಂದಾಯ ಕಾಯಿದೆ, ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆ ಎಂದು ಸಚಿವ ಖಂಡ್ರೆ ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ