2022ರ ನವೆಂಬರ್ 2ರಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ; ಸಚಿವ ಮುರುಗೇಶ್ ನಿರಾಣಿ ಘೋಷಣೆ

ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸದುದ್ದೇಶದಿಂದ 2022ರ ನವೆಂಬರ್ 2ರಿಂದ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

2022ರ ನವೆಂಬರ್ 2ರಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ; ಸಚಿವ ಮುರುಗೇಶ್ ನಿರಾಣಿ ಘೋಷಣೆ
ಸಚಿವ ಮುರುಗೇಶ್ ನಿರಾಣಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 24, 2021 | 6:37 PM

ಬೆಂಗಳೂರು: ಕರ್ನಾಟಕದಲ್ಲಿ 2022ರ ನವೆಂಬರ್ ತಿಂಗಳ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮುರುಗೇಶ್ ನಿರಾಣಿ, ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸದುದ್ದೇಶದಿಂದ 2022ರ ನವೆಂಬರ್ 2ರಿಂದ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮತ್ತೊಮ್ಮೆ ಸಿಎಂ ಜೊತೆ ಚರ್ಚಿಸಿ ದಿನಾಂಕವನ್ನು ನಿಗದಿಪಡಿಸುವುದಾಗಿ ಹೇಳಿದರು.

ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ದೇಶ-ವಿದೇಶದಿಂದ ಹೆಚ್ಚಿನ ಬಂಡವಾಳ ಹರಿದು ಬರಲಿದೆ. ಅಲ್ಲದೆ ಉದ್ಯೋಗ ಕ್ರಾಂತಿಯಾಗಿ ಉದ್ಯೋಗ ಸೃಷ್ಟಿಯಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಔಷಧಿ ಕಾರ್ಖಾನೆಯನ್ನು ತೆರೆಯಲು ತೀರ್ಮಾನಿಸಲಾಗಿದೆ. ಇದಕ್ಕೆ ಕೇಂದ್ರ 1000 ಕೋಟಿ ರೂ. ಅನುದಾನವನ್ನು ನೀಡುತ್ತದೆ. ಇದಕ್ಕಾಗಿ ಮೂರು ರಾಜ್ಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ಕರ್ನಾಟಕವೂ ಸಹ ಆರ್ಥಿಕ ನೆರವು ಪಡೆಯಲಿದೆ. ಇದರಿಂದ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳು ಸಿಗಲಿದೆ ಎಂದು ಸಚಿವ ನಿರಾಣಿ ಹೇಳಿದರು.

ಈ ಹಿಂದೆ ಲ್ಯಾಂಡ್ ಬ್ಯಾಂಕ್ ಇಲ್ಲದ ಕಾರಣ 2010ರಲ್ಲಿ ನ್ಯಾನೋ ಕಂಪನಿ ರಾಜ್ಯಕ್ಕೆ ಬರಲು ಸಾಧ್ಯವಾಗಲಿಲ್ಲ. ಅಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ಕಂಪನಿ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದರು. ಸಕಾಲಕ್ಕೆ ಸರಿಯಾಗಿ ಭೂಮಿ ಸಿಗದ ಕಾರಣ ಕಂಪನಿಯು ಗುಜರಾತಿಗೆ ತೆರಳಬೇಕಾಯಿತು. ಹೀಗಾಗಿಯೇ ರಾಜ್ಯದಲ್ಲಿ ಲ್ಯಾಂಡ್ ಬ್ಯಾಂಕ್ ಪರಿಕಲ್ಪನೆಯನ್ನು ಜಾರಿಗೆ ತಂದೆವು. ಪರಿಣಾಮ ಅನೇಕ ಕೈಗಾರಿಕೆಗಳು ಜಾರಿಯಾಗಲು ಸಾಧ್ಯವಾಯಿತು ಎಂದು ಸಚಿವ ನಿರಾಣಿ ತಿಳಿಸಿದರು.

ಯಾದಗಿರಿ ಜಿಲ್ಲೆ ಕಡೆಚೂರು ಮತ್ತು ಬಾಡಿಯಾಳ ಗ್ರಾಮದಲ್ಲಿ 3232 ಹಾಗೂ 3282 ಎಕರೆ ಜಮೀನನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಯಿತು. ಇದರಲ್ಲಿ 1600 ಎಕರೆ ಜಮೀನನ್ನು ಅಭಿವೃದ್ಧಿಪಡಿಸಿ ಉದ್ಯಮಿಗಳಿಗೆ ಹಂಚಿಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಚೆನ್ನೈ-ಮುಂಬೈ ಕೈಗಾರಿಕಾ ಕಾರಿಡಾರ್ ತುಮಕೂರು, ಬೆಂಗಳೂರು, ಮುಂಬೈ, ಆರ್ಥಿಕ ಕಾರಿಡಾರ್, ಹೈದರಾಬಾದ್-ಬೆಂಗಳೂರು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಕೈಗಾರಿಕೆಯಲ್ಲಿ ದೊಡ್ಡ ಬದಲಾವಣೆಂಯಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಪ್ರದೇಶಾಭಿವೃದ್ಧಿ ವತಿಯಿಂದ ಬೀದರ್ ಜಿಲ್ಲೆಯಲ್ಲಿ 1096.55 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಪೈಕಿ 1432.33 ಎಕರೆ ಜಮೀನನ್ನು 1392 ಘಟಕಗಳಿಗೆ ಹಂಚಿಕೆ ಮಾಡಲಾಗಿದೆ. 1150 ಎಕರೆ ಜಮೀನನ್ನು ನಾಲ್ಕು ಯೋಜನೆಗಳಿಗೆ ಕಾಯ್ದಿರಿಸಲಾಗಿದೆ ಎಂದರು.

ರಾಜ್ಯದಲ್ಲಿ ಕೈಗಾರಿಕಾ ಬಳಕೆಗೆ 0.48 ಜಮೀನು ಬಳಸಿಕೊಳ್ಳುತ್ತಿದ್ದೇವೆ. ಇದರ ಪ್ರಮಾಣ ಮತ್ತಷ್ಟು ಹೆಚ್ಚಾಗಬೇಕಿದೆ. ಲ್ಯಾಂಡ್ ಮೂಲಕ ನಾವು ಕೈಗಾರಿಕಾ ಬೆಳವಣಿಗೆಗಳಿಗೆ ಉತ್ತೇಜನ ನೀಡುತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ: ಕೆಐಎಡಿಬಿ ಜಮೀನನ್ನು ಬೇರೆ ಉದ್ದೇಶಕ್ಕೆ ಬಳಸಿದರೆ ವಾಪಾಸ್ ಪಡೆಯಲಾಗುವುದು; ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ

Rakesh Jhunjhunwala: ಈ ಹಿರಿಯ ಹೂಡಿಕೆದಾರರ ಇನ್ವೆಸ್ಟ್​ಮೆಂಟ್​ನಿಂದ 9 ದಿನದಲ್ಲಿ ರೂ. 49.50 ಕೋಟಿ ಲಾಭ

(Karnataka Global Investors Meet to be Held on 2022 November 2 in Bengaluru Minister Murugesh Nirani Announces)

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ