AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 4 ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚಿಸಿದ ಸರ್ಕಾರ

ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ 4 ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ 4 ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚಿಸಿದ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ವಿವೇಕ ಬಿರಾದಾರ|

Updated on:Nov 21, 2022 | 9:38 PM

Share

ಬೆಂಗಳೂರು: ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ 4 ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ (CM Basavarj Bommai) ಅವರ ಅಧ್ಯಕ್ಷತೆಯಲ್ಲಿ ಇಂದು (ನ.21) ಗೃಹಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು.

  1. ಈ ಟಾಸ್ಕ್​ ಫೋರ್ಸ್​ ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರ್ದೇಶನದಲ್ಲಿ ಕಾರ್ಯ ನಿರ್ವಹಿಸಬೇಕು.
  2. ಟಾಸ್ಕ್​ ಫೋರ್ಸ್​ ಕಾಡಾನೆ ಹಾವಳಿ ಇರುವ ಪ್ರದೇಶದಲ್ಲಿ ​ಗಸ್ತು ತಿರುಗಬೇಕು. ಜನವಸತಿ ಮತ್ತು ಕೃಷಿ ಪ್ರದೇಶ, ಕಾಫಿ ಎಸ್ಟೇಟ್​ಗಳಲ್ಲಿ ಚಲನವಲನ ಗುರುತಿಸಿ ಆನೆಗಳನ್ನು ಹಿಮ್ಮೆಟ್ಟಿಸಬೇಕು.
  3. ಕಾಡಾನೆ ಹಾವಳಿ ಕಂಡು ಬರುವ ಪ್ರದೇಶಗಳ ಹಳ್ಳಿಗಳಲ್ಲಿನ ಸಾರ್ವಜನಿಕರಿಗೆ ಆನಗಳ ಚಲನವಲನ ಕುರಿತು ಮಾಹಿತಿ ನೀಡುವುದಲ್ಲದೆ ಅರಣ್ಯ ಪುದೇಶದ ಒಳಗೆ ಸಂಚರಿಸಿದಂತೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವುದು.
  4. ಪ್ರತಿ ಟಾಸ್ಕ್ ​ಫೋರ್ಸ್​​ಗೆ ಕೇಂದ್ರ ಸ್ಥಾನದಲ್ಲಿ​ ನಿಯಂತ್ರಣ ಕೊಠಡಿ ಸ್ಥಾಪಿಸಬೇಕು. ಮತ್ತು ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ತಿಳಿಸಿರಬೇಕು.
  5. ಆನೆ ಟಾಸ್ಕ್ ​ಫೋರ್ಸ್​ಗೆ ಅಗತ್ಯವಿರುವ ಸಾಮಗ್ರಿ ಪೂರೈಸಬೇಕು. ಅರಣ್ಯ ಪಡೆ ಮುಖ್ಯಸ್ಥರು ವಾಕಿಟಾಕಿ, ಬಂದೂಕು, ಪಟಾಕಿ ಪೂರೈಸಬೇಕು ಎಂದು ತಿಳಿಸಿದೆ.
  6. ಪ್ರಧಾನ ಮುಖ್ಯ, ಅರಣ್ಯ ಸಂರಕ್ಷಣಾಧಿಕಾರಿ ಟಾಸ್ಕ್​​​ ಫೋರ್ಸ್​ಗೆ ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಹಾಗೂ ಸರ್ವಾಜನಿಕ ಜಾಗೃತಿ ಮೂಡಿಸಲು ಉಪಯೋಗಿತ ಸಲಕರಣೆಗಳು ಹಾಗೂ ಇನ್ನಿತರೆ‍ ಅವಶ್ಯಕ ಸಲಕರಣಿ ಮತ್ತು ಸೌಲಭ್ಯಗಳನ್ನು ಒದಗಿಸಬೇಕು.
  7. ಪ್ರಧಾನ ಮುಖ್ಯ, ಅರಣ್ಯ ಸಂರಕ್ಷಣಾಧಿಕಾರಿ ಪ್ರತಿ ಜಿಲ್ಲೆಯ ಟಾಸ್ಕ್​​ ಫೋರ್ಸ್‌ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಬೇಕು.
  8. ಪ್ರತಿ ಜಿಲ್ಲಾ ಟಾಸ್ಕ್ ​​ಫೋರ್ಸ್​ಗೆ 3 ಬೊಲೆರೊ ವಾಹನ, ಕ್ಯಾಂಟರ್​ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ನಿಯೋಜಿಸಬೇಕು. ಆನೆಗಳನ್ನು ಹಿಮ್ಮೆಟ್ಟಿಸುವ ವೇಳೆ ಪೊಲೀಸ್ ಇಲಾಖೆ ನೆರವು ಪಡೆಯಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Mon, 21 November 22