ಐಪಿಎಸ್ ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದ ರಾಜ್ಯ ಸರ್ಕಾರ, ಬಿಡುಗಡೆ ಯಾವಾಗ ಗೊತ್ತಾ?

IPS Officer Pratap Reddy: ನಿವೃತ್ತಿಗೆ ಕೆಲ ತಿಂಗಳು ಬಾಕಿ ಇರುವಾಗಲೇ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ (Pratap Reddy) ರಾಜೀನಾಮೆ ನೀಡಿದ್ದು, ಇದೀಗ ಇವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಇದೀಗ ಪ್ರತಾಪ್​ ರೆಡ್ಡಿ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಹುದ್ದೆ ತೊರೆದಿದ್ದು, ಹಲವು ಚರ್ಚೆಗೆ ಗ್ರಾಸವಾಗಿದೆ.

ಐಪಿಎಸ್ ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದ ರಾಜ್ಯ ಸರ್ಕಾರ, ಬಿಡುಗಡೆ ಯಾವಾಗ ಗೊತ್ತಾ?
ಐಪಿಎಸ್​ ಅಧಿಕಾರಿ ಪ್ರತಾಪ್​ ರೆಡ್ಡಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 20, 2024 | 8:41 PM

ಬೆಂಗಳೂರು, (ಫೆಬ್ರವರಿ 20): ರಾಜ್ಯ ಆಂತರಿಕ ಭದ್ರತಾ ವಿಭಾಗದ(ಐಎಸ್​ಡಿ) ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಿಎಚ್​​ ಪ್ರತಾಪ್ ರೆಡ್ಡಿ (IPS Officer Pratap Reddy) ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ(Karnataka Government)  ಅಂಗೀಕರಿಸಿದೆ. 1991ರ ಬ್ಯಾಚ್​​ನ ಐಪಿಎಸ್​ ಅಧಿಕಾರಿ ಪ್ರತಾಪ್​ ರೆಡ್ಡಿ ಅವರ ಸೇವಾವಧಿ ಇನ್ನೂ ನಾಲ್ಕುವರೆ ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ ಕೋರಿ ಜನವರಿ 22ರಂದು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಸರ್ಕಾರ ಪ್ರತಾಪ್ ರೆಡ್ಡಿಯವರ ಸ್ವಯಂ ನಿವೃತ್ತಿ ಪತ್ರವನ್ನು ಅಂಗೀಕರಿಸಿದ್ದು, ಏಪ್ರಿಲ್ 30 ಕ್ಕೆ ಇಲಾಖೆಯಿಂದ ಬಿಡುಗಡೆಗೊಳಿಸುಂವತೆ ಆದೇಶಿಸಿದೆ.

ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.

ಇದನ್ನೂ ಓದಿ: IPS officer Pratap Reddy: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜಿನಾಮೆ ​

ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿರುವ. ಪ್ರತಾಪ್​ ರೆಡ್ಡಿ ಬಿ.ಟೆಕ್​ ಪದವೀಧರರು. ಇವರು 1991ರಲ್ಲಿ ಕರ್ನಾಟಕ ಕೆಡರ್​ನ ಐಪಿಎಸ್​ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದ್ದರು. ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್​ ಆಗಿ ಪ್ರತಾಪ್​ ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದರು.

ಬ್ಯಾಂಕಿಂಗ್ ವಂಚನೆಗಳು, ಸೈಬರ್ ಕ್ರೈಂಗಳಲ್ಲಿ ಅವರು ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಅವರನ್ನು ಕಮಲ್ ಪಂತ್ ಅವರ ಬಳಿಕ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು. ಬಳಿಕ ಅವರನ್ನು ವರ್ಗಾವಣೆ ಮಾಡಿ ದಯಾನಂದ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿತ್ತು. ಸಿ.ಎಚ್.ಪ್ರತಾಪ್ ರೆಡ್ಡಿ ಅವರು ಸಿಬಿಐನಲ್ಲಿಯೂ ಕೆಲಸ ಮಾಡಿದ್ದಾರೆ.

ಸಿ.ಎಚ್.ಪ್ರತಾಪ್ ರೆಡ್ಡಿ ಅವರು ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದರು. ಪ್ರತಾಪ್​ ರೆಡ್ಡಿ ಅವರು ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ