ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ 2 ಯೋಜನೆ ಸ್ಥಗಿತ! ಏಕೆ?

ಸಾಧು ಶ್ರೀನಾಥ್​

|

Updated on:May 15, 2020 | 6:18 PM

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಆರ್ಥಿಕ ಮಿತವ್ಯಯಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಸೂತ್ರಗಳನ್ನ ಹೆಣೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎರಡು ಯೋಜನೆಗಳನ್ನು ಸ್ಥಗಿತಗೊಳಿಸಿ ಮೂರು ಯೋಜನೆಗಳ ಮರು ವಿನ್ಯಾಸಕ್ಕೆ ಸರ್ಕಾರ ತೀರ್ಮಾನಿಸಿದೆ. ರಾಜ್ಯ ಸರ್ಕಾರದ ಮಾತೃಶ್ರೀ ಯೋಜನೆ ಮತ್ತು ಸಾಂತ್ವನ ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೇಂದ್ರದ ಮಾತೃವಂದನಾ ಯೋಜನೆಯಡಿ ಬಾಣಂತಿಯರಿಗೆ 5000 ರೂ.ಗಳನ್ನು ಕೇಂದ್ರ ಮತ್ತು ರಾಜ್ಯ 60:40ರ ಅನುಪಾತದಲ್ಲಿ ನೀಡುತ್ತಿದ್ದವು. ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರದ ಜೊತೆಗೆ ಮಾತೃಪೂರ್ಣ […]

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ 2 ಯೋಜನೆ ಸ್ಥಗಿತ! ಏಕೆ?

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಆರ್ಥಿಕ ಮಿತವ್ಯಯಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಸೂತ್ರಗಳನ್ನ ಹೆಣೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎರಡು ಯೋಜನೆಗಳನ್ನು ಸ್ಥಗಿತಗೊಳಿಸಿ ಮೂರು ಯೋಜನೆಗಳ ಮರು ವಿನ್ಯಾಸಕ್ಕೆ ಸರ್ಕಾರ ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಮಾತೃಶ್ರೀ ಯೋಜನೆ ಮತ್ತು ಸಾಂತ್ವನ ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೇಂದ್ರದ ಮಾತೃವಂದನಾ ಯೋಜನೆಯಡಿ ಬಾಣಂತಿಯರಿಗೆ 5000 ರೂ.ಗಳನ್ನು ಕೇಂದ್ರ ಮತ್ತು ರಾಜ್ಯ 60:40ರ ಅನುಪಾತದಲ್ಲಿ ನೀಡುತ್ತಿದ್ದವು. ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರದ ಜೊತೆಗೆ ಮಾತೃಪೂರ್ಣ ಯೋಜನೆಯಡಿ ಆಹಾರ ನೀಡುತ್ತಿರುವುದರಿಂದ ಮಾತೃಶ್ರೀ ಯೋಜನೆ ಸ್ಥಗಿತಗೊಳಿಸಲಾಗುತ್ತೆ.

ಕೇಂದ್ರ ಪುರಸ್ಕೃತ ಯೋಜನೆಯಡಿ ಒನ್ ಸ್ಟಾಪ್ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ ಸಾಂತ್ವನ ಯೋಜನೆ ಸ್ಥಗಿತ ಮಾಡಲಾಗುತ್ತೆ. ಭಾಗ್ಯಲಕ್ಷ್ಮೀ ಯೋಜನೆಯನ್ನು ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡು ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಸ್ಪೆಷಲ್ ಸಪೋರ್ಟ್ ಫಾರ್ HIV + ಚಿಲ್ಡ್ರನ್ ಯೋಜನೆಯಡಿ ನಿಗದಿಪಡಿಸಿರುವ ಅನುದಾನ ಫಲಾನುಭವಿಗಳ ಖಾತೆಗೆ ನೇರ ನಗದು ರೂಪದಲ್ಲಿ ಅನುಷ್ಠಾನ ಮಾಡಲಾಗುತ್ತೆ.

ನಗರ ಪ್ರದೇಶಗಳಲ್ಲಿನ 450 ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಸಿಬ್ಬಂದಿಯನ್ನ ಇಲಾಖೆಯಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಿಂದಲೇ ಮರು ವಿನ್ಯಾಸದ ಮೂಲಕ ಹಂಚಿಕೆ ಮಾಡಲಾಗುತ್ತೆ. ಭಾಗ್ಯಲಕ್ಷ್ಮೀ ಯೋಜನೆ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆ ಜತೆ ಒಪ್ಪಂದ ಮಾಡಿಕೊಂಡು ಯೋಜನೆ ಮರು ವಿನ್ಯಾಸಕ್ಕೆ ಸರ್ಕಾರ ತೀರ್ಮಾನಿಸಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada