8 ತಿಂಗಳ ಬಳಿಕ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷ, ಸದಸ್ಯರ ನೇಮಕ

ಅಂತು ಇಂತು ರಾಜ್ಯ ಸರ್ಕಾರ 8 ತಿಂಗಳ ಬಳಿಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ ಮಾಡಿದೆ. ಬಾಕಿ ಉಳಿದಿರುವ 4800 ಪ್ರಕರಣ ತನಿಖೆಯಾಗಲಿವೆ. ಅಷ್ಟಕ್ಕೂ ಸರ್ಕಾರ ಯಾಕೆ ಇಷ್ಟು ವಿಳಂಬ ಮಾಡಿತು? ಇಲ್ಲಿದೆ ಕಾರಣ ಓದಿ..

8 ತಿಂಗಳ ಬಳಿಕ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷ, ಸದಸ್ಯರ ನೇಮಕ
ವಿಧಾನಸೌಧ
Edited By: ವಿವೇಕ ಬಿರಾದಾರ

Updated on: Nov 27, 2023 | 6:52 PM

ಬೆಂಗಳೂರು ನ.27: ರಾಜ್ಯ ಸರ್ಕಾರ (Karnataka Government) ಎಂಟು ತಿಂಗಳ ಬಳಿಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (Human Rights Commission) ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ನಿವೃತ್ತ ನ್ಯಾ. ಎಲ್​. ನಾರಾಯಣಸ್ವಾಮಿ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಅಧ್ಯಕ್ಷರ ಜೊತೆಗೆ ಇಬ್ಬರು ಸದಸ್ಯರನ್ನು ಸಹ ಆಯ್ಕೆ ಮಾಡಿದೆ. ನಿವೃತ್ತ ಜಿಲ್ಲಾ ನ್ಯಾ. ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಾಮ್ ಭಟ್ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.

ಎಲ್. ನಾರಾಯಣಸ್ವಾಮಿ ಅವರು ಹಿಮಾಚಲ ಪ್ರದೇಶ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದಾರೆ. ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸುಮಾರು 4,800ಕ್ಕೂ ಅಧಿಕ ಪ್ರಕರಣಗಳು ತನಿಖೆಯಾಗದೆ ಬಾಕಿ ಉಳಿದಿವೆ. ಈಗ ಅಧ್ಯಕ್ಷರು ಆಯ್ಕೆಯಾಗಿದ್ದರಿಂದ ತನಿಖೆ ಮುಂದುವರೆಯಲಿವೆ. ಮಂಗಳವಾರದಿಂದ ಬಾಕಿ ಉಳಿದಿದ್ದ ಪ್ರಕರಣಗಳ ತನಿಖೆ ಆರಂಭ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಾನವ ಹಕ್ಕುಗಳ ಆಯೋಗದ ರಚನೆಗೆ ಸಚಿವ ಸಂಪುಟ ನಿರ್ಣಯ: ಇನ್ನಿತರ ತೀರ್ಮಾನಗಳ ವಿವರ ಇಲ್ಲಿದೆ

8 ತಿಂಗಳ ವಿಳಂಬವೇಕೆ?

ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ಮುಖ್ಯಮಂತ್ರಿ, ಮುಖ್ಯ ನ್ಯಾಯಮೂರ್ತಿ, ಗೃಹ ಸಚಿವರು, ಕಾನೂನು ಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರ ಮೂಲಕ ಆಯ್ಕೆ ಮಾಡಲಾಗುತ್ತೆ. ಆದರೆ ಇಲ್ಲಿಯವರೆಗು ವಿಪಕ್ಷ ನಾಯಕ ಇಲ್ಲದ ಕಾರಣ ಅಧ್ಯಕ್ಷರು ಮತ್ತು ಸದಸ್ಯರನ್ನು ಸರ್ಕಾರ ಆಯ್ಕೆ ಮಾಡಿರಲಿಲ್ಲ.

ಸರ್ಕಾರಕ್ಕೆ ನೋಟಿಸ್​ ನೀಡಿದ್ದ ಹೈಕೋರ್ಟ್​

ಎಂಟು ತಿಂಗಳಾದರೂ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಿಲ್ಲ ಎಂದು ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೊಟೀಸ್ ನೀಡಿತ್ತು. ವಿರೋಧ ಪಕ್ಷ ನಾಯಕರ ಆಯ್ಕೆ ಆಗದ ಕಾರಣಕ್ಕೆ ಮಾನವಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರ ಆಯ್ಕೆ ತಡವಾಗಿದೆ ಎಂದು ನೊಟೀಸ್​​ಗೆ ಸರ್ಕಾರಿ ಮುಖ್ಯ ಕಾರ್ಯದರ್ಶಿ ಉತ್ತರ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us