ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಕರ್ನಾಟಕ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿರುವುದನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಸರ್ಕಾರ ದಿವಾಳಿಯಾಗಿದೆ, ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಕ್ಷಣವೇ ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸುವಂತೆ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Image Credit source: scroll.in

Updated on: Feb 11, 2026 | 2:47 PM

ಬೆಂಗಳೂರು, ಫೆಬ್ರವರಿ 11: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್​ ಸ್ಕೂಲ್​​ (KPS​​) ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದೆ. ಆ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ಚರ್ಚೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj S Bommai)
ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ, ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಬೊಮ್ಮಾಯಿ

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಮೇಲಿಂದ ಮೇಲೆ ಚುನಾವಣೆಯಲ್ಲಿ ಸೋಲುತ್ತಿರುವುದರಿಂದ ಅವರ ನಾಯಕ ಹತಾಶರಾಗಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಅವರು ನಗರ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​

ಬೆಂಚ್​ಗಳ ಮೇಲೆ ನಿಲ್ಲುವುದು, ಸ್ಪೀಕರ್ ಮೇಲೆ ದಾಳಿ ಮಾಡುವುದು ಇದು ಮಿತಿಮೀರಿದೆ. ಕಾಂಗ್ರೆಸ್ ಮಹಿಳಾ ಸಂಸದರು  ಪ್ರಧಾನಮಂತ್ರಿಯ ಆಸನದವರೆಗೆ ಬಂದು ಅವರು ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಸಂಸತ್ತಿನ ಇತಿಹಾಸದಲ್ಲಿ ಯಾವತ್ತೂ ಆಗಿರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಇದು ಬಾಗಿಲು ಮುಚ್ಚದ ಸರ್ಕಾರಿ ಶಾಲೆ, ಅಧ್ಯಾಪಕರಿಗೆ ಶಿಫ್ಟ್​ನಲ್ಲಿ ಕೆಲಸ! SSLC ಫಲಿತಾಂಶ ಹೆಚ್ಚಿಸಲು ವಿನೂತನ ಪ್ರಯೋಗ

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸಲು ಬಿಡುತ್ತಾರೆ ಎನ್ನುವ ನಂಬಿಕೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ, ಅವರು ಜನರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ. ಅವರು ತೊಂದರೆ ಕೊಡುವುದನ್ನೇ ಅಜೆಂಡಾ ಮಾಡಿಕೊಂಡಿದ್ದಾರೆ. ಬಹುತೇಕ ಅದೇ ಆಗಬಹುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.