Fact Check Unit: ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರದಿಂದ ಫ್ಯಾಕ್ಟ್​ ಚೆಕ್​ ಯುನಿಟ್ ಆರಂಭ​; 5 ಕಂಪನಿಗಳಿಗೆ ಇದರ ಜವಾಬ್ದಾರಿ?

ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕಕ್ಕೆ ಏಳು ಕಂಪನಿಗಳು ನೊಂದಾಯಿಸಿಕೊಂಡಿದ್ದು, ಐದು ಕಂಪನಿಗಳನ್ನು ಶಾರ್ಟ್​​ಲಿಸ್ಟ್​ ಮಾಡಲಾಗಿದೆ. ಇಲಾಖೆಯು ಕಂಪನಿಗಳ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದು, ನಂತರ ಕಂಪನಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Fact Check Unit: ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರದಿಂದ ಫ್ಯಾಕ್ಟ್​ ಚೆಕ್​ ಯುನಿಟ್ ಆರಂಭ​; 5 ಕಂಪನಿಗಳಿಗೆ ಇದರ ಜವಾಬ್ದಾರಿ?
ವಿಧಾನಸೌಧ
Follow us
| Updated By: Digi Tech Desk

Updated on:Nov 20, 2023 | 10:56 AM

ಬೆಂಗಳೂರು ನ.20: ಸುಳ್ಳು ಸುದ್ದಿ ತಡೆಗಟ್ಟಲು ರಾಜ್ಯ ಸರ್ಕಾರ (Karnataka Government) ದಿಟ್ಟ ಹೆಜ್ಜೆ ಇಟ್ಟಿದ್ದು, ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕವನ್ನು (Information Disorder Tackling Unit) ಸ್ಥಾಪಿಸಲು ನಿರ್ಧರಿಸಿದೆ. ಈ ಘಟಕಕ್ಕೆ ಕಂಪನಿಗಳ ನೋಂದಣಿಗಾಗಿ ಸರ್ಕಾರ ಟೆಂಡರ್​ ಕರೆದಿದೆ. ಇದೀಗ ಏಳು ಕಂಪನಿಗಳು ನೊಂದಾಯಿಸಿಕೊಂಡಿದ್ದು, ಐದು ಕಂಪನಿಗಳನ್ನು ಶಾರ್ಟ್​​ಲಿಸ್ಟ್​ ಮಾಡಲಾಗಿದೆ. ಇಲಾಖೆಯು ಕಂಪನಿಗಳ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದು, ನಂತರ ಕಂಪನಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಐದು ಕಂಪನಿಗಳೇ ಅಂತಿಮವಾಗುವ ಸಾಧ್ಯತೆ ಇದೆ. ಈ ಕಂಪನಿಗಳು ಕೃತಕ ಬುದ್ಧಿಮತ್ತೆ, ದತ್ತಾಂಶ ವಿಶ್ಲೇಷಣೆ ಮತ್ತು ನಕಲಿ ಸುದ್ದಿಗಳನ್ನು ತಡೆಯುವ ಮತ್ತು ಫ್ಯಾಕ್ಟ್​​​ ಚೆಕ್​​ನಲ್ಲಿ ಸಾಕಷ್ಟು ಅನುಭವ ಹೊಂದಿವೆ ಎಂದು ಹೇಳಿದರು.

ಈ ಏಳು ಕಂಪನಿಗಳು ಮಾತ್ರ ಏಕೆ ನೋಂದಾಯಿಸಿಕೊಂಡಿವೆ ಎಂಬ ಪ್ರಶ್ನೆಗೆ, ಇದಕ್ಕೆ ನೋಂದಾಯಿಸಿಕೊಳ್ಳುವ ಕಂಪನಿಗಳು ಭಾರತೀಯ ಮೂಲದವುಗಳಾಗಿರಬೇಕು. ಆಗಸ್ಟ್ 31, 2023 ರಂತೆ ಫ್ಯಾಕ್ಟ್‌ಚೆಕಿಂಗ್ ಸೇವೆಗಳು ಅಥವಾ ಅಂತಹುದೇ ಚಟುವಟಿಕೆಗಳಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು. ವಿಶ್ವಾಸಾರ್ಹ ಕೆಲಸ ಮಾಡಿದ ಕಂಪನಿಯನ್ನು ಸರ್ಕಾರ ಗುರುತಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಖಾಕಿ ಹೊಸ ಪ್ಲಾನ್, ಸಿದ್ಧವಾಗಿದೆ ಸೋಷಿಯಲ್ ಮೀಡಿಯಾ ವಿಂಗ್

ಉಳಿದ ಎರಡು ಕಂಪನಿಗಳು ಹಿಂದೆ ವಿಶ್ವಾಸಾರ್ಹ ಕೆಲಸ ಮಾಡಿದ ಮತ್ತು ಸರ್ಕಾರದೊಂದಿಗೆ ಪಾಲುದಾರಿಕೆಗೆ ಸಿದ್ಧವಾಗಿರುವ ವ್ಯಕ್ತಿಗಳನ್ನು ಒಳಗೊಂಡಿದೆ. ನಾವು ಅವುಗಳನ್ನೂ ಕೂಡ ಪಟ್ಟಿಯೊಳಗೆ ಸೇರಿಸಿಕೊಳ್ಳಲು ಅವಕಾಶವಿದಯೇ ಎಂದು ಪರಿಶೀಲಿಸುತ್ತೇವೆ ಎಂದರು.

ಅಂತಿಮವಾಗಿ ಸರ್ಕಾರದ ಶಾರ್ಟ್​​ಲಿಸ್ಟ್​​ನಲ್ಲಿರುವ ಕಂಪನಿಗಳು ಮತ್ತು ವ್ಯಕ್ತಿಗಳನ್ನು ಮೂರು ಪ್ರಮುಖ ಕ್ಷೇತ್ರಗಳಾಗಿ ವಿಂಗಡಿಸಲಾಗುತ್ತದೆ, ಇದರಲ್ಲಿ ಒಂದು ಸತ್ಯ ಪರಿಶೀಲನಾ ತಂಡವಿದೆ, ಅದು ತಪ್ಪು ಮಾಹಿತಿಯನ್ನು ಪತ್ತೆ ಮಾಡುತ್ತದೆ ಮತ್ತು ಪರಿಹರಿಸುತ್ತದೆ. ಅನಾಲಿಟಿಕ್ಸ್ ಸ್ಕ್ವಾಡ್, ಇದು ತಪ್ಪು ಮಾಹಿತಿಯ ಪರಿಸರ ವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತದೆ. ಸಾಮರ್ಥ್ಯ ಅಭಿವೃದ್ಧಿ ತಂಡ, ಇದು ತಪ್ಪು ಮಾಹಿತಿ ಪರಿಸರ ವ್ಯವಸ್ಥೆಯ ಉಪಸ್ಥಿತಿ ಮತ್ತು ಪರಿಣಾಮಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನೆಡೆಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:01 am, Mon, 20 November 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ