AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ: ಆತಂಕಪಡುವ ಅಗತ್ಯವಿಲ್ಲ ಎಂದ ತೈಲ ಕಂಪನಿಗಳು

ಪಶ್ಚಿಮ ಏಷ್ಯಾ ವಿದ್ಯಮಾನಗಳ ನಡುವೆಯೂ ಇತ್ತ ಕರ್ನಾಟಕದಲ್ಲಿ ಇಂಧನ ಪೂರೈಕೆ ಸ್ಥಿರವಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳ ಭರವಸೆ ನೀಡಿವೆ. ಜೊತೆಗೆ ರಾಜ್ಯದಲ್ಲಿ ಪೆಟ್ರೋಲ್‍ ಹಾಗೂ ಪೆಟ್ರೋಲಿಯಂ ಉತ್ಪನ್ನಗಳಿಗೆ ಕೊರತೆಯಿಲ್ಲ ಎಂದು ಐಒಸಿಎಲ್‍ ಕಾರ್ಯಕಾರಿ ನಿರ್ದೇಶಕ ಸಿದ್ಧಾರ್ಥ ಅಗರವಾಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ: ಆತಂಕಪಡುವ ಅಗತ್ಯವಿಲ್ಲ ಎಂದ ತೈಲ ಕಂಪನಿಗಳು
ಪಿಐಬಿ ಮಾಧ್ಯಮಗೋಷ್ಠಿImage Credit source: pib.gov.in
ಗಂಗಾಧರ​ ಬ. ಸಾಬೋಜಿ
|

Updated on: Apr 23, 2026 | 7:16 PM

Share

ಬೆಂಗಳೂರು, ಏಪ್ರಿಲ್​ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ (Karnataka) ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಸಿದ್ಧಾರ್ಥ ಅಗರವಾಲ್

ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಗೇಲ್‍ ಇಂಡಿಯಾ ಜಂಟಿಯಾಗಿ ಮಾಧ್ಯಮಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಾರ್ಯಕಾರಿ ನಿರ್ದೇಶಕ ಸಿದ್ಧಾರ್ಥ ಅಗರವಾಲ್, ರಾಜ್ಯವು 15 ಎಂಎಂಟಿಪಿಎ (ಮೆಟ್ರಿಕ್ ಟನ್ಸ್ ಪರ್ ಆನಮ್) ಕಚ್ಚಾ ತೈಲ ಸಂಸ್ಕರಣಾ ಸಾಮರ್ಥ್ಯದ ಸಂಸ್ಕರಣಾಗಾರವನ್ನು ಹೊಂದಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ಕೊರತೆಯಿಲ್ಲ ಮತ್ತು ಎಲ್ಲಾ ರಿಟೇಲ್ ಮಾರಾಟ ಮಳಿಗೆಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಸಂಸ್ಕರಣಾಗಾರಗಳಿಂದ ಟರ್ಮಿನಲ್‍, ಡಿಪೋ ಹಾಗೂ ರಿಟೇಲ್ ಮಳಿಗೆಗಳವರೆಗೆ ಯಾವುದೇ ಅಡೆತಡೆಯಿಲ್ಲದೆ ತೈಲದ ಪೂರೈಕೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಎಲ್‌ಪಿಜಿ ಕೊರತೆ, ದರ ಏರಿಕೆಗೆ ಸೆಡ್ಡು: ಹೋಟೆಲ್ ಕಸ ನೀಡಿ ಬಯೋಗ್ಯಾಸ್ ಪಡೆಯಲು ಮುಂದಾದ ಬೆಂಗಳೂರಿನ ಹೋಟೆಲ್‌ಗಳು!

ಗೃಹಬಳಕೆಯ ಎಲ್​​ಪಿಜಿಗೆ ಸಂಬಂಧಿಸಿದಂತೆ, ಕರ್ನಾಟಕವು ಸಮರ್ಪಕ ಮತ್ತು ನಿರಂತರ ಪೂರೈಕೆಯನ್ನು ಪಡೆಯುತ್ತಿದೆ. ಮಾರ್ಚ್​​ನಲ್ಲಿ ಆತಂಕ ಕಾರಣಕ್ಕೆ ಖರೀದಿ ಹಿನ್ನೆಲೆ ಬುಕ್ಕಿಂಗ್​​ಗಳು ದಿನಕ್ಕೆ 3.75 ಲಕ್ಷಕ್ಕೆ ಏರಿಕೆಯಾಗಿದ್ದು, ಇದರಿಂದ ವಿತರಣಾ ಅವಧಿ ಸ್ವಲ್ಪ ವಿಳಂಬವಾಗಿತ್ತು. ಆದರೆ, ಪ್ರಸ್ತುತ ಪರಿಸ್ಥಿತಿ ಸ್ಥಿರವಾಗಿದೆ. ಇದೀಗ ದಿನಕ್ಕೆ 3.06 ಲಕ್ಷಕ್ಕೆ ಬುಕ್ಕಿಂಗ್ ಇಳಿಕೆಯಾಗಿದ್ದು, ವಿತರಣಾ ಅವಧಿಯೂ ಕ್ರಮೇಣ ಸುಧಾರಿಸಲಾಗುತ್ತಿದೆ ಎಂದರು.

ಎಲ್​​ಪಿಜಿ ಸೇವೆಗಳಲ್ಲಿ ಡಿಜಿಟಲ್ ಬಳಕೆ ಸುಧಾರಣೆ

ಎಲ್​​ಪಿಜಿ ಸೇವೆಗಳಲ್ಲಿ ಡಿಜಿಟಲ್ ಬಳಕೆಯು ಗಣನೀಯವಾಗಿ ಸುಧಾರಿಸಿದ್ದು, ಶೇಕಡಾ 94.5 ರಷ್ಟು ಬುಕ್ಕಿಂಗ್ ಡಿಜಿಟಲ್ ಮೂಲಕ ನಡೆಯುತ್ತಿವೆ. ಡೆಲಿವರಿ ಅಥೆಂಟಿಕೇಶನ್ ಕೋಡ್ (ಡಿಎಸಿ) ವ್ಯವಸ್ಥೆಯ ಪಾಲನೆಯಲ್ಲಿ ಗಮನಾರ್ಹ ಏರಿಕೆಯಾಗಿದ್ದು, ಇದು ವಿತರಣೆಯಲ್ಲಿ ಪಾರದರ್ಶಕತೆ ಹೆಚ್ಚಿಸಿದೆ ಹಾಗೂ ಸಿಲಿಂಡರ್​ಗಳು ಸರಿಯಾದ ಗ್ರಾಹಕರಿಗೆ ತಲುಪಿಸುತ್ತದೆ.

ವಾಣಿಜ್ಯ ಎಲ್‍.ಪಿ.ಜಿ. ಪೂರೈಕೆ ಕುರಿತು ಮಾಹಿತಿ ನೀಡಿದ ಅವರು, ಮಾರ್ಚ್ 2026ರಲ್ಲಿ ಕರ್ನಾಟಕ ಸರ್ಕಾರವು ಹೊರಡಿಸಿದ ನಿರ್ದೇಶನಗಳ ಅನುಸಾರವಾಗಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಮತ್ತು ಸಾರಿಗೆಯಂತಹ ಅಗತ್ಯ ಸೇವೆಗಳಿಗೆ ಆದ್ಯತೆ ನೀಡಿ ವಾಣಿಜ್ಯ ಎಲ್​​ಪಿಜಿ ಪೂರೈಕೆಯನ್ನು ನಿರ್ವಹಿಸಲಾಗುತ್ತಿದೆ. ಸಿಎನ್​ಜಿ ಬಳಕೆಯಲ್ಲಿನ ಸ್ಥಿರ ಬೆಳವಣಿಗೆ ಮತ್ತು ಸಿಟಿ ಗ್ಯಾಸ್ ವಿತರಣಾ ಜಾಲಗಳ ವಿಸ್ತರಣೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಆಟೋ ಎಲ್​ಪಿಜಿ ಗೆ ಸಂಬಂಧಿಸಿದಂತೆ, ಖಾಸಗಿ ಕಂಪನಿಗಳ ಕಾರ್ಯಾಚರಣೆ ಕಡಿಮೆಯಾದ ಕಾರಣ ತೈಲ ಮಾರುಕಟ್ಟೆ ಕಂಪನಿಗಳ ಮಳಿಗೆಗಳಲ್ಲಿ ಬೇಡಿಕೆ ಹೆಚ್ಚಾಗಿರುವುದು ಕಂಡುಬಂದಿದೆ. ಪ್ರಸ್ತುತ ಕರ್ನಾಟಕದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಕೇವಲ ಶೇ 20ರಷ್ಟು ಮಾರುಕಟ್ಟೆ ಪಾಲನ್ನು ಮಾತ್ರ ಹೊಂದಿವೆ ಎಂಬುದು ಗಮನಾರ್ಹ. ಈ ಸೀಮಿತ ಅಸ್ತಿತ್ವ ಮತ್ತು ವಿತರಣಾ ಮೂಲಸೌಕರ್ಯದ ಮಿತಿಗಳ ನಡುವೆಯೂ, ಹೆಚ್ಚಿದ ಬೇಡಿಕೆಯನ್ನು ಪೂರೈಸಲು ತೈಲ ಕಂಪನಿಗಳು ತಮ್ಮ ಅಸ್ತಿತ್ವದಲ್ಲಿರುವ ಸಾಮರ್ಥ್ಯವನ್ನು ಮೀರಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಹೇಳಿದರು.

ದೇಶದಲ್ಲಿ 5.01 ಲಕ್ಷ ಪಿಎನ್​ಜಿ ಸಂಪರ್ಕ: ಸಂಜಯಕುಮಾರ ಸಿಂಗ್

ಗೇಲ್ ಕಂಪನಿಯ ಪ್ರಧಾನ ವ್ಯವಸ್ಥಾಪಕ ಸಂಜಯಕುಮಾರ ಸಿಂಗ್ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಆರಂಭವಾದಾಗಿನಿಂದ ಈವರೆಗೆ ದೇಶದಲ್ಲಿ 5.01 ಲಕ್ಷ ಪಿಎನ್​ಜಿ ಸಂಪರ್ಕವನ್ನು ಕಲ್ಪಿಸಲಾಗಿದೆ. ಗ್ರಾಹಕರು ಆನ್​​ಲೈನ್‍ ಅಥವಾ ನೇರವಾಗಿ ಕಚೇರಿಗೆ ಬಂದು ಪಿಎನ್​ಜಿ ಸಂಪರ್ಕ ಪಡೆಯಬಹುದು. ಪಿಎನ್​​ಜಿ ಸಂಪರ್ಕದ ಜಾಲವನ್ನು ಮತ್ತಷ್ಟು ಬಲಪಡಿಸಲು ಹೊಟೇಲ್​ ಸಂಘಗಳು ಹಾಗೂ ಅಪಾರ್ಟ್‌ಮೆಂಟ್‌ ಮಾಲೀಕರ ಜೊತೆ ನಿರಂತರ ಮಾತುಕತೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಎಲ್​ಪಿಜಿಯಿಂದ ಪಿಎನ್​ಜಿಗೆ ಬದಲಾಗಿ: ಎಸ್​ಜಿ ರವೀಂದ್ರ

ಬೆಂಗಳೂರಿನ ಪಿಐಬಿ ಹೆಚ್ಚುವರಿ ಮಹಾನಿರ್ದೇಶಕ ಎಸ್​ಜಿ ರವೀಂದ್ರ ಮಾತನಾಡಿ, ಗ್ರಾಹಕರು ಪಿಎನ್​ಜಿ ಸೌಲಭ್ಯಕ್ಕೆ ವರ್ಗಾಯಿಸುವಂತೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ. ಇದು ಕಡಿಮೆ ವೆಚ್ಚದಾಯಕ ಹಾಗೂ ಸುಲಭವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ