ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

| Updated By: ವಿವೇಕ ಬಿರಾದಾರ

Updated on: Jul 22, 2023 | 11:53 AM

545 PSI Recruitment Scam: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.

ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು ಜು.22:  545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು (PSI Recruitment Scam) ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆಗೆ ನಡೆಯಲಿದೆ. ಈ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪ್ರಕರಣದ ತನಿಖೆಯನ್ನು ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್​ಐ ಹಗರಣ ಭಾರಿ ಸದ್ದು ಮಾಡಿತ್ತು. ಈ ಹಗರಣ ವಿಚಾರವಾಗಿ ಅಂದಿನ ಗೃಹ ಮಂತ್ರಿ ಆರಾಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡಿತತ್ತು. ನಾವು ಅಧಿಕಾರಕ್ಕೆ ಬಂದ ಕೂಡಲೆ ತನಿಖೆ ನಡೆಸುವುದಾಗಿ ಕಾಂಗ್ರೆಸ್​ ಹೇಳಿತ್ತು. ಅದರಂತೆ ಇದೀಗ ತನಿಖೆಗೆ ನೀಡಿದೆ.

ಇದನ್ನೂ ಓದಿ: ಪಿಎಸ್‌ಐ ಅಕ್ರಮದ ಆರೋಪಿಯಲ್ಲದ ಅಭ್ಯರ್ಥಿಗಳಿಗೆ ವಿಶೇಷ ಪರೀಕ್ಷೆ ಸಾಧ್ಯವಿಲ್ಲ; ಹೈಕೋರ್ಟ್​​ಗೆ ತಿಳಿಸಿದ ಸರ್ಕಾರ

ಪಿಎಸ್​ಐ 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಜನವರಿ 21 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್​ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು.

ರಾಜ್ಯದ ವಿವಿಧ ಪೊಲೀಸ್​ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳನ್ನು ಒಳಗೊಂಡ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸಲಾಗಿತ್ತು. ನಂತರ ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆ ಬರೆದಿರುವು ದೃಢಪಟ್ಟಿರುವ ಹಿನ್ನೆಲೆ 1977ರ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳ ಪ್ರಕಾರ ಪೊಲೀಸ್​ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು.

ಇನ್ನು ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪಾಲ್​​ ಅವರಿಗೆ  ಮತ್ತೊಂದು ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದೆ. ಪ್ರಕರಣ ಸಂಬಂಧ ಈಗಾಗಲೇ ಪ್ರಾಥಮಿಕ ಚಾರ್ಜ್ ಶೀಟ್​​ನ್ನು ಸಿಐಡಿ ನ್ಯಾಯಾಲಯಕ್ಕೆ  ಸಲ್ಲಿಸಿತ್ತು. ಇದೀಗ ಅಮೃತ್ ಪಾಲ್ ವಿರುದ್ದ ಮುಂದಿನ ಕಾನೂನು ಕ್ರಮಕ್ಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ. ಸದ್ಯ ಅಮೃತ್ ಪಾಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:21 am, Sat, 22 July 23