AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Udasi Funeral: ಸಿ.ಎಂ.ಉದಾಸಿಯವರ ಮಗನಾಗಿ ಜನಿಸಿದ್ದು ನನ್ನ ಪುಣ್ಯ: ಸಂಸದ ಶಿವಕುಮಾರ್ ಉದಾಸಿ

CM Udasi Death: ಆಸ್ಪತ್ರೆಯಲ್ಲಿ ತಂದೆಯ ಪಾರ್ಥಿವ ಶರೀರದ ಜೊತೆಗಿರುವ ಪುತ್ರ ಸಂಸದ ಶಿವಕುಮಾರ್ ಉದಾಸಿಯವರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿ ಸಂತೈಸಿದ್ದಾರೆ. ಸಚಿವರಾದ ಆರ್ ಅಶೋಕ್, ಜಗದೀಶ್ ಶೆಟ್ಟರ್, ಮುರುಗೇಶ್ ನಿರಾಣಿ,ಎಸ್ .ಆರ್ .ವಿಶ್ವನಾಥ್, ಬೈರತಿ ಬಸವರಾಜ್ ಆಸ್ಪತ್ರೆಗೆ ಆಗಮಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.

CM Udasi Funeral: ಸಿ.ಎಂ.ಉದಾಸಿಯವರ ಮಗನಾಗಿ ಜನಿಸಿದ್ದು ನನ್ನ ಪುಣ್ಯ: ಸಂಸದ ಶಿವಕುಮಾರ್ ಉದಾಸಿ
ಸಿ.ಎಂ.ಉದಾಸಿಯವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
Follow us
TV9 Web
| Updated By: guruganesh bhat

Updated on: Jun 08, 2021 | 7:31 PM

ಹಾವೇರಿ: ಹಾನಗಲ್ ಕ್ಷೇತ್ರದ ಪಾಲಿಗೆ ತಂದೆಯವರಾದ ಸಿ.ಎಂ.ಉದಾಸಿ ಮನೆ ಮಗನಾಗಿದ್ದರು. ಅವರ ಮಗನಾಗಿ ಜನಿಸಿದ್ದು ನನ್ನ ‌ಪುಣ್ಯ. ಅವರ ಕೆಲಸಗಳು ನಮಗೆ ಮಾರ್ಗದರ್ಶನ ನೀಡಲಿವೆ. ನಾವು ಮಾತನಾಡಬಾರದು ನಾವು ಮಾಡಿರುವ ಕೆಲಸ ಮಾತನಾಡಬೇಕು ಎಂದು ಅವರು ಹೇಳುತ್ತಿದ್ದರು. ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದ್ದು ಕೊವಿಡ್ ಇರುವ ಕಾರಣ ಹೆಚ್ಚು ಅಭಿಮಾನಿಗಳು ಆಗಮಿಸದಿರುವಂತೆ ಪುತ್ರ ಶಿವಕುಮಾರ್ ಉದಾಸಿ ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಸಚಿವ, ಶಾಸಕ ಸಿ.ಎಂ.ಉದಾಸಿ ಅವರ ಅಂತ್ಯಕ್ರಿಯೆಯನ್ನು ನಾಳೆ ಸಂಜೆ ನಾಲ್ಕು ಗಂಟೆಗೆ ಹಾನಗಲ್‌ನ ವಿರಕ್ತಮಠದ ರುದ್ರಭೂಮಿಯಲ್ಲಿ ನಡೆಸಲಾವುದು ಎಂದು ಉದಾಸಿ ಕುಟುಂಬದ ಆಪ್ತ ಬಿ.ಎಸ್‌.ಅಕ್ಕಿವಳ್ಳಿ ತಿಳಿಸಿದ್ದಾರೆ. ಲಿಂಗಾಯತ ವಿಧಿವಿಧಾನದ ಅಂತ್ಯಕ್ರಿಯೆ‌ ನಡೆಯಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಮಿಶ್ರಾ, ಹೆಚ್ಚುವರಿ ಎಸ್ಪಿ ವಿಜಯಕುಮಾರ, ಎಸಿ ಅನ್ನಪೂರ್ಣ ಮುದಕಮ್ಮನವರ ಸೇರಿದಂತೆ ವಿವಿಧ ಅಧಿಕಾರಿಗಳು ಅಂತ್ಯಕ್ರಿಯೆ ಸಿದ್ಧತಾ ಕಾರ್ಯ ಮತ್ತು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಗೆ ಹಾನಗಲ್‌ಗೆ ಪಾರ್ಥಿವ ಶರೀರವನ್ನು ತರಲಾಗುತ್ತಿದ್ದು, ಗೌಳಿ ಗಲ್ಲಿಯ ನಿವಾಸದಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಸ್ಪತ್ರೆಯಲ್ಲಿ ತಂದೆಯ ಪಾರ್ಥಿವ ಶರೀರದ ಜೊತೆಗಿರುವ ಪುತ್ರ ಸಂಸದ ಶಿವಕುಮಾರ್ ಉದಾಸಿಯವರನ್ನು ಸಿಎಂ ಯಡಿಯೂರಪ್ಪ ಭೇಟಿಯಾಗಿ ಸಂತೈಸಿದ್ದಾರೆ. ಸಚಿವರಾದ ಆರ್ ಅಶೋಕ್, ಜಗದೀಶ್ ಶೆಟ್ಟರ್, ಮುರುಗೇಶ್ ನಿರಾಣಿ,ಎಸ್ .ಆರ್ .ವಿಶ್ವನಾಥ್, ಬೈರತಿ ಬಸವರಾಜ್ ಆಸ್ಪತ್ರೆಗೆ ಆಗಮಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.

CM Udasi Death: ಮಾಜಿ ಸಚಿವ, ಹಾನಗಲ್ ಶಾಸಕ ಸಿ ಎಂ ಉದಾಸಿ ನಿಧನ

ಹಿರಿಯ ರಾಜಕಾರಣಿ ಸಿಎಂ ಉದಾಸಿ ವಿಧಿವಶ: ಗಣ್ಯರ ಕಂಬನಿ ಮಾಜಿ ಸಚಿವ, ಶಾಸಕ, ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದರು. ಸಚಿವರಾಗಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕ, ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಅಪರೂಪದ ನೇತಾರರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ. ಮಾಜಿ ಸಚಿವ, ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್​ಗೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿಎಂ ಉದಾಸಿ  ಅವರ ಅನಾರೋಗ್ಯ ನೆನೆದು  ಭಾವುಕರಾಗಿ ಕಣ್ಣೀರು ಹಾಕಿದ್ದರು. ಹಾನಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಕೊವಿಡ್  ವಾರಿಯರ್ ಗಳಿಗೆ ಆಹಾರದ ಕಿಟ್ ವಿತರಿಸಿದ ನಂತರ ಮಾತನಾಡುತ್ತಿದ್ದ ವೇಳೆ ಗೃಹಸಚಿವ ಬೊಮ್ಮಾಯಿ‌ ಕಣ್ಣೀರು ಹಾಕಿದ್ದರು. ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಇಂದಿಲ್ಲಿ ಉಪಸ್ಥಿತರಿರಬೇಕಿತ್ತು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ನೆನೆದಿದ್ದರು. ಶಾಸಕ ಸಿ.ಎಂ.ಉದಾಸಿ  ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಹ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Mumtaz Ali Khan ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ, ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ

Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

(Karnataka former Minister CM Udasi Funeral will be held tomorrow at Haveri Hanagal)

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ