ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಘೋಷಿಸಿದ ರಾಜ್ಯ ಸರ್ಕಾರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಹಲವು ದಿನಗಳಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಕೊನೆಗೆ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಮನವಿಗೆ ಸ್ಪಂದಿಸಿದೆ. ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿ ಅತಿಥಿ ಉಪನ್ಯಾಸಕರಿಗೆ ಕೊಂಚ ಸಮಾಧಾನಕರ ಸುದ್ದಿ ಕೊಟ್ಟಿದ್ದಾರೆ.

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಘೋಷಿಸಿದ ರಾಜ್ಯ ಸರ್ಕಾರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2023 | 2:44 PM

ಬೆಂಗಳೂರು, (ಡಿಸೆಂಬರ್ 29): ಅತಿಥಿ ಉಪನ್ಯಾಸಕರ (guest lecturer) ವೇತನವನ್ನು (Salary)  5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ (karnataka government) ನಿರ್ಧರಿಸಿದೆ. ಈ ಬಗ್ಗೆ ವಿಕಾಸಸೌಧದಲ್ಲಿ ಇಂದು (ಡಿಸೆಂಬರ್ 29) ಸುದ್ದಿಗೋಷ್ಠಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂಬಂಧ ಮಾತನಾಡಿದ ಸುಧಾಕರ್, ನಾವು ಅವರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ವರ್ಕ್‌ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡಲಾಗುವುದು. ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುತ್ತೇವೆ. ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಇವರಿಗೆ ಕೃಪಾಂಕ ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ. ಅತಿಥಿ ಉಪನ್ಯಾಸಕರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಅತಿಥಿ ಉಪನ್ಯಾಸಕರು ಮುಷ್ಕರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಈಗಾಗಲೇ ಮುಷ್ಕರದಿಂದ ತೊಂದರೆಯಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ