AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್​ ನ್ಯೂಸ್ ಸಿಕ್ಕಿದೆ. 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಖರೀದಿಯ ಗರಿಷ್ಠ ಮಿತಿಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. ಇದು ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಲಾಭವಾಗಲಿದೆ.

ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಪ್ರಾತಿನಿಧಿಕ ಚಿತ್ರ
ಹರೀಶ್ ಜಿ.ಆರ್​.
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 07, 2025 | 6:52 PM

Share

ಬೆಂಗಳೂರು, ಡಿಸೆಂಬರ್​ 07: ಇತ್ತೀಚೆಗೆ ಕರ್ನಾಟಕದಲ್ಲಿ ಮೆಕ್ಕೆಜೋಳ (Maize) ಖರೀದಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ರೈತರಿಂದ ಖರೀದಿಯ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. ಆ ಮೂಲಕ ಬೆಳಗಾವಿ ಅಧಿವೇಶನಕ್ಕೂ ಮುನ್ನ ಮೆಕ್ಕೆಜೋಳ ಬೆಳೆಗಾರರಿಗೆ (farmers) ಗುಡ್ ನ್ಯೂಸ್​​ ನೀಡಲಾಗಿದೆ.

ಪ್ರತಿ ಕ್ವಿಂಟಾಲ್‌ಗೆ 2,400 ರೂ. ಬೆಂಬಲ ಬೆಲೆ

FRUITS ತಂತ್ರಾಂಶದಲ್ಲಿ ನೋಂದಾಯಿತ ಜಮೀನು ಆಧಾರದ ಮೇಲೆ ಸಹಕಾರ ಸಂಘಗಳ ಮೂಲಕ ಖರೀದಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಬ್ಬ ರೈತರಿಗೆ 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಲಾಗಿದೆ. ಪ್ರತಿ ಕ್ವಿಂಟಾಲ್‌ಗೆ 2,400 ರೂ. ಬೆಂಬಲ ಬೆಲೆ ನೀಡಲಾಗುತ್ತದೆ. ಆ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಲಾಭ ಉಂಟಾಗಲಿದೆ.

ಇದನ್ನೂ ಓದಿ: ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಕಿಚ್ಚು: ಸಿಡಿದೆದ್ದ ಅನ್ನದಾತರು, ರಾಜ್ಯಾದ್ಯಂತ ಪ್ರತಿಭಟನೆಯ ಸುಳಿವು

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಸರ್ಕಾರದ ತಿದ್ದುಪಡಿ ಆದೇಶದಲ್ಲಿ FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಾಲ್‌ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400 ರಂತೆ ಖರೀದಿಸಬಹುದು.

ಇದನ್ನೂ ಓದಿ: ಓಪನ್ ಆಗದ ಮೆಕ್ಕೆಜೋಳ ಖರೀದಿ ಕೇಂದ್ರ, ರೈತರ ಆಕ್ರೋಶ: ದಾವಣಗೆರೆಯಲ್ಲಿ ಉಗ್ರ ಹೋರಾಟಕ್ಕೆ ಅನ್ನದಾತರು ಸಜ್ಜು

ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡಬಾರದು. ಅದರ ಬದಲಾಗಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 50 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400 ರಂತೆ ಖರೀದಿಸತಕ್ಕದ್ದು ಮತ್ತು ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:49 pm, Sun, 7 December 25