ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

Artificial Colour Ban: ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆ ಬ್ಯಾನ್ ಆಗಿದ್ದೇಕೆ? ಸರ್ಕಾರ ಕೊಟ್ಟ ಕಾರಣವೇನು? ಇಲ್ಲಿದೆ ಮಾಹಿತಿ.

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ
ಚಿಕನ್​, ಫಿಶ್ ಕಬಾಬ್
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:Jun 24, 2024 | 6:44 PM

ಬೆಂಗಳೂರು, (ಜೂನ್ 24): ರಾಜ್ಯಾದ್ಯಂತ ಕಬಾಬ್‌(kabab), ಫಿಶ್‌(Fish), ಚಿಕನ್‌ಗೆ (chicken)ಕೃತಕ ಬಣ್ಣ (Artificial Colour) ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ (Karnataka Government) ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಲಾಗಿತ್ತು. ಇದೀಗ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆ ಬ್ಯಾನ್ ಮಾಡಲಾಗಿದೆ.

ಕೃತಕ ಬಣ್ಣ ನಿಷೇಧಕ್ಕೆ ಕಾರಣವೇನು?

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು.

ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI ಸಂಗ್ರಹಿಸಿದ್ದು, ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಾದರಿ ಟೆಸ್ಟ್​​ ಮಾಡಲಾಗಿದೆ. ಟೆಸ್ಟಿಂಗ್ ವೇಳೆ ಕೃತಕ ಬಣ್ಣಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಇರೋದು ಪತ್ತೆಯಾಗಿತ್ತು.

ಇದನ್ನೂ ಓದಿ: ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯನ್ ಬ್ಯಾನ್ ಆಗಿದ್ದೇಕೆ?; ರೊಡಮೈನ್-ಬಿ ಬಗ್ಗೆ ನಿಮಗೂ ಗೊತ್ತಿರಲಿ

ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ರಾಸಾಯನಿಕ ಅಂಶ ಪತ್ತೆಯಾಗಿದ್ರೆ, ಇತ್ತ ಗೋಬಿ ಮಂಚೂರಿಯಲ್ಲಿ‌ ಸನ್‌ಸೆಟ್‌ ಯೆಲ್ಲೊ‌ ಬಣ್ಣ ಮತ್ತು ಟಾಟ್ರ್ರಾಜಿನ್‌ ಪತ್ತೆಯಾಗಿದೆ. ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್‌-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ’ಸನ್‌ಸೆಟ್‌ ಯೆಲ್ಲೊ’ ಬಣ್ಣ ಮತ್ತು ‘ಟಾಟ್ರ್ರಾಜಿನ್‌’ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕಲರ್ ಬಳಕೆಯನ್ನು ನಿಷೇಧಿಸಿದೆ.

ಏನಿದು ರೋಡ್​ಮೈನ್ ಬಿ.. ಪರಿಣಾಮವೇನು?

ರೋಡ್​ಮೈನ್ ಬಿ ರಾಸಾಯನಿಕವನ್ನು, ಜವಳಿ, ಕಾಗದ, ಚರ್ಮದ ಉದ್ಯಮಗಳಲ್ಲಿ ಕೆಂಪು ಮತ್ತು ಗುಲಾಬಿ ಬಣ್ಣಕ್ಕಾಗಿ ಬಳಸಲಾಗುತ್ತೆ. ಈ ರಾಸಾಯನಿಕ ಆಹಾರದ ಮೂಲಕ ದೇಹ ಸೇರಿದ್ರೆ, ಕ್ಯಾನ್ಸರ್ ಖಾಯಿಲೆಗೆ ತುತ್ತಾಗುವ ಸಂಭವವಿದೆ. ಇದು ಕಾಟನ್ ಕ್ಯಾಂಡಿಯಲ್ಲಿ ಮಾತ್ರವಲ್ಲ, ಸಿಹಿ ತಿಂಡಿಗಳಾದ ಬಣ್ಣದ ಮಿಠಾಯಿಗಳಲ್ಲೂ ಇದು ಕಂಡು ಬರುತ್ತೆ. ಇದು ನಿರಂತರವಾಗಿ ದೇಹ ಸೇರಿದ್ರೆ ಮೆದುಳಿಗೂ ತುಂಬಾ ಎಫೆಕ್ಟ್ ಆಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:42 pm, Mon, 24 June 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ