AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಸುತ್ತೋಲೆ

Karnataka Residential Educational Institutions Society: ಮಹತ್ವದ ಕ್ರಮವೊಂದರಲ್ಲಿ ಕರ್ನಾಟಕದ ಎಲ್ಲ ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಸುತ್ತೋಲೆ ಹೊರಡಿಸಿದ್ದು, ಉಲ್ಲಂಘಿಸಿದಲ್ಲಿ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಸುತ್ತೋಲೆ
ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಬ್ರೇಕ್
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on:Feb 15, 2024 | 2:35 PM

Share

ಬೆಂಗಳೂರು, ಫೆಬ್ರವರಿ 15: ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು (Religious festival) ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ (Karnataka Government) ಗುರುವಾರ ಆದೇಶ ಹೊರಡಿಸಿದೆ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (Karnataka Residential Educational Institutions Society) ಸುತ್ತೋಲೆ ಹೊರಡಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದೆ.

ಸಮಾಜ ಕಲ್ಯಾಣ ಸಚಿವ eಚ್​ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಅದರಂತೆ, 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿದಂತೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಖಾಸಗಿ ಶಾಲೆಗಳಿಗೆ ಅನ್ವಯವಾಗುತ್ತದೆಯೇ?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಮತ್ತು ಕಾಲೇಜುಗಳಿಗೆ ಈ ಸುತ್ತೋಲೆ ಅನ್ವಯವಾಗುತ್ತದೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ರಾಜ್ಯದ ಖಾಸಗಿ ಶಾಲೆ, ಕಾಲೇಜುಗಳಿಗೆ ಸುತ್ತೋಲೆಯು ಅನ್ವಯವಾಗುವುದಿಲ್ಲ ಎನ್ನಲಾಗಿದೆ.

ಸುತ್ತೋಲೆಯಲ್ಲೇನಿದೆ?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕಾಗಿರುತ್ತದೆ. ಆದರೆ ಕೆಲವು ರಾಷ್ಟ್ರೀಯ ಹಬ್ಬಗಳಲ್ಲದೇ ಇತರೆ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ ಅವರು ಉಲ್ಲೇಖಿತ ಟಿಪ್ಪಣಿಯಲ್ಲಿ ಅನುಮೋದಿಸಿರುವಂತೆ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಈ ಕೆಳಕಂಡ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಕ್ಕಳಿಲ್ಲದೆ ಮುಚ್ಚುತ್ತಿವೆ ತೀರ್ಥಹಳ್ಳಿಯ ಸರ್ಕಾರಿ ಶಾಲೆಗಳು, ಸದನದಲ್ಲಿ ಆರಗ ಕಳವಳ: ಶಿಕ್ಷಣ ಸಚಿವರ ಉತ್ತರ ಹೀಗಿದೆ

ಯಾವೆಲ್ಲ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬಹುದು?

  • ಗಣರಾಜ್ಯೋತ್ಸವ
  • ಸ್ವಾತಂತ್ರ ದಿನಾಚರಣೆ
  • ಮಹಾತ್ಮ ಗಾಂಧಿ ಜಯಂತಿ
  • ಕನ್ನಡ ರಾಜ್ಯೋತ್ಸವ
  • ಡಾ.ಬಿ.ಆರ್. ಅಂಬೇಡ್ಕ‌ರ್ ಜಯಂತಿ
  • ವಾಲ್ಮೀಕಿ ಜಯಂತಿ
  • ಕನಕದಾಸ ಜಯಂತಿ
  • ಬಸವ ಜಯಂತಿ
  • ಸಂವಿಧಾನ ದಿನಾಚರಣೆ
  • ಯೋಗ ದಿನಾಚರಣೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:03 pm, Thu, 15 February 24