AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಗಿಫ್ಟ್ ಕೊಟ್ಟ ಸರ್ಕಾರ: ನಿಗಮ ಮಂಡಳಿ, ಪ್ರಾಧಿಕಾರಗಳಿಗೆ 428 ಕಾರ್ಯಕರ್ತರ ನೇಮಕ

ಕರ್ನಾಟಕ ಸರ್ಕಾರವು 428 ಕಾರ್ಯಕರ್ತರನ್ನು ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಿಸಿದೆ. ಸಿಎಂ ಡಿಕೆ ಶಿವಕುಮಾರ್​ ಅನುಮೋದನೆಯೊಂದಿಗೆ ಈ ಅಧಿಕೃತ ಆದೇಶ ಹೊರಬಿದ್ದಿದೆ. ಆ ಮೂಲಕ ಉಪ ಚುನಾವಣೆಗೂ ಮುನ್ನವೇ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಗಿಫ್ಟ್ ಕೊಟ್ಟ ಸರ್ಕಾರ: ನಿಗಮ ಮಂಡಳಿ, ಪ್ರಾಧಿಕಾರಗಳಿಗೆ 428 ಕಾರ್ಯಕರ್ತರ ನೇಮಕ
ವಿಧಾನಸೌಧImage Credit source: Getty images
ಪ್ರಸನ್ನ ಗಾಂವ್ಕರ್​
| Edited By: |

Updated on: Nov 11, 2026 | 9:10 PM

Share

ಮುಖ್ಯಾಂಶಗಳು

  • ಉಪ ಚುನಾವಣೆಗೂ ಮುನ್ನವೇ ಕಾರ್ಯಕರ್ತರಿಗೆ ಅಧಿಕಾರ
  • ವಿವಿಧ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ನಿರ್ದೇಶಕ
  • ಬರೋಬ್ಬರಿ 428 ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಮಣೆ

ಬೆಂಗಳೂರು, ನವೆಂಬರ್​​ 11: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಉಪಚುನಾವಣೆಗೂ ಮುನ್ನವೇ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಧಿಕಾರಿ ನೀಡುವ ಮೂಲಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಬರೋಬ್ಬರಿ 428 ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಮಣೆ

ಸಿಎಂ ಡಿಕೆ ಶಿವಕುಮಾರ್​ ಅನುಮೋದನೆ ಬಳಿಕ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ನಿಗಮ ಮಂಡಳಿಗಳಿಗೆ 428 ಮಂದಿಯನ್ನ ನೇಮಕ ಮಾಡಿ ಸರ್ಕಾರ ಅಂಕಿತ ಹಾಕಿದೆ. ಆ ಮೂಲಕ ಸರ್ಕಾರ ಕೊನೆಗೂ ಕಾಂಗ್ರೆಸ್​ ಕಾರ್ಯಕರ್ತರಿಗೆ ಗಿಫ್ಟ್ ನೀಡಿದೆ.

ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೇಮಕ

ರಾಜ್ಯದ ವಿವಿಧ ವಿದ್ಯುತ್​​ ನಿಗಮ, ಸಾರಿಗೆ, ಅಭಿವೃದ್ಧಿ ನಿಗಮಗಳು ಹಾಗೂ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನು ನೇಮಕ ಮಾಡಲಾಗಿದೆ. ಅಷ್ಟೇ ಅಲ್ಲದೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೂ ನೇಮಕ ಮಾಡಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ!

ರಾಜ್ಯದ ವಿವಿಧ ಜಿಲ್ಲೆಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಟ್ಟು 428 ಮಂದಿಯನ್ನು ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಒಟ್ಟು ಮೂರು ಹಂತದಲ್ಲಿ ಅಧಿಕಾರ ಹಂಚಿಕೆ ಎಂದ ಸಿಎಂ 

ಇಂದು ಮೈಸೂರಿನಲ್ಲಿ ಸಿಎಂ ಡಿಕೆ ಶಿವಕುಮಾರ್​ ಈ ಕುರಿತಾಗಿ ಮಾಹಿತಿ ನೀಡಿದ್ದರು. ‘500 ಕಾಂಗ್ರೆಸ್​ ಕಾರ್ಯಕರ್ತರನ್ನ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರಾಗಿ ನೇಮಿಸುತ್ತೇವೆ. ಪಟ್ಟಿ ಸಿದ್ಧವಾಗಿದೆ, ಸಂಜೆ ಅದನ್ನು ಬಿಡುಗಡೆ ಮಾಡುತ್ತೇವೆ. ಈಗಾಗಲೇ ನಾನು ಪಟ್ಟಿಗೆ ಸಹಿ ಹಾಕಿದ್ದೇನೆ. ವರ್ಗೀಕರಣ ನಡೆಯುತ್ತಿದೆ, ಮುಗಿದ ಕೂಡಲೇ ಬಿಡುಗಡೆ ಮಾಡುತ್ತೇವೆ. ಒಟ್ಟು ಮೂರು ಹಂತದಲ್ಲಿ ಅಧಿಕಾರ ಹಂಚಿಕೆ ಮಾಡುತ್ತೇವೆ. ಇಂದು ಸದ್ಯಸರು ಹಾಗೂ ನಿರ್ದೇಶಕರ ನೇಮಕ ಆಗುತ್ತದೆ. ಇನ್ನು 2 ಪಟ್ಟಿಯಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕ, ಎಲ್ಲವೂ ಅಂತಿಮ ಹಂತದಲ್ಲಿದೆ. ಕೆಲವು ಶಾಸಕರಿಗೂ ಸ್ಥಾನ ಕೊಡಬೇಕಿದೆ, ಕೊಡುತ್ತೇವೆ‌’ ಎಂದು ಅವರು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More