ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರ ಮೇಲೆ ಯಾವುದೇ ನಿಬಂಧನೆ ಹೇರುವಂತಿಲ್ಲ: ರಾಜ್ಯ ಸರ್ಕಾರದಿಂದ ಸೂಚನೆ

TV9 Digital Desk

| Edited By: guruganesh bhat

Updated on:Sep 02, 2021 | 6:51 PM

ಕೊವಿಡ್ ಲಸಿಕೆಯನ್ನು ಎಲ್ಲರಿಗೂ ವಿತರಿಸಬೇಕೆಂಬ ಉದ್ದೇಶದಿಂದ ಯಾವುದೇ ಯೋಜನೆಗೆ ಲಸಿಕಾ ಕಾರ್ಯಕ್ರಮ ಜೋಡಿಸಿದ್ದರೆ ಕೈಬಿಡಿ ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ.

ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರ ಮೇಲೆ ಯಾವುದೇ ನಿಬಂಧನೆ ಹೇರುವಂತಿಲ್ಲ: ರಾಜ್ಯ ಸರ್ಕಾರದಿಂದ ಸೂಚನೆ
ಲಸಿಕೆ ಸಾಂಕೇತಿಕ ಚಿತ್ರ

ಬೆಂಗಳೂರು: ಸಾರ್ವಜನಿಕರಿಗೆ ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಯಾವುದೇ ನಿಬಂಧನೆ ಹೇರದಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಈಕುರಿತು ಅಧಿಕೃತ ಸೂಚನೆ ನೀಡಿದ್ದಾರೆ. ಕೊವಿಡ್ ಲಸಿಕೆಯನ್ನು ಎಲ್ಲರಿಗೂ ವಿತರಿಸಬೇಕೆಂಬ ಉದ್ದೇಶದಿಂದ ಯಾವುದೇ ಯೋಜನೆಗೆ ಲಸಿಕಾ ಕಾರ್ಯಕ್ರಮ ಜೋಡಿಸಿದ್ದರೆ ಕೈಬಿಡಿ ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ. ನೋ ವ್ಯಾಕ್ಸಿನ್, ನೋ ರೇಷನ್ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿ ನಂತರ ಆದೇಶ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಸಿಎಸ್ ರವಿಕುಮಾರ್ ಈ ಸೂಚನೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಸ್ಪಷ್ಟನೆ ಚಾಮರಾನಗರ: ‘ನೋ ವ್ಯಾಕ್ಸಿನ್, ನೋ ರೇಷನ್, ನೋ ಪೆನ್ಷನ್’ ಎಂಬ ಯಾವುದೇ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪೆನ್ಷನ್‌, ರೇಷನ್ ಕಡಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚಾಮರಾಜನರ ಜಿಲ್ಲಾಧಿಕಾರಿ ಲಸಿಕೆ ಇಲ್ಲದಿದ್ದರೆ ಪಡಿತರ ಮತ್ತು ಪೆನ್ಶನ್ ಇಲ್ಲ ಎಂಬ ಆದೇಶ ಹೊರಡಿಸಿದ ಹೊತ್ತಲ್ಲೇ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ,‘ನೋ ವ್ಯಾಕ್ಸಿನ್, ನೋ ರೇಷನ್, ನೋ ಪೆನ್ಷನ್‌’- ಇಂತಹ ಯಾವುದೇ ಆದೇಶ ಸರ್ಕಾರದ ವತಿಯಿಂದ ಘೋಷಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರೇ ಉಚಿತವಾಗಿ ಲಸಿಕೆ ಕೊಡುತ್ತೇವೆ ಎಂದಿದ್ದಾರೆ. ಹೀಗಾಗಿ ಇಂತಹ ಸುದ್ದಿಯನ್ನು ಸಾರ್ವಜನಿಕರು ಯಾವುದೇ ಕಾರಣಕ್ಕೂ ನಂಬಬಾರದು ಎಂದು ತಿಳಿಸಿದರು.

ಇದನ್ನೂ ಓದಿ: 

ಚಿಕ್ಕಮಗಳೂರು: ಕುರಿಗಾವಲು ಉಳಿಸಲು ಕಡೂರಿನಲ್ಲಿ ರೈತರು, ಕುರಿಗಾಹಿಗಳಿಂದ ಬೃಹತ್ ಪ್ರತಿಭಟನೆ

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

(Karnataka Government CS Ravikumar directs do not link covid vaccine distribution to other projects such as ration or pension)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada