Amul Row: ಕನ್ನಡಿಗರ ಬ್ಯಾಂಕ್​​, ಬಂದರು, ಏರ್​ಪೋರ್ಟ್​​ ಮುಕ್ಕಿ ತಿಂದಾಯಿತು, ಈಗ ನಂದಿನಿಯನ್ನು ಮುಚ್ಚಲು ಹೊರಟಿದ್ದೀರಾ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ ಅಥವಾ ಕಿತ್ತುಕೊಳ್ಳುವುದಕ್ಕೋ, ಕನ್ನಡಿಗರು ಕಟ್ಟಿದ್ದ ಬ್ಯಾಂಕ್​, ಬಂದರು,ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು ಈಗ ನಮ್ಮ ನಂದಿನಿ(Nandini)ಯನ್ನು ಮುಚ್ಚಲು ಹೊರಟಿದ್ದೀರಾ ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Amul Row: ಕನ್ನಡಿಗರ ಬ್ಯಾಂಕ್​​, ಬಂದರು, ಏರ್​ಪೋರ್ಟ್​​ ಮುಕ್ಕಿ ತಿಂದಾಯಿತು, ಈಗ ನಂದಿನಿಯನ್ನು ಮುಚ್ಚಲು ಹೊರಟಿದ್ದೀರಾ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಸಿದ್ದರಾಮಯ್ಯ

Updated on: Apr 09, 2023 | 12:46 PM

ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ ಅಥವಾ ಕಿತ್ತುಕೊಳ್ಳುವುದಕ್ಕೋ, ಕನ್ನಡಿಗರು ಕಟ್ಟಿದ್ದ ಬ್ಯಾಂಕ್​, ಬಂದರು,ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು ಈಗ ನಮ್ಮ ನಂದಿನಿ(Nandini)ಯನ್ನು ಮುಚ್ಚಲು ಹೊರಟಿದ್ದೀರಾ ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಖಾರವಾಗಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು, ಬಂದರು, ಏರ್ ಪೋರ್ಟ್ ನುಂಗಿದ ಅದಾನಿ ಗುಜರಾತ್ ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್ ನದ್ದು.

ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಓದಿ:ಅಮುಲ್ ಜೊತೆ ನಂದಿನಿ ವಿಲೀನ, ಇದು ಕಾಂಗ್ರೆಸ್​ ಹಬ್ಬಿಸಿರುವ ಸುಳ್ಳುಸುದ್ದಿ ಎಂದ ತೇಜಸ್ವಿ ಸೂರ್ಯ

ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ.

ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ. ಗುಜರಾತ್ ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ ಎಂದು ಪ್ರಶ್ನಿಸಿದ್ದಾರೆ.

ಭರವಸೆ ನೀಡಿದಂತೆ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು.

ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ ಮೋದಿಯವರೇ ಎಂದು ಕೇಳಿದ್ದಾರೆ. ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ ಎಂದು ಆಕ್ರೋಶ ವ್ಯಕ್ತಪಡಿಡಿದರು.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us