17,835.9 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಸರ್ಕಾರದಿಂದ ಅನುಮೋದನೆ

ರಾಜ್ಯದಲ್ಲಿ 27,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿಯಿಂದ ಕರ್ನಾಟಕ ಸರ್ಕಾರವು 17,835.9 ಕೋಟಿ ರೂ. ಮೌಲ್ಯದ ಆರು ಹೊಸ ಯೋಜನೆಗಳು ಮತ್ತು ಹೆಚ್ಚುವರಿ ಬಂಡಾವಳ ಹೂಡಿಕೆಯ ಎಂಟು ಯೋಜನೆಗಳಿಗೆ ಅನುಮೋದಿಸಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.

17,835.9 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಸರ್ಕಾರದಿಂದ ಅನುಮೋದನೆ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Mar 09, 2024 | 8:12 AM

ಬೆಂಗಳೂರು, ಮಾರ್ಚ್​​ 09: ಕರ್ನಾಟಕ ಸರ್ಕಾರವು (Karnataka Government) 17,835.9 ಕೋಟಿ ರೂ. ಮೌಲ್ಯದ ಆರು ಹೊಸ ಯೋಜನೆಗಳು ಮತ್ತು ಹೆಚ್ಚುವರಿ ಬಂಡಾವಳ ಹೂಡಿಕೆಯ ಎಂಟು ಯೋಜನೆಗಳಿಗೆ ಅನುಮೋದಿಸಿದೆ. ಇದರಿಂದ ರಾಜ್ಯದಲ್ಲಿ 27,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಅನುಮೋದನಾ ಸಮಿತಿ (ಎಸ್​ಹೆಚ್​ಎಲ್​ಸಿಸಿ) ಸಭೆಯಲ್ಲಿ ಅನುಮೋದನೆ ನೀಡಲಾಯಿತು.

8,220.05 ಕೋಟಿ ರೂ. ಮೌತ್ತದ ಆರು ಹೊಸ ಯೋಜನೆಗಳಿಗೆ ಮತ್ತು 9,615.85 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ ಎಂಟು ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಕೋಲಾರ ಜಿಲ್ಲೆಯ ನರಸಾಪರ ಕೈಗಾರಿಕಾ ಪ್ರದೇಶದಲ್ಲಿ ವಿಸ್ಟ್ರಾನ್​​ ಇನ್ಫೋಕಾಂ ಮ್ಯಾನುಫ್ಯಾಕ್ಚರಿಂಗ್​ ಇಂಡಿಯಾ ಪ್ರವೇಟ್​ ಲಿಮಿಟೆಡ್​​ 2,095 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್​​ಫೋನ್​ ತಯಾರಿಕಾ ಘಟಕ ಆರಂಭವಾಗಲಿದ್ದು, 21,723 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Tata: ಟಾಟಾ ಕಂಪನಿಗಳಿಂದ ಬೆಂಗಳೂರಲ್ಲಿ ಗನ್ ಫ್ಯಾಕ್ಟರಿ, ಎಂಆರ್​ಒ ಘಟಕ; 2,300 ಕೋಟಿ ರೂ ಹೂಡಿಕೆ ಸಾಧ್ಯತೆ

ಯಾವ ಕಂಪನಿಗಳು ಬಂಡವಾಳ ಹೂಡಿಕೆ?

ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲು ಒಟ್ಟು 6 ಕಂಪನಿಗಳು ಮುಂದೆ ಬಂದಿವೆ. ಎಸ್​​ಟಿಟಿ ಗ್ಲೋಬಲ್ ಡಾಟಾ ಸೆಂಟರ್ಸ್ ಇಂಡಿಯಾ ಲಿಮಿಟೆಡ್ 1,750 ಕೋಟಿ ರೂ., ಇಂಡಿಯನ್ ಕೇನ್ ಪವರ್ ಲಿಮಿಟೆಡ್ 1,078 ಕೋಟಿ ರೂ., ಐಸಿಟಿ ಸರ್ವಿಸ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ಸ್ 1,450 ಕೋಟಿ ರೂ. ಮತ್ತು ಶ್ರೀ ಬಾಲಾಜಿ ಷುಗರ್ಸ್​​ ಮತ್ತು ಕೆಮಿಕಲ್ಸ್​ ಪ್ರೈವೇಟ್​ ಲಿಮಿಟೆಡ್​​ ಮತ್ತು ಏರ್​ ಇಂಡಿಯಾ ಲಿಮಿಟೆಡ್​​ ಹೂಡಿಕೆ ಮಾಡಲಿವೆ.

ಉತ್ತರ ಕರ್ನಾಟಕದಲ್ಲಿ ಎಷ್ಟು ಹೂಡಿಕೆ?

ಉತ್ತರ ಕರ್ನಾಟಕ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆ ಎಂಟು ಯೋಜನೆಗಳಿಗೆ ಅನುಮತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:11 am, Sat, 9 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ