ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು- ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು: ಸಚಿವ ಜಗದೀಶ್​ ಶೆಟ್ಟರ್

ನಿರೀಕ್ಷೆ ಮೀರಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ‌ ಆಕ್ಸಿಜನ್ ಕೊರತೆ ಎದುರಾಗಿದೆ. ಭದ್ರಾವತಿ ಆಕ್ಸಿಜನ್ ಘಟಕಕ್ಕೆ ಇಂದು ಭೇಟಿ ನೀಡಿ, ಪರಿಶೀಲನೆ ಮಾಡುವೆ. ಚಿತ್ರದುರ್ಗ ಜಿಲ್ಲೆಗೆ ಪ್ರತಿದಿನ 7 ಸಾವಿರ ಲೀಟರ್​ ಆಕ್ಸಿಜನ್ ನೀಡಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಜಿಲ್ಲೆಗೆ ಸಮರ್ಪಕ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ.

ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು- ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು: ಸಚಿವ ಜಗದೀಶ್​ ಶೆಟ್ಟರ್
ಸಚಿವ ಜಗದೀಶ್​ ಶೆಟ್ಟರ್
Follow us
ಸಾಧು ಶ್ರೀನಾಥ್​
|

Updated on: May 06, 2021 | 12:13 PM

ಚಿತ್ರದುರ್ಗ: ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು. ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು ಎಂದು ನಗರದಲ್ಲಿಂದು ಸಚಿವ ಜಗದೀಶ್​ ಶೆಟ್ಟರ್ ಹೇಳಿದ್ದಾರೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಮೆಡಿಕಲ್ ಆಕ್ಸಿಜನ್ ಸರಬರಾಜು ವ್ಯವಸ್ಥೆಯ ಜವಾಬ್ಧಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಿ ಆದೇಶ ಹೊರಡಿಸಿದ್ದರು ಎಂಬುದು ಗಮನಾರ್ಹ.

ನಿರೀಕ್ಷೆ ಮೀರಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ‌ ಆಕ್ಸಿಜನ್ ಕೊರತೆ ಎದುರಾಗಿದೆ. ಭದ್ರಾವತಿ ಆಕ್ಸಿಜನ್ ಘಟಕಕ್ಕೆ ಇಂದು ಭೇಟಿ ನೀಡಿ, ಪರಿಶೀಲನೆ ಮಾಡುವೆ. ಚಿತ್ರದುರ್ಗ ಜಿಲ್ಲೆಗೆ ಪ್ರತಿದಿನ 7 ಸಾವಿರ ಲೀಟರ್​ ಆಕ್ಸಿಜನ್ ನೀಡಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಜಿಲ್ಲೆಗೆ ಸಮರ್ಪಕ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಕೆ ಮಾಡಲಾಗುವುದು. ಆಕ್ಸಿಜನ್, ರೆಮ್ ಡಿಸಿವಿರ್ ಕೊರತೆ ಆಗದಂತೆ ಸರ್ಕಾರದಿಂದ ಕ್ರಮ ಕೈಗೊಳಲಾಗುವುದು. ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು. ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು ಎಂದು ಸಚಿವ ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ.

ಇದನ್ನೂ ಓದಿ:

Karnataka Covid Curfew: ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ ಯಾವ ಸಚಿವರಿಗೆ ಯಾವ ಹೊಣೆಗಾರಿಕೆ ನೀಡಿದರು? ಇಲ್ಲಿದೆ ವಿವರ

(karnataka government cant provide all requirements to stop coronavirus people should follow corona guidelines says minister jagadish shettar)