ದಿನಪತ್ರಿಕೆಗಳಲ್ಲಿ ನಗುಮುಖದ ಜಾಹೀರಾತು! ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

Namma Metro Advertisement| ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು ಎಂದು ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ನಡೆಯನ್ನು ಕಟುಪದಗಳಲ್ಲಿ ಟೀಕಿಸಿದ್ದಾರೆ.

ದಿನಪತ್ರಿಕೆಗಳಲ್ಲಿ ನಗುಮುಖದ ಜಾಹೀರಾತು! ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ
ದಿನಪತ್ರಿಕೆಗಳಲ್ಲಿ ನಗುಮುಖದ ಜಾಹೀರಾತು! ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಕುಮಾರಸ್ವಾಮಿ
Follow us
ಸಾಧು ಶ್ರೀನಾಥ್​
|

Updated on:Apr 22, 2021 | 12:57 PM

ಬೆಂಗಳೂರು: ರಾಜ್ಯದ ಜನ ಬೆಡ್ ಇಲ್ಲ, ಆಕ್ಸಿಜನ್ ಇಲ್ಲ ಅಂತಾ ಒದ್ದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರ ಪುಟಗಟ್ಟಲೆ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಜಾಹೀರಾತು ನೀಡಿದೆ. ಇದು ಸರಿಯಲ್ಲ. ಆಡಳಿತಾರೂಢ ಬಿಜೆಪಿ ಸರ್ಕಾರ ಮೂರ್ಖ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರ್ಕಾರದಿಂದ ಬೆಂಗಳೂರಿನ ನಮ್ಮ ಮೆಟ್ರೋಗೆ 14 ಸಾವಿರ ಕೋಟಿ ರೂಪಾಯಿ ಬಿಡುಗಡೆ ಹಿನ್ನೆಲೆ ದಿನಪತ್ರಿಕೆಗಳಲ್ಲಿ ಇಂದು ರಾಜ್ಯ ಬಿಜೆಪಿ ಸರ್ಕಾರ ದೊಡ್ಡ ದೊಡ್ಡ ಜಾಹೀರಾತು ಹಾಕಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದೆ. ಕೊರೊನಾ ಸಮಯದಲ್ಲೂ ಜಾಹೀರಾತಿಗೆ ಹಣ ಖರ್ಚು ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ; ನಾವು ಸಾವಿನ ಮನೆಯಲ್ಲಿ ಇದ್ದೇವೆ. ಮೆಟ್ರೋ ಹಣ ಏನು ಕೇಂದ್ರ ಸರ್ಕಾರ ಭಿಕ್ಷೆ ನೀಡೋದಲ್ಲ ಎಂದು ರಾಜ್ಯ ಸರಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

karnataka former chief minister hd kumaraswamy on bjp government on namma metro advertisement in dailies

ಈ ಜಾಹೀರಾತು ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಸೂತಕದ ಸಂದರ್ಭದಲ್ಲಿ ಜನರ ನೋವನ್ನು ಗೇಲಿ ಮಾಡಿದೆ ಬಿಜೆಪಿ ಸರ್ಕಾರ; ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ: ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಜನ ಒದ್ದಾಡುತ್ತಿರುವ ವಾತಾವರಣ ನಿರ್ಮಾಣ ಆಗಿರುವ ಈ ಸನ್ನಿವೇಶದಲ್ಲಿ ಕೋಟ್ಯಾಂತರ ರೂಪಾಯಿ ಜನರ ದುಡ್ಡನ್ನು ಈ ರೀತಿ ಅನಗತ್ಯವಾಗಿ ಜಾಹೀರಾತಿಗೆ ಪೋಲು ಮಾಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ.

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!

ಬೆಂಗಳೂರಿನ ನಮ್ಮ ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ.

ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ.. ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು.

ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು.

ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ ಎಂದು ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ನಡೆಯನ್ನು ಕಟುಪದಗಳಲ್ಲಿ ಟೀಕಿಸಿದ್ದಾರೆ.

(hd kumaraswamy on bjp government on namma metro advertisement in dailies)

Published On - 12:39 pm, Thu, 22 April 21

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು