AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: 14ನೇ ಬಾರಿ ಬಜೆಟ್ ಮಂಡನೆಗೆ ಸಿದ್ದವಾಗಿರುವ ಸಿದ್ದರಾಮಯ್ಯ; ರಾಜ್ಯದ ಜನರ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ ಸಿಎಂ​​ ಟ್ವೀಟ್​

ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಲಿದ್ದಾರೆ.

Budget 2023: 14ನೇ ಬಾರಿ ಬಜೆಟ್ ಮಂಡನೆಗೆ ಸಿದ್ದವಾಗಿರುವ ಸಿದ್ದರಾಮಯ್ಯ; ರಾಜ್ಯದ ಜನರ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ ಸಿಎಂ​​ ಟ್ವೀಟ್​
ಸಿದ್ದರಾಮಯ್ಯ
Anil Kalkere
| Updated By: ವಿವೇಕ ಬಿರಾದಾರ|

Updated on:Jul 07, 2023 | 11:58 AM

Share

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 14ನೇ ಬಾರಿ ಬಜೆಟ್ (Budget 2023) ಮಂಡಿಸುವ ಮೂಲಕ ದಾಖಲೆ ನಿರ್ಮಿಸಲಿದ್ದಾರೆ. ಈ ಕುರಿತು ಟ್ವೀಟ್​ ಮಾಡಿದ ಅವರು ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ (Karntakataka Government) ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಯಾರೂ ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ” ಎಂದು ವಿಶ್ವಾಸ ನೀಡಿದ್ದಾರೆ.

ಮುಂದುವರೆದು ” ನನ್ನ ಹಿಂದಿನ ಎಲ್ಲ ಬಜೆಟ್​​ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜ್ಯದ ಜನರ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಟ್ವೀಟ್​​ ಮೂಲಕ ರಾಜ್ಯದ ಜನರಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್, ಬಿಜೆಪಿಯವರಿಂದ ಸ್ಟಿಂಗ್ ಆಪರೇಷನ್: ಎಚ್ಚರಿಯಿಂದ ಇರುವಂತೆ ಸ್ವಪಕ್ಷದ ಶಾಸಕರಿಗೆ ಸಿದ್ದರಾಮಯ್ಯ ಕಿವಿಮಾತು

ಗ್ಯಾರಂಟಿ ಜಾರಿ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಜೆಟ್ ಇದಾಗಿದೆ. ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ಗಾತ್ರ ಮತ್ತಷ್ಟು ಹೆಚ್ಚಾಗಲಿದೆ. ಈ ಮೂಲಕ ಗ್ಯಾರಂಟಿ ಜಾರಿ ಜೊತೆ ಇನ್ನೇಷ್ಟು ಭಾಗ್ಯ ಸಿಗಲಿದೆ ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಜೆಟ್​​ ಮಂಡನೆ ಲೈವ್​ ಆಗಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Fri, 7 July 23