ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿಗೆ ತನಿಖೆ ಹೊಣೆ, ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ

ರಮೇಶ್‌ ಜಾರಕಿಹೊಳಿ ಸಿಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿಗೆ ತನಿಖೆ ಹೊಣೆ, ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ
ಐಪಿಎಲ್ ಅಧಿಕಾರಿ ಸೌಮೇಂದು ಮುಖರ್ಜಿ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 10, 2021 | 9:29 PM

ಬೆಂಗಳೂರು: ರಮೇಶ್​ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ ತನಿಖೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ವಿಶೇಷ ಕಾರ್ಯಪಡೆಗೆ (ಎಸ್​ಐಟಿ) ವಹಿಸಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

‘ಸಚಿವ ರಮೇಶ್ ಜಾರಕಿಹೊಳಿ ಅವರ ವಿನಂತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಸ್​ಐಟಿ ರಚನೆಗೆ ಸೂಚಿಸಿರುವ ಟಿಪ್ಪಣಿಯಲ್ಲಿ ಹೇಳಿದ್ದಾರೆ.

Soumendu-Mukharjee-Order

ತನಿಖೆಗೆ ಆದೇಶ ನೀಡುವ ಗೃಹ ಸಚಿವರ ಪತ್ರ (ಎಡ) ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ

‘ಮಾರ್ಚ್ 9ರಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನನಗೆ ಪತ್ರಬರೆದಿದ್ದರು. ಅವರ ವಿರುದ್ಧ ಮಾರ್ಚ್ 2ರಂದು ಕಬ್ಬನ್​ಪಾರ್ಕ್ ಠಾಣೆಯಲ್ಲಿ ನೀಡಿರುವ ಅರ್ಜಿಯಲ್ಲಿ ಅವರ ರಾಜಕೀಯ ತೇಜೋವಧೆ ಹಾಗೂ ಮಾಡುವ ಉದ್ದೇಶವಿದೆ ಎಂದು ಹೇಳಿದ್ದರು. ಇದರಲ್ಲಿ ಹಲವಾರು ಜನರ ಷಡ್ಯಂತ್ರವಿದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕಶವಾಗಿ ವಿಚಾರಣೆ ನಡೆಸಲು ಒಂದು ವಿಶೇಷ ತಂಡ ರಚಿಸಲು ಹಾಗೂ ಅದರ ನೇತೃತ್ವವನ್ನು ಎಡಿಜಿಪಿ ಸೌಮೇಂದು ಮುಖರ್ಜಿ ಅವರಿಗೆ ವಹಿಸಲು ಸೂಚಿಸಲಾಗಿದೆ’ ಎಂದು ಬಸವರಾಜ ಬೊಮ್ಮಾಯಿ ಬೆಂಗಳೂರು ಪೊಲೀಸ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರ ಜೊತೆಗೆ ಇರುವ ಸಿಡಿಯೊಂದನ್ನು ಆಧರಿಸಿ, ಮಹಿಳೆಗೆ ಅನ್ಯಾಯವಾಗಿದೆ ಎಂದು​ ಸಾಮಾಜಿಕ ಹೋರಾಟಗಾರ  ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್​ಪಾರ್ಕ್ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಆಕ್ಷೇಪಾರ್ಹ ದೃಶ್ಯಗಳಿದ್ದ ಈ ಸಿಡಿ ರಾಜ್ಯ ರಾಜಕಾರಣದದಲ್ಲಿ ಸಂಚಲನ ಮೂಡಿಸಿತ್ತು. ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರದ ದಿನಗಳಲ್ಲಿ ದಿನೇಶ್ ಕಲ್ಲಹಳ್ಳಿ ತಮ್ಮ ದೂರು ಹಿಂಪಡೆದಿದ್ದರು. ಇದರ ಬೆನ್ನಿಗೇ ಪತ್ರಿಕಾಗೋಷ್ಠಿ ನಡೆಸಿದ್ದ ರಮೇಶ್ ಜಾರಕಿಹೊಳಿ ಸೋದರ ಬಾಲಚಂದ್ರ ಜಾರಕಿಹೊಳಿ ಇದು ನಕಲಿ ಸಿಡಿ ಎಂದು ದೂರಿದ್ದರು. ನಿನ್ನೆ (ಮಾರ್ಚ್ 9) ಪತ್ರಿಕಾಗೋಷ್ಠಿ ನಡೆಸಿದ್ದ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಇರುವವರನ್ನು ಜೈಲಿಗೆ ಹಾಕಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ದೆಹಲಿ ವಕೀಲರೊಂದಿಗೆ ರಮೇಶ್ ಜಾರಕಿಹೊಳಿ ಚರ್ಚೆ: ಮಾನನಷ್ಟ, ಐಟಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಚಿಂತನೆ

ಇದನ್ನೂ ಓದಿ: ಮಹಾನಾಯಕನೊಬ್ಬ 3 ತಿಂಗಳ ಹಿಂದೆ ಚಾಲೆಂಜ್ ಹಾಕಿದ್ದರ ಪರಿಣಾಮ ಇದು; ಆತನನ್ನು ಈಗ ಜೈಲಿಗೆ ಹಾಕಿಸುವೆ -ರಮೇಶ್ ಜಾರಕಿಹೊಳಿ

Published On - 9:00 pm, Wed, 10 March 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ