New Year 2022 Guidelines: ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Christmas and New Year 2021 Covid Guidelines: ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ

New Year 2022 Guidelines: ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 21, 2021 | 11:09 PM

ಬೆಳಗಾವಿ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ (New Year Celebration) ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ಹೇಳಿಕೆ ನೀಡಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ  (Christmas Festival) ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30ರಿಂದ ಜ 2ರವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್​ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ಸಂಬಂಧ ನಡೆದ ವಿಡಿಯೊ ಕಾನ್ಫರೆನ್ಸ್​ನಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದರು.

Karnataka Government announces New Year 2022 Covid Guidelines amid rise of Omicron Cases in Karnataka State Here is the detail in Kannada

ಕರ್ನಾಟಕ ಸರ್ಕಾರವು ಹೊರಡಿಸಿರುವ ಆದೇಶ

ಅಪಾರ್ಟ್‌ಮೆಂಟ್‌ ಆವರಣಗಳಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ಸಮ್ಮತಿಸಿದೆ. ಕೊವಿಡ್ ಮಾರ್ಗಸೂಚಿ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಗ್ರೂಪ್ ಡ್ಯಾನ್ಸ್‌ಗಾಗಿ ಡಿಜೆ, ಡ್ಯಾನ್ಸ್‌ ಫ್ಲೋರ್‌ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ಯಾವುದೇ ವಿಶೇಷ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಿಲ್ಲ. ಅಪಾರ್ಟ್‌ಮೆಂಟ್ ಆವರಣದಲ್ಲಿ ವರ್ಷಾಚರಣೆಗೆ ಷರತ್ತಿನ ಸಮ್ಮತಿ ಷರತ್ತು ಪಾಲನೆ ಖಚಿತಪಡಿಸಿಕೊಳ್ಳುವುದು ಸಂಘಟಕರ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Omicron ಒಮಿಕ್ರಾನ್ 3 ಪಟ್ಟು ಹೆಚ್ಚು ಸಾಂಕ್ರಾಮಿಕ, ವಾರ್ ರೂಮ್‌ಗಳನ್ನು ಸಕ್ರಿಯಗೊಳಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ ಇದನ್ನೂ ಓದಿ: Omicron: ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ, ಲಸಿಕೆ ಪಡೆದವರಿಗೂ ತಗಲುತ್ತದೆ; WHO ವಿಜ್ಞಾನಿ

Published On - 3:30 pm, Tue, 21 December 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್