ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ವಾದಿಸಲು ವಿಶೇಷ ಅಭಿಯೋಜಕರನ್ನ ನೇಮಿಸಿದ ಸರ್ಕಾರ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್​ಐಟಿ ತಂಡ ತನಿಖೆಯನ್ನಯ ಚುರುಕುಗೊಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿ ಆದೇಶ ಹೊರಡಿಸಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ವಾದಿಸಲು ವಿಶೇಷ ಅಭಿಯೋಜಕರನ್ನ ನೇಮಿಸಿದ ಸರ್ಕಾರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 30, 2024 | 10:01 PM

ಬೆಂಗಳೂರು, (ಏಪ್ರಿಲ್ 30): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಪ್ರಕರಣಕ್ಕೆ  (Prajwal Revanna Pendrive Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ. ಸದ್ಯ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ(ಎಸ್​ಪಿಪಿ) ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು (ಏಪ್ರಿಲ್ 30) ಆದೇಶ ಹೊರಡಿಸಿದೆ.

ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ. ಇದೀಗ ಇವರನ್ನೇ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ವಿಡಿಯೋ ಕೇಸ್‌: ಪ್ರಜ್ವಲ್ ರೇವಣ್ಣ ತಪ್ಪು ಸಾಬೀತಾದ್ರೆ ಏನು ಶಿಕ್ಷೆ? ಕಾನೂನಿನಲ್ಲಿರುವ ಅವಕಾಶಗಳೇನು?

ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ (H.D.Revanna) ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಹೊಳೆನರಸೀಪುರ (Holenarasipura) ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ 354 A, 354 D, 509 ಅಡಿ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಆರೋಪಿ ನಂಬರ್1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ.

ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ. ಕೆಲ ಸಂತ್ರಸ್ತೆಯರನ್ನು ಪತ್ತೆ ಮಾಡಿ ಕೆಲ ಮಹತ್ವದ ದಾಖಲೆಯನ್ನು ಕಲೆಹಾಕಿದ್ದಾರೆ. ಅಲ್ಲದೇ ಈ ಸಂಬಂಧ ಎ1 ಆರೋಪಿ ರೇವಣ್ಣ ಅವರರಿಗೆ ನೋಟಿಸ್ ನೀಡಿ ವಿಚಾರಣೆಗೊಳಪಡಿಸಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Tue, 30 April 24